ETV Bharat / state

ಸರ್ಕಾರಿ ನೌಕರರ ಬದುಕನ್ನು ಚುನಾವಣೆ ಸರಕನ್ನಾಗಿ ಮಾಡಿಕೊಳ್ಳುವುದು ಹೇಯ: ಕುಮಾರಸ್ವಾಮಿ ಕಿಡಿ - ಹಳೆ ಪಿಂಚಣಿ ಯೋಜನೆ

ರಾಜ್ಯ ಕಾಂಗ್ರೆಸ್​ ಸರ್ಕಾರ ಸರ್ಕಾರಿ ನೌಕರರಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಕುಮಾರಸ್ವಾಮಿ
ಕುಮಾರಸ್ವಾಮಿ
author img

By ETV Bharat Karnataka Team

Published : Jan 25, 2024, 7:37 PM IST

ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಹಳೆ ಪಿಂಚಣಿ ಯೋಜನೆ (OPS)ಯನ್ನ ತನ್ನ ರಾಜಕೀಯ ಹಿತಾಸಕ್ತಿಗೆ ಅನುಗುಣವಾಗಿ ಜಾರಿಗೆ ತಂದು, ಸರ್ಕಾರಿ ನೌಕರರಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಸರ್ಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರ್ಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರ್ಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರ್ಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರವು 1-4-2006ಕ್ಕೂ ಮೊದಲು ಅಧಿಸೂಚನೆಯಾಗಿ ನೇಮಕಗೊಂಡವರಿಗೆ OPS ಕೊಟ್ಟಿದೆ. ನಂತರ ಎಲ್ಲ ರಾಜ್ಯಗಳು ಈ ಆದೇಶ ಜಾರಿ ಮಾಡುತ್ತಿವೆ. ಕರ್ನಾಟಕದಲ್ಲೂ ಆಗಿದೆ ಅಷ್ಟೇ. ಇದರಲ್ಲಿ ಸರ್ಕಾರದ ಘನಂದಾರಿ ಸಾಧನೆ ಏನೂ ಇಲ್ಲ. ಮೇ ತಿಂಗಳಲ್ಲಿಯೇ OPS ಜಾರಿ ಮಾಡುವ ಭರವಸೆ ನೀಡಿದ್ದರು ಸಿದ್ದರಾಮಯ್ಯ. 2023 ಮೇ 20ರಂದು ಪ್ರಮಾಣ ಸ್ವೀಕರಿಸಿದ ಅವರು, ಸರ್ಕಾರ ಬಂದ ಎರಡೇ ದಿನಕ್ಕೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದಿತ್ತು. ಅವರು ಚುನಾವಣಾ ಫಸಲು ತೆಗೆಯಲು ಹತ್ತು ತಿಂಗಳು ಹೊಂಚು ಹಾಕಿ ಕೂತರು. ಇದು ಚುನಾವಣೆ ಗಿಮಿಕ್ ಅಷ್ಟೇ. ಅನುಮಾನವೇ ಇಲ್ಲ ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಗೊಂಡ 13,000 ನೌಕರರು ಹಳೆ ಪಿಂಚಣಿ ವ್ಯಾಪ್ತಿಗೆ ಬರುತ್ತಾರೆ ಎಂದು ಈ ಆದೇಶ ಹೇಳುತ್ತದೆ. ಈ ಗ್ಯಾರಂಟಿ ಸರ್ಕಾರಕ್ಕೆ ಈ ನಿರ್ಧಾರ ತೆಗೆದುಕೊಳ್ಳುವುದಕ್ಕೆ 10 ತಿಂಗಳೇ ಬೇಕಾಯಿತು. ಮಾತೆತ್ತಿದರೆ ಮೋದಿ ಅವರನ್ನು ನಿಂದಿಸುವ ಸಿದ್ದರಾಮಯ್ಯ ಅವರದ್ದು ಕೆಲಸದಲ್ಲಿ ಆಮೆವೇಗ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಅವರು ಕುಟುಕಿದ್ದಾರೆ.

ಎರಡು ನಾಲಿಗೆಯ ಕಾಂಗ್ರೆಸ್​ನವರು ನುಡಿದಂತೆ ನಡೆದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಾರೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಷ್ಟು ನೌಕರರಿಗೆ OPS ನೀಡುವುದಾಗಿ ಭರವಸೆ ನೀಡಿತ್ತು? ಆದರೆ, ಸರ್ಕಾರದ ಆದೇಶದಿಂದ 13,000 ನೌಕರರಿಗೆ ಮಾತ್ರ OPS ಭಾಗ್ಯ ಕೊಡುತ್ತಿದೆ. ಉಳಿದವರು ಅಭಾಗ್ಯವಂತರೇ? ಹೋಗಲಿ, OPSಗೆ ಅರ್ಹ ನೌಕರರು ಎಷ್ಟಿದ್ದಾರೆ? ಸರ್ಕಾರಕ್ಕೆ ಮಾಹಿತಿ ಇದೆಯಾ? ಎಂದು ಹೆಚ್​ಡಿಕೆ ಪ್ರಶ್ನಿಸಿದ್ದಾರೆ.

ಚುನಾವಣೆ ಸರಕನ್ನಾಗಿ ಮಾಡಿಕೊಳ್ಳುವುದು ಹೇಯ : ಹೇಳುವುದು ಒಂದು, ಮಾಡುವುದು ಇನ್ನೊಂದು ಎನ್ನುವ ತನ್ನ ಪರಂಪರಾಗತ ವರ್ತನೆಯನ್ನು ಕಾಂಗ್ರೆಸ್ ಇನ್ನಾದರೂ ಬದಲಿಸಿಕೊಳ್ಳಬೇಕು. ಪ್ರಣಾಳಿಕೆ ಮತ್ತು ಬಜೆಟ್​ನಲ್ಲಿ ಭರವಸೆ ನೀಡಿದಂತೆ ಸರ್ಕಾರಿ ನೌಕರರಿಗೆ OPS ಕೊಡಲೇಬೇಕು. ಅದನ್ನು ಬಿಟ್ಟು ನೌಕರರ ಕಣ್ಣಿಗೆ ಮಣ್ಣೆರಚುವುದು ಸರಿಯಲ್ಲ. ನೌಕರರ ಬದುಕನ್ನು ಚುನಾವಣೆ ಸರಕನ್ನಾಗಿ ಮಾಡಿಕೊಳ್ಳುವುದು ಹೇಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಾಸಾಶನಕ್ಕಾಗಿ 5 ಕಿ.ಮೀ ದೂರ ತೆವಳಿದ ವೃದ್ಧೆ; ಗ್ಯಾರಂಟಿ ಕೊಟ್ಟ ಸರ್ಕಾರಕ್ಕೆ ಕರುಣೆ ಇಲ್ಲವೇ?-ಹೆಚ್​​ಡಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.