ETV Bharat / state

ಬೆಂಗಳೂರು ನಗರ ಮುಳುಗಿಸಿದ ಕುಖ್ಯಾತಿ ಕಾಂಗ್ರೆಸ್ ಸರ್ಕಾರದ್ದು: ಹೆಚ್​​ಡಿಕೆ - BENGALURU RAIN

ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಅಂತಾ ಹೇಳ್ತಿದಾರೆ. ಆದರೆ ಐದು ಪೈಸೆ ಅನುದಾನ ಇಟ್ಟಿಲ್ಲ. ಬರುವ ಹಣವನ್ನೆಲ್ಲಾ ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿ
ಕೇಂದ್ರ ಸಚಿವ ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Oct 17, 2024, 9:44 PM IST

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾಹೀರಾತುಗಳಿಂದ ಜಾಹೀರಾತುಗೋಸ್ಕರವೇ ನಡೆಯುತ್ತಿರುವ ಸರ್ಕಾರ. ಅಚ್ಚರಿ ಎಂದರೆ ಸರ್ಕಾರದ ವಾಲ್ಮೀಕಿ ಜಯಂತಿ ಜಾಹೀರಾತಿನಲ್ಲಿ ಸತ್ಯಮೇಯ ಜಯತೇ ವಾಕ್ಯ ನಾಪತ್ತೆಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರ ಕೆಲಸದಲ್ಲಿ ಅಸಮರ್ಥ, ಪ್ರಚಾರದಲ್ಲಿ ಮಾತ್ರ ಶರವೇಗದಲ್ಲಿದೆ ಎಂದು ಟೀಕಿಸಿದರು. ಕರ್ನಾಟಕ ರಾಜ್ಯದಲ್ಲಿ ಈಗಿನ ಸರ್ಕಾರದ ವೈಫಲ್ಯಗಳೇ ಎದ್ದು ಕಾಣುತ್ತಿವೆ‌. ಈ ರಾಜ್ಯದಲ್ಲಿ ನಿಜಕ್ಕೂ ಸರ್ಕಾರ ಇದೆಯಾ ಎನ್ನುವ ಅನುಮಾನ ಕಾಡುತ್ತಿದೆ. ಬೆಂಗಳೂರನಲ್ಲಿ ಮಳೆಯ ಅನಾಹುತದಿಂದ ಜನರು ಕಂಗೆಟ್ಟಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರು ಕೂಡ ನಷ್ಟ ಅನುಭವಿಸುತ್ತಿದ್ದಾರೆ‌. ಬೆಳೆಗಳು ನಷ್ಟವಾಗುತ್ತಿವೆ. ಹಿಂಗಾರು ಮಳೆಯಿಂದ ರೈತರು ಸಂಕಷ್ಟ ಸಿಲುಕಿದ್ದಾರೆ‌. ಆದರೆ, ಜನರ ನೆರವಿಗೆ ಸರ್ಕಾರ ಧಾವಿಸುತ್ತಿಲ್ಲ ಎಂದು ಅವರು ದೂರಿದರು.

ಇಡೀ ಬೆಂಗಳೂರು ನಗರವೇ ಪ್ರವಾಹದಲ್ಲಿ ಮುಳುಗಿತು. ಆದರೆ, ಮುಖ್ಯಮಂತ್ರಿಯಾಗಲಿ, ಯಾವೊಬ್ಬ ಸಚಿವರೂ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಕಷ್ಟ ವಿಚಾರಿಸಲಿಲ್ಲ. ಸಿಎಂ ಮಳೆಯ ಬಗ್ಗೆ ಒಂದು ಹೇಳಿಕೆ‌ ಕೂಡ ಕೊಡಲಿಲ್ಲ. ಬೆಂಗಳೂರಲ್ಲಿ ನೀರು ತುಂಬಿದ್ದರೆ ಅರ್ಧ ಗಂಟೆಯಲ್ಲಿ ಖಾಲಿ ಮಾಡೋದು ನಮಗೆ ಗೊತ್ತಿದೆ ಅಂತ ಡಿಸಿಎಂ ಹೇಳುತ್ತಾರೆ. ಜನರಿಗೆ ಊಟ ಇಲ್ಲ, ಮಲಗಲು ಜಾಗ ಇಲ್ಲ, ಮನೆಗಳಲ್ಲಿ ನೀರು ತುಂಬಿದೆ. ಹೊಟೇಲ್‌ನಲ್ಲಿ ಜೀವನ ಸಾಗಿಸುವ ಪರಿಸ್ಥಿತಿ ಇದೆ‌‌. ಈ ಸಮಸ್ಯೆ ಹಲವಾರು ವರ್ಷಗಳಿಂದ ಇದೆ. ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎಂದವರು ಬೆಂಗಳೂರು ನಗರವನ್ನು ಮಳೆಯಲ್ಲಿ ಮುಳುಗಿಸಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರಿನ ಹೆಸರು ಹಾಳು ಮಾಡುವ ಕೆಲಸ ವಿಪಕ್ಷಗಳು ಮಾಡುತ್ತಿವೆ ಎಂದು ಡಿಸಿಎಂ ಹೇಳಿದ್ದಾರೆ. ಅವರು ಬೆಂಗಳೂರು ಉಸ್ತುವಾರಿ ಸಚಿವರಾಗಿ ಒಂದೂವರೆ ವರ್ಷ ಆಯಿತು. ಆದರೆ, ಒಳಚರಂಡಿ ವ್ಯವಸ್ಥೆ ಯಾಕೆ ಸರಿ ಮಾಡಲಿಲ್ಲ, ರಸ್ತೆಗಳು ನದಿಗಳಂತೆ ದೃಶ್ಯ ಮಾಧ್ಯಮಗಳಲ್ಲಿ ಕಾಣುತ್ತಿದ್ದವು. ಇದಕ್ಕೆ ಪ್ರಕೃತಿ ಹೊಣೆಯೇ? ಮಳೆ ಬರುತ್ತದೆ ಎನ್ನುವುದು ಗೊತ್ತಿರಲಿಲ್ಲವೇ?. ಇಷ್ಟೆಲ್ಲ ಅನಾಹುತ ಆಗಿದೆ. ಯಾವ ಕ್ರಮ ಕೈಗೊಳ್ಳುತ್ತೇವೆ ಅಂತ ಸ್ಪಷ್ಟವಾಗಿ ಹೇಳದ ಸರ್ಕಾರ ಪ್ರಚಾರದಲ್ಲಿ ಮಾತ್ರ ಸದಾ ಮುಂದೆ ಇರುತ್ತದೆ. ಜನರಿಗೆ ಮಾನಸಿಕ ಸ್ಥೈರ್ಯ ಹೇಳದೆ ಕೇವಲ ಬಡಾಯಿ ಕೊಚ್ಚಿಕೊಳ್ಳುವ ಇವರಿಗೆ ನಾಚಿಕೆ ಆಗಬೇಕು ವಾಗ್ದಾಳಿ ನಡೆಸಿದರು.

110 ಹಳ್ಳಿಗೆ ನೀರು ನೀಡ್ತಿದ್ದೇವೆ ಅಂತ ಬಡಾಯಿ ಕೊಚ್ಚಿಕೊಂಡಿದ್ದಾರೆ‌. ಅಷ್ಟೂ ಗ್ರಾಮಗಳನ್ನು ಬಿಬಿಎಂಪಿ ವ್ಯಾಪ್ತಿಗೆ ತಂದಿದ್ದು ಮತ್ತು 7 ನಗರಸಭೆಗಳನ್ನು ಬಿಬಿಎಂಪಿಗೆ ಸೇರಿಸಿದ್ದೇ ನಾನು. 2007ರಲ್ಲಿಯೇ 9,000 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದ್ದೆ. ಇವರು ದಿನಕ್ಕೊಂದು ಶಂಕುಸ್ಥಾಪನೆ ಮಾಡುತ್ತಿದ್ದೇನೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ತಿಳಿಸಿದರು.

ನೈಸ್ ರಸ್ತೆಯ ಬಗ್ಗೆ ಸದನ ಸಮಿತಿ ವರದಿ ಏನು ಮಾಡಿದ್ದೀರಿ?: ನೈಸ್ ರಸ್ತೆ ಬಗ್ಗೆ ಡಿಸಿಎಂ ಮಾತನಾಡಿದ್ದಾರೆ. ದೇವೇಗೌಡರು ಅಡ್ಡಿ ಮಾಡಿದ್ದರಿಂದ ರಸ್ತೆ ಅಗಲಿಲ್ಲವಂತೆ. ಯಾರು ಮಾಡಬೇಡಿ ಅಂತ ಹೇಳಿದರು ಇವರಿಗೆ? ಇಷ್ಟು ದಿನ ಯಾಕೆ ಸುಮ್ಮನೆ ಇದ್ದರು? ನೈಸ್ ಗೆ ವಶಪಡಿಸಿಕೊಂಡಿದ್ದ ರೈತರ ಭೂಮಿಯನ್ನು ಕಬಳಿಕೆ ಮಾಡಿ ಡೈನೋಟಿಫೈ ಮಾಡಿಕೊಂಡವರು ಯಾರು? ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ನೈಸ್ ರಸ್ತೆ ಬಗ್ಗೆ ಸದನ ಟಿ.ಬಿ.ಜಯಚಂದ್ರ ನೇತೃತ್ವದ ಸಮಿತಿ ನೀಡಿದ್ದ ವರದಿಯನ್ನು ಏನು ಮಾಡಿದಿರಿ? ಹೊಸಕೆರೆಹಳ್ಳಿ ಬಳಿ ಶೋಭಾ ಡೆವಲಪರ್ಸ್ ಬಿಲ್ಡಿಂಗ್ ಕಾಮಗಾರಿ ನಡೆಯುತ್ತಿದ್ದು, ಅದರ ಪಾಲುದಾರರು ಯಾರಪ್ಪ? ನೈಸ್ ಹೆಸರಿನಲ್ಲಿ ರೈತರ ಜೀವನ ಹಾಳು ಮಾಡಿದವರು ನೀವು ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಎನ್​ಡಿಎ ಕೂಟವೇ ನನ್ನ ಕುಟುಂಬ: ಎನ್​​ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ. ಅಭ್ಯರ್ಥಿ ಬಗ್ಗೆ ಮೈತ್ರಿ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಜೆಡಿಎಸ್ ಬಿಜೆಪಿ ನಾಯಕರು ಸೇರಿ ನಿರ್ಧಾರ ಮಾಡುತ್ತೇವೆ. ಎನ್​​ಡಿಎ ಅಭ್ಯರ್ಥಿ ಗೆಲ್ಲಬೇಕಷ್ಟೇ, ಇದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯದ ಎಲ್ಲಾ ಸಂಸದರಿಗೂ ಹೊಸ ಕಾರು ಕೊಡಲಾಗಿದೆ. ಆದರೆ, ನನಗೆ ಹಾಗೂ ಕೋಲಾರ ಸಂಸದ ಮಲ್ಲೇಶ್ ಬಾಬು ಅವರಿಗೆ ಮಾತ್ರ ಹೊಸ ಕಾರು ಭಾಗ್ಯ ಇಲ್ಲ. ಈ ರೀತಿ ರಾಜಕೀಯ ನಾನು ಮಾಡಿಲ್ಲ, ಕಾಂಗ್ರೆಸ್​ನವರು ಮಾಡುತ್ತಿದ್ದಾರೆ ಎಂದು ಹೆಚ್​ಡಿಕೆ ಆರೋಪಿಸಿದರು.

ಇದನ್ನೂ ಓದಿ: ಹೆಚ್​​ಎಂಟಿ, ಕುದುರೆಮುಖ ಕಾರ್ಖಾನೆ ಬಗ್ಗೆ ರಾಜ್ಯ ಸರ್ಕಾರದಿಂದ ಅಪಪ್ರಚಾರ: ಬಹಿರಂಗ ಚರ್ಚೆಗೆ ರೆಡಿ ಎಂದ ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.