ETV Bharat / state

ಅತ್ಯಾಚಾರ ಅಮಾನುಷ, ವಿಡಿಯೋ ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ?: ಕುಮಾರಸ್ವಾಮಿ - HD Kumaraswamy slams Cm - HD KUMARASWAMY SLAMS CM

ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ

ಹೆಚ್​ಡಿಕೆ
ಹೆಚ್​ಡಿಕೆ (ETV Bharat)
author img

By ETV Bharat Karnataka Team

Published : May 24, 2024, 10:49 PM IST

Updated : May 24, 2024, 10:56 PM IST

ಬೆಂಗಳೂರು: ಪ್ರಜ್ವಲ್​ ರೇವಣ್ಣ ಅವರನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​​ ಮಾಡಿದ್ದಾರೆ.

''ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇ ಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ. 'ಅತ್ಯಾಚಾರದ ವಿಡಿಯೋ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ' ಎನ್ನುವ ಆಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ'' ಎಂದು ಕುಮಾರಸ್ವಾಮಿ ಸಿಎಂ ಅವರಿಗೆ ಕುಟುಕಿದ್ದಾರೆ.

ಅತ್ಯಾಚಾರ ಅಮಾನುಷ ಸರಿ, ವಿಡಿಯೋ ಹಂಚುವುದೇನು?: ''ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ, ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಮನುಷ್ಯರು ಹೇಳುವ ಮಾತೇ ಇದು? ದಯಮಾಡಿ ನೀವು ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ. ನಿಮ್ಮ ಪಕ್ಕದಲ್ಲಿ ಪೆನ್ ಡ್ರೈವ್ ಹಂಚಿಕೆದಾರ ಕೂತಿದ್ದಾರೆ. ಆ CD ಶಿವು ಚುನಾವಣಾ ಸ್ವಾರ್ಥಕ್ಕಾಗಿ ಹೆಣ್ಮಕ್ಕಳ ಮಾನವನ್ನು ಪೆನ್ ಡ್ರೈವುಗಳಿಗೆ ತುಂಬಿಸಿ ಹಾದಿಬೀದಿಯಲ್ಲಿ ಮಾರಿಕೊಂಡಿದ್ದು ನಿಮಗೆ ಗೊತ್ತಿಲ್ಲವೇ? ಸ್ವಯಂ ಘೋಷಿತ ಸಂವಿಧಾನ ತಜ್ಞ ಬಿರುದಾಂಕಿತರಾದ ನೀವು, ಇಂಥ ಮಾನದ್ರೋಹಿಯನ್ನು ಪಕ್ಕದಲ್ಲೇ ಕೂರಿಸಿಕೊಳ್ಳಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ? ಪ್ರಶ್ನೆ ಮಾಡಿಕೊಳ್ಳಿ'' ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್​ನನ್ನು ಕಳುಹಿಸಿರುವುದು ಅವರೇ ಅಲ್ವಾ?: ದೇವೇಗೌಡರ ಪತ್ರದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ - CM REACTION ON DEVE GOWDA LETTER

''ಪ್ರಜ್ವಲ್ ರೇವಣ್ಣ ಅವರನ್ನು ನಾನೆಂದೂ ಸಮರ್ಥನೆ ಮಾಡಿಲ್ಲ, ಮಾಡುವುದೂ ಇಲ್ಲ. ಪ್ರಕರಣ ಹೊರಬಂದ ಮೊದಲ ದಿನವೇ 'ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು' ಎಂದು ಹೇಳಿದ್ದೇನೆ. ನನ್ನ ಹೇಳಿಕೆ ನಿಮಗೆ ಗೊತ್ತಾಗಲಿಲ್ಲವೇ? ನಿಮಗೆ ಪತ್ರಿಕೆ ಓದುವ ಅಭ್ಯಾಸ ಇಲ್ಲದಿದ್ದರೆ ನಾನೇನು ಮಾಡಲಿ?. ದೇವೇಗೌಡರ ಬಗ್ಗೆ ನೀವು ಕಾರಿಕೊಂಡ ವಿಷದ ಬಗ್ಗೆ ಹೇಳುವುದಾದರೆ; ನನ್ನ ಮಾತಿಗೆ ಗೌರವ ಕೊಟ್ಟು ಪ್ರಜ್ವಲ್ ವಾಪಸ್ ಬಂದು ಎಸ್ಐಟಿ ಮುಂದೆ ಹಾಜರಾಗದಿದ್ದರೆ ಕುಟುಂಬದಿಂದ ಹೊರ ಹಾಕುತ್ತೇನೆ ಎಂದು ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ. ಅವರ ಮಾತೇ ನಮ್ಮ ಕುಟುಂಬದ ಮಾತು'' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ನಮ್ಮ ಮನೆಗಳ ಮೇಲೆ ಕಳ್ಳಕಿವಿ ಇಟ್ಟಿದ್ದೀರಿ: ''ದೇವೇಗೌಡರಿಗೆ ಹೇಳಿಯೇ ವಿದೇಶಕ್ಕೆ ಹೋಗಿದ್ದಾನೆ ಎಂದು ಹೇಳಿದ್ದೀರಿ. ನಿಮಗೆ ಹೇಗೆ ಗೊತ್ತು? ನಿಮ್ಮ ಪಕ್ಷದಲ್ಲೇ ಕೂರುವ ಸಿಡಿ ಶಿವು ಮಾಡುತ್ತಿರುವ ಮಾನಗೇಡಿ ಕೃತ್ಯಗಳು ಗೊತ್ತಾಗೋದಿಲ್ಲ ನಿಮಗೆ!? ಆದರೆ, ದೇವೆಗೌಡರ ಮನೆಯಲ್ಲಿ ನಡೆಯೋದೆಲ್ಲ ನಿಮಗೆ ಗೊತ್ತಾಗುತ್ತದೆಯೇ!? ಅದು ಹೇಗೆ? ನನ್ನ ಮತ್ತು ದೇವೇಗೌಡರ ಮನೆಗೆ ಕಳ್ಳಕಿವಿ ಇಟ್ಟಿದ್ದೀರಿ ಎನ್ನುವ ನನ್ನ ಆರೋಪ ಸತ್ಯ ಎಂದ ಹಾಗಾಯಿತು.. ಅಲ್ಲವೇ? ಅಸತ್ಯ ಹೇಳುವ ಅಗತ್ಯ ನಮಗಿಲ್ಲ. ಅವನು ಕುಟುಂಬದ ಸಂಪರ್ಕದಲ್ಲಿ ಇಲ್ಲ. ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ'' ಎಂದು ಮಾಜಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪೊಲೀಸರಿಗೆ ಶರಣಾಗದಿದ್ದಲ್ಲಿ ಏಕಾಂಗಿಯಾಗುವೆ: ಕುಟುಂಬದಿಂದಲೇ ಹೊರಹಾಕುವುದಾಗಿ ಪ್ರಜ್ವಲ್​​ಗೆ ಎಚ್ಚರಿಕೆ ನೀಡಿದ ದೇವೇಗೌಡ - DEVEGOWDA wrote letter to Prajwal

Last Updated : May 24, 2024, 10:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.