ETV Bharat / state

ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ​: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ - Dinesh Gundu Rao

ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳನ್ನು ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಮುಂದಾಗಿವೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಗೋಪಾಲಪುರದಲ್ಲಿ ಓವಿ ಸಾಧನಗಳನ್ನು ಅಳವಡಿಸಲಾಗಿದೆ.

Installation of Ovi Trap Devices
ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ (ETV Bharat)
author img

By ETV Bharat Karnataka Team

Published : Aug 26, 2024, 4:51 PM IST

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (ETV Bharat)

ಬೆಂಗಳೂರು : ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಖೆಡ್ಡಾ ತೋಡಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದೆ. ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್‌ ಸಾಧನಗಳನ್ನು ಬೆಂಗಳೂರಿನ ಗೋಪಾಲಪುರದಲ್ಲಿ ಅಳವಡಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನು ಮನೆ, ಮನೆಗಳಿಗೆ ಅಳವಡಿಸಲಾಗಿದೆ.

Installation of Ovi Trap Devices
ಓವಿ ಟ್ರ್ಯಾಪ್ ಸಾಧನವನ್ನು ಅಳವಡಿಸುತ್ತಿರುವುದು (ETV Bharat)

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈಡಿಸ್ ಸೊಳ್ಳೆಗಳನ್ನು ನಾಶಪಡಿಸುವ ಬಯೋ ಸಾಧನಗಳನ್ನು ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣವಾದರೆ, ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಮಿಕ ರೋಗಗಳನ್ನೂ ಕಂಟ್ರೋಲ್​ಗೆ ತರಬಹುದು. ಮುಂಬೈನ ಧಾರಾವಿ ಕೊಳಗೇರಿ ಪ್ರದೇಶದಲ್ಲೂ ಈ ಪ್ರಯೋಗ ನಡೆಯುತ್ತಿದೆ. ಅದೇ ರೀತಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತರೆ, ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Installation of Ovi Trap Devices
ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ​ (ETV Bharat)

ಏನಿದು ಬಯೋ ಟ್ರ್ಯಾಪ್ ಸಾಧನ: ಇದೊಂದು ಮಡಿಕೆ ಆಕಾರದ ಸಾಧನವಾಗಿದೆ. ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರೆಸಲಾಗುತ್ತದೆ. ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನು ಆಕರ್ಷಿಸಿ ಸಾಯಿಸುತ್ತದೆ. ಈಡಿಸ್ ಸೊಳ್ಳೆಗಳು ಹಾಗೂ ಸೊಳ್ಳೆಗಳ ಮೊಟ್ಟೆಗಳನ್ನು ನಾಶಪಡಿಸುತ್ತದೆ. ಬಯೋ ಟ್ರ್ಯಾಪ್ ಬಳಕೆಯಿಂದ ಶೇಕಡಾ 60ರಷ್ಟು ಸೊಳ್ಳೆಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಡೆಂಗ್ಯೂ ಜ್ವರದ ಸಾಮಾನ್ಯ, ಗಂಭೀರ ಲಕ್ಷಣಗಳೇನು? ಚೇತರಿಕೆ ನಂತರದ ಮುನ್ನೆಚ್ಚರಿಕೆ ಕ್ರಮಗಳು ಹೀಗಿವೆ - Dengue Fever

ETV Bharat Logo

Copyright © 2024 Ushodaya Enterprises Pvt. Ltd., All Rights Reserved.