ಬೆಂಗಳೂರು: ನಗರದಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತಿಪ್ಪಣ್ಣ (33) ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ಟೇಬಲ್ ಎಂದು ತಿಳಿದುಬಂದಿದೆ.
ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣ ಮೂಲತಃ ವಿಜಯಪುರದವರಾಗಿದ್ದು, ನಗರದ ನಾಗನಾಥಪುರದ ಕೃಷ್ಣಪ್ಪ ಗಾರ್ಡನ್ನಲ್ಲಿ ವಾಸವಾಗಿದ್ದರು. ತನಗೆ ಹೆಂಡತಿ ಕಿರುಕುಳ ನೀಡುತ್ತಿದ್ದಾಳೆ ಹಾಗೂ ಮಾವನೂ (ಪತ್ನಿಯ ತಂದೆ) ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬೈಯ್ಯಪ್ಪನಹಳ್ಳಿ ರೈಲ್ವೇ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕಾನ್ಸ್ಟೇಬಲ್ ಆತ್ಮಹತ್ಯೆ ಕುರಿತಂತೆ ಬೈಯ್ಯಪ್ಪನಹಳ್ಳಿ ರೈಲ್ವೇ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಆತ್ಮಹತ್ಯೆ ಪರಿಹಾರವಲ್ಲ; ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಯಾರಾದರೂ ನಿಮ್ಮ ನೋವನ್ನು ಕೇಳಲು ಇರುತ್ತಾರೆ. ಅದಕ್ಕಾಗಿ ಸ್ನೇಹ ಫೌಂಡೇಶನ್‌ಗೆ ಕರೆ ಮಾಡಿ - 04424640050 (24x7 ಲಭ್ಯವಿದೆ) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ - 9152987821, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10ರ ವರೆಗೆ ಲಭ್ಯವಿರುತ್ತದೆ).
ಇದನ್ನೂ ಓದಿ: ಬೆಂಗಳೂರಿನಲ್ಲಿ ಜಾಮೀನು ಮಾಫಿಯಾ: ನಕಲಿ ಜಾಮೀನಿಗೆ ₹5 ಸಾವಿರ! ದಂಧೆ ಬಯಲಿಗೆಳೆದ ಪೊಲೀಸರು, 13 ಮಂದಿ ಸೆರೆ