ETV Bharat / state

ಮಂಗಳೂರು ಆಯುಷ್ ಆಸ್ಪತ್ರೆಗೆ ಉಪಕರಣ ಖರೀದಿ ಪ್ರಕರಣ; ಪ್ರಧಾನ ಕಾರ್ಯದರ್ಶಿಗಳ ಮಟ್ಟದ ತನಿಖೆಗೆ ಆರೋಗ್ಯ ಸಚಿವರ ಆದೇಶ - Dinesh Gundu Rao - DINESH GUNDU RAO

ಮಂಗಳೂರಿನ ಆಯುಷ್​ ಇಲಾಖೆಯ ಉಪಕರಣ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತರು ನೀಡಿರುವ ದೂರು ಆಧರಿಸಿ ಆರೋಗ್ಯ ಸಚಿವರು ತನಿಖೆಗೆ ಆದೇಶ ಹೊರಡಿಸಿದ್ದಾರೆ.

HEALTH MINISTER DINESH GUNDU RAO
ತನಿಖೆಗೆ ಆದೇಶಿಸಿದ ಆರೋಗ್ಯ ಸಚಿವರು (ETV Bharat)
author img

By ETV Bharat Karnataka Team

Published : Sep 3, 2024, 1:32 PM IST

Updated : Sep 3, 2024, 1:40 PM IST

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ 50 ಬೆಡ್ ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಗೆ 28 ಲಕ್ಷ ರೂಪಾಯಿ ವೆಚ್ಚದ ಸಿಎಸ್.ಆರ್ ಯೋಜನೆಯ ಪ್ರಕರಣದಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಧಾನ ಕಾರ್ಯದರ್ಶಿಗಳ ಮಟ್ಟದ ತನಿಖೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ.

ಈ ಪ್ರಕರಣದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೂಲಂಕಷವಾದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಆದೇಶಿಸಿದ್ದಾರೆ.

Dinesh Gundu Rao orders investigation
ತನಿಖೆಗೆ ಆದೇಶಿಸಿದ ಆರೋಗ್ಯ ಸಚಿವರು (Minister Gundu Rao LETTER)

ಪ್ರಕರಣ ಕುರಿತಂತೆ ಮಂಗಳೂರು ಜಿಲ್ಲಾ ಆಯುಷ್ ಅಧಿಕಾರಿ ಖುದ್ದು ಸಚಿವರನ್ನ ಭೇಟಿ ಮಾಡಿ ಉದ್ದೇಶಪೂರ್ವಕವಾಗಿ ಆರೋಪಗಳನ್ನ ಹೊರಿಸಲಾಗುತ್ತಿದ್ದು, ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ದೂರಿದ್ದಾರೆ.‌ ಸಾಮಾಜಿಕ ಕಾರ್ಯಕರ್ತರು ಆಯುಷ್ ಆಸ್ಪತ್ರೆಯ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗಿದ್ದಾರೆ. ಅನಗತ್ಯ ದೂರುಗಳನ್ನ ಸಲ್ಲಿಸಿ ಅಡ್ಡಿಪಡಿಸುತ್ತಿದ್ದಾರೆ. ಸಿಎಸ್.ಆರ್ ಯೋಜನೆಯ ಮೂಲಕ ಹಣವನ್ನ ತಂದು ಆಯುಷ್ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗಿತ್ತು. ಆದರೆ ಅವರು ತಮ್ಮ ವೈಯಕ್ತಿಕ ಹಿತಾಸಕ್ತಿಯ ರಕ್ಷಣೆಗಾಗಿ ಸರ್ಕಾರಿ ಕಾರ್ಯಕ್ಕೆ ಅಡ್ಡಿಯುಂಟುಮಾಡಿದ್ದಾರೆ ಎಂದು ದೂರಿದ್ದರು.

ಇನ್ನೊಂದಡೆ ಈ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವು ಕೇಳಿಬಂದಿತ್ತು. ಆರೋಪ ಪ್ರತ್ಯಾರೋಪಗಳು ಬಂದ ಹಿನ್ನೆಲೆಯಲ್ಲಿ ಪ್ರಕರಣದ ಕೂಲಂಕಷ ತನಿಖೆಗೆ ಆರೋಗ್ಯ ಸಚಿವರು ಆದೇಶಿಸಿದ್ದಾರೆ.‌

ಆರೋಪದಲ್ಲಿ ಸತ್ಯಾಸತ್ಯತೆ ಇದೆಯೇ ಅಥವಾ ಉದ್ದೇಶಪೂರ್ವಕವಾಗಿ ದೂರು ಸಲ್ಲಿಸಲಾಗಿದೆಯೇ ಎಂಬುದರ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶದಲ್ಲಿ ಹೇಳಲಾಗಿದೆ. ಅಲ್ಲದೇ ಪ್ರಕರಣದಲ್ಲಿ ಆಯುಷ್ ಅಧಿಕಾರಿಗಳು ತಪ್ಪು ಎಸಗಿದ್ದರೆ ಶಿಸ್ತುಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿ, ಒಂದು ವೇಳೆ ಆಯುಷ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ದುರುದ್ದೇಶದಿಂದ ದೂರುದಾರರು ಆರೋಪಗಳನ್ನ ಮಾಡಿದ್ದಾರೆ ಎಂದು ಕಂಡುಬಂದರೆ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಆದೇಶದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲರ ಅಂಕಿತ ಮಾತ್ರ ಬಾಕಿ: ಸಚಿವ ದಿನೇಶ್ ಗುಂಡೂರಾವ್ - Protection of medical personnel

Last Updated : Sep 3, 2024, 1:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.