ETV Bharat / state

8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ - Transfer Through Counselling - TRANSFER THROUGH COUNSELLING

ಎಂಟು ವರ್ಷಗಳ ನಂತರ ಆರೋಗ್ಯ ಇಲಾಖೆ ಕೌನ್ಸಿಲಿಂಗ್​ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಸಲು ಮುಂದಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ETV Bharat)
author img

By ETV Bharat Karnataka Team

Published : Jun 16, 2024, 9:09 AM IST

Updated : Jun 16, 2024, 9:44 AM IST

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಯಲಿದೆ. 8 ವರ್ಷಗಳಿಂದ ಎದುರು ನೋಡುತ್ತಿದ್ದ ಅರ್ಹ ವೈದ್ಯರು, ಸಿಬ್ಬಂದಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಕಳೆದ ವರ್ಷ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿ ವರ್ಗಾವಣೆಗೆ ಬೇಡಿಕೆ ಇಟ್ಟಿದ್ದರು. ಸಾಮಾನ್ಯ ವರ್ಗಾವಣೆ ನಡೆಸಿದರೂ ಎಲ್ಲರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗಿರಲಿಲ್ಲ.

2016ರಿಂದ ಆರೋಗ್ಯ ಇಲಾಖೆಯಲ್ಲಿ ಸಮರ್ಪಕವಾದ ವರ್ಗಾವಣೆ ನಡೆದಿರಲಿಲ್ಲ. ಸಾಮಾನ್ಯ ವರ್ಗಾವಣೆಯಲ್ಲಿ ಅರ್ಹರಿಗೆ ನ್ಯಾಯ ದೊರೆಯುವುದಿಲ್ಲ ಎಂಬುದನ್ನು ಮನಗಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬಾರಿ ಪೂರ್ಣ ಪ್ರಮಾಣದ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದರು.

ಗ್ರೂಪ್ 'ಎ' ಯಿಂದ ಹಿಡಿದು ಗ್ರೂಪ್ 'ಡಿ' ಯಲ್ಲಿ ಬರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಕೌನ್ಸಿಲಿಂಗ್​ ಮೂಲಕವೇ ವರ್ಗಾವಣೆ ನಡೆಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಜುಲೈ 31ರೊಳಗೆ ಕೌನ್ಸಿಲಿಂಗ್ ಪೂರ್ಣಗೊಳ್ಳಲಿದೆ. ಇಲಾಖೆಯಲ್ಲಿ ಗುರುತಿಸಿರುವ ತಜ್ಞ ಹುದ್ದೆಗಳಲ್ಲಿ ವೈದ್ಯರುಗಳು ತಜ್ಞತೆಗೆ ಅನುಗುಣವಾಗಿ ಕಾರ್ಯನಿರ್ವಹಿಸದೇ ಬೇರೆ ತಜ್ಞತೆ/ಇತರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರ ಮಾಹಿತಿ ಸಲ್ಲಿಸುವಂತೆ ತಿಳಿಸಲಾಗಿದೆ.

ಮೂರು ವರ್ಷ ಸೇವಾವಧಿ ಪೂರೈಸಿರುವ ವೈದ್ಯರು, ನಾಲ್ಕು ವರ್ಷ ಪೂರೈಸಿರುವ ಗ್ರೂಪ್ 'ಬಿ' ನೌಕರರು, 5 ವರ್ಷ ಪೂರೈಸಿದ ಗ್ರೂಪ್ 'ಸಿ' ನೌಕರರು ಹಾಗೂ 7 ವರ್ಷ ಸೇವಾವಧಿ ಪೂರೈಸಿರುವ ಗ್ರೂಪ್ 'ಡಿ' ನೌಕರರು ಜೂನ್ ತಿಂಗಳ ಅಂತ್ಯದೊಳಗೆ ಮಾಹಿತಿ ಸಲ್ಲಿಸುವಂತೆ ಹೇಳಲಾಗಿದೆ. ಈ ಮೇಲಿನ ಸೇವಾವಧಿ ಪೂರೈಸಿರುವ ವೈದ್ಯರು ಹಾಗೂ ಸಿಬ್ಬಂದಿಯ ಸ್ಥಾನಗಳಿಗೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಬಿಬಿಎಂಪಿ ತೆರವು ಕಾರ್ಯಾಚರಣೆ: 3800ಕ್ಕೂ ಹೆಚ್ಚು ಅನಧಿಕೃತ ಫ್ಲೆಕ್ಸ್ ತೆರವು, 48 ಎಫ್ಐಆರ್ ದಾಖಲು - Flexes evacuation operation

Last Updated : Jun 16, 2024, 9:44 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.