ETV Bharat / state

ಕೆಂಪೇಗೌಡರು ಯಾರ ಸ್ವತ್ತೂ ಅಲ್ಲ, ಗೌರವ ಇದ್ದರೆ ಬೆಂಗಳೂರು ಕೆರೆಗಳನ್ನು ರಕ್ಷಣೆ ಮಾಡಲಿ: ಹೆಚ್.ಡಿ.ಕುಮಾರಸ್ವಾಮಿ - HD Kumaraswamy

ನಾಡಪ್ರಭು ಕೆಂಪೇಗೌಡರ ಬಗ್ಗೆ ಕಾಂಗ್ರೆಸ್​ ಸರ್ಕಾರಕ್ಕೆ ಗೌರವ ಇದ್ದರೇ ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Jun 27, 2024, 9:29 AM IST

ಬೆಂಗಳೂರು/ ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತೂ ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದರು. ರಾಜ್ಯ ಸರ್ಕಾರ ಜಯಂತಿಗೆ ಕರೆಯದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ ಎಂದು ಹೇಳಿದರು.

ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆದಾಗಲೂ ಸಹ ಆ ನಗರಕ್ಕೆ ಕೊಡುಗೆ ಕೊಟ್ಟಿದ್ದೇನೆ. ಕೆಂಪೇಗೌಡರ ಹಿರಿಮೆಗೆ ಧಕ್ಕೆ ಆಗದ ರೀತಿಯಲ್ಲಿ ಕೆಲಸ ಮಾಡಿದ್ದೇನೆ. ಕೆಂಪೇಗೌಡರಿಗೆ ಯಾವ ರೀತಿ ಗೌರವ ಸಲ್ಲಿಸಬೇಕೋ ಹಾಗೆ ನಡೆದುಕೊಂಡಿದ್ದೇನೆ ಎಂದರು.

ಕೆಂಪೇಗೌಡರು ಕಟ್ಟಿಸಿದ ಕೆರೆಗಳನ್ನು ರಕ್ಷಿಸಿ: ಬೆಂಗಳೂರು ನಗರದ ಬಗ್ಗೆ ಇವತ್ತು ವಿಶ್ವದಲ್ಲೇ ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಕೆಂಪೇಗೌಡರು. ಅವರು ಕಟ್ಟಿರುವ ಕೆರೆಗಳನ್ನು ಈಗಿನ ದಿನಗಳಲ್ಲಿ ಸ್ವಾರ್ಥಕ್ಕೆ ಕೆಲವರು ನುಂಗಿದ್ದಾರೆ. ಈಗಲಾದರೂ ಆ ಕೆರೆಗಳನ್ನು ಕಾಪಾಡುವ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಮೇಕೆದಾಟು ಕಟ್ಟಬೇಕು, ಕುಡಿವ ನೀರು ತರುತ್ತೇವೆ ಎಂದೆಲ್ಲಾ ಹೇಳುತ್ತಾರೆ. ಆದರೆ, ನಗರದ ಜಲಮೂಲಗಳಾಗಿದ್ದ ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಈಗಲೇ ಕುಡಿಯಲು ನೀರಿಲ್ಲದೇ ಜನರು ಬೆಂಗಳೂರಿನಲ್ಲಿ ಪರದಾಡುವ ಪರಿಸ್ಥಿತಿ ಇದೆ. 15 ವರ್ಷವಾದ ಮೇಲೆ ಬೆಂಗಳೂರಿನ ಸ್ಥಿತಿ ಏನಾಗುತ್ತದೋ ಗೊತ್ತಿಲ್ಲ. ಈ ಸರ್ಕಾರ ನ್ಯಾಯಯುತವಾಗಿ ಕೆಂಪೇಗೌಡರ ಜಯಂತಿ ಆಚರಣೆ ಮಾಡೋದಾದರೆ ಆ ಕೆರೆಗಳನ್ನು ರಕ್ಷಣೆ ಮಾಡುವಂತಹ ಕೆಲಸ ಮಾಡಲಿ. ಮಳೆ ನೀರನ್ನು ಸರಿಯಾಗಿ ಬಳಸಿಕೊಳ್ಳುವತ್ತ ಚಿಂತನೆ ಮಾಡಲಿ. ಇಷ್ಟು ಮಾಡಿದರೆ ನಾನು ಸರ್ಕಾರಕ್ಕೆ ಸಲ್ಯೂಟ್ ಮಾಡುತ್ತೇನೆ ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ಸ್ಪರ್ಧೆ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್, ಬಿಜೆಪಿ ಅಭ್ಯರ್ಥಿ ಅಂತಲ್ಲ, ಎನ್​ಡಿಎ ಮೈತ್ರಿಕೂಟದ ಅಭ್ಯರ್ಥಿ ಒಮ್ಮತವಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಹೆಚ್​ಡಿಕೆ ಮಾಹಿತಿ ನೀಡಿದರು. ಇನ್ನೂ ಸಾಕಷ್ಟು ಸಮಯ ಇದೆ. ನಾವು ನಿರ್ಧಾರ ಮಾಡುತ್ತೇವೆ. ಮೈತ್ರಿ ಅಭ್ಯರ್ಥಿ ಅಲ್ಲಿ ಸ್ಪರ್ಧೆ ಮಾಡುತ್ತಾರೆ. ಬಿಜೆಪಿ -ಜೆಡಿಎಸ್ ಎನ್ನುವ ವಿಚಾರ ಅಲ್ಲಿ ಬರೋದೇ ಇಲ್ಲಾ. ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡ್ತಾರೆ ಎಂದರು.

ಇದನ್ನೂ ಓದಿ: 'ಹಿರಿತನ, ಬುದ್ಧಿಮತ್ತೆ, ಚಾರಿತ್ರ್ಯ ಪರಿಗಣಿಸಿದರೆ ಹಲವರು ಉನ್ನತ ಸ್ಥಾನದಲ್ಲಿರುತ್ತಿದ್ದರು': ಆರ್.ವಿ. ದೇಶಪಾಂಡೆ ಒಡಲಾಳದ ಇಂಗಿತ! - RV Deshpande

ETV Bharat Logo

Copyright © 2024 Ushodaya Enterprises Pvt. Ltd., All Rights Reserved.