ETV Bharat / state

ಸುಮಲತಾ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆ: ಹೆಚ್​.ಡಿ.ಕುಮಾರಸ್ವಾಮಿ - H D Kumaraswamy - H D KUMARASWAMY

ಸುಮಲತಾ ಅವರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುಮಲತಾ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆ: ಹೆಚ್​.ಡಿ.ಕುಮಾರಸ್ವಾಮಿ

author img

By ETV Bharat Karnataka Team

Published : Apr 26, 2024, 9:36 PM IST

ಮಂಡ್ಯ: ಚುನಾವಣೆ ಪ್ರಚಾರಕ್ಕಾಗಿ ಸುಮಲತಾ ಅವರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆ, ಅವರು ಬರಲಿಲ್ಲ ಎಂದು ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಪರ ಪ್ರಚಾರಕ್ಕೆ ಯಾರೂ ನನ್ನನ್ನು ಕರೆದಿಲ್ಲ ಎಂಬ ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಅವರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೇನೆ. ಇದಕ್ಕಿಂತ ಇನ್ನೇನು ಮಾಡಬೇಕು?. ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾರನ್ನು 2 ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ. ಆದರೆ ಅವರು ಯಾಕೆ ಬರಲಿಲ್ಲ ಎಂಬುದು ಗೊತ್ತಿಲ್ಲ ಎಂದರು.

ಸುಮಲತಾ ಕುಮಾರಸ್ವಾಮಿಗೆ ಸಪೋರ್ಟ್ ಮಾಡಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, ದೇವೇಗೌಡರು ಯಾಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಮಾಹಿತಿ ಕೊರತೆ ಆಗಿರಬೇಕು ಅನಿಸುತ್ತೆ. ಈ ಕ್ಷೇತ್ರದಲ್ಲಿ ಪಕ್ಷಭೇದ ಮರೆತು ಎಲ್ಲರೂ ನನ್ನ ಪರವಾಗಿ ಕೆಲಸ ಮಾಡಿದ್ದಾರೆ. ಯಾರೂ ವಿರೋಧ ಮಾಡಿಲ್ಲ, ಎಲ್ಲರೂ ನನಗೆ ಸಹಾಯ ಮಾಡಿದ್ದಾರೆ. ಅಂಬರೀಶ್ ಅಭಿಮಾನಿಗಳೂ ಸಹ ನನಗೆ ಸಹಾಯ ಮಾಡಿದ್ದಾರೆ. ಈ ಬಾರಿ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಸುಮಲತಾ ಕುಮಾರಸ್ವಾಮಿಗೆ ಸಪೋರ್ಟ್ ಮಾಡಿಲ್ಲ ಎಂಬ ದೇವೇಗೌಡರ ಹೇಳಿಕೆ ವಿಚಾರಕ್ಕೆ ಮದ್ದೂರಿನಲ್ಲಿ ಪ್ರತಿಕ್ರಿಯಿಸಿದ್ದ ಸುಮಲತಾ, ಮಾಜಿ ದೇವೇಗೌಡರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅವರು ದೊಡ್ಡವರು, ಅವರಿಗೆ ಸರಿಯಾದ ಮಾಹಿತಿ ಇಲ್ಲದೆ ಆ ರೀತಿ ಹೇಳಿದ್ದಾರೆ. ಆದರೆ ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಸ್ವತಂತ್ರ ಸಂಸದೆಯಾಗಿ ನನ್ನ‌ ಜವಾಬ್ದಾರಿಯನ್ನು ನಾನು ನಿರ್ವಹಿಸಿದ್ದೀನಿ. ಮೋದಿಯವರು ಪ್ರಧಾನಿಯಾಗಬೇಕೆಂಬ ಉದ್ದೇಶದಿಂದ ನಾನು ಗೆದ್ದಂತಹ ಸೀಟ್​ ತ್ಯಾಗ ಮಾಡಿದ್ದೇನೆ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಎನ್‌ಡಿಎಗೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೊಡ್ಡರಸಿನಕೆರೆ ಗ್ರಾಮದಲ್ಲಿ ಸಂಸದೆ ಸುಮಲತಾ ಅಂಬರೀಶ್‌ ಮತದಾನ - Mandya MP Sumalatha Ambarish

ETV Bharat Logo

Copyright © 2024 Ushodaya Enterprises Pvt. Ltd., All Rights Reserved.