ETV Bharat / state

ಡೆಂಗ್ಯೂ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಿ: ದಿನೇಶ್ ಗುಂಡೂರಾವ್ - Dinesh Gundu Rao

ಡೆಂಗ್ಯೂ ಹಾಟ್​ಸ್ಪಾಟ್​ಗಳನ್ನು ಪತ್ತೆ ಹಚ್ಚಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸಚಿವ ದಿನೇಶ್​ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Health Minister Dinesh Gundurao
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ (ETV Bharat)
author img

By ETV Bharat Karnataka Team

Published : Jul 4, 2024, 9:34 PM IST

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ (ETV Bharat)

ಬೆಂಗಳೂರು: ಡೆಂಗ್ಯೂ ನಿಯಂತ್ರಣ ಕ್ರಮಗಳ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳಿಗೆ ಸೂಚನೆ ನೀಡಿದರು.

ವಿಕಾಸಸೌಧದಲ್ಲಿ ಇಂದು ಸಂಜೆ ಜಿಲ್ಲಾಧಿಕಾರಿಗಳು, ಸಿಇಒ ಹಾಗೂ ಸ್ಥಳೀಯ ಪಾಲಿಕೆಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ಡೆಂಗ್ಯೂ ಹಾಟ್ ಸ್ಪಾಟ್​ಗಳನ್ನು ಪತ್ತೆ ಹಚ್ಚಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.‌

ಎಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತವೆಯೋ ಅಂತಹ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರಯಲು ಸಲಹೆ ನೀಡಿದರು. ಇಂಥ ಪ್ರದೇಶಗಳಲ್ಲಿ ಯಾರಿಗೆ ಜ್ವರ ಕಂಡುಬಂದರೂ ಕಡ್ಡಾಯವಾಗಿ ಡೆಂಗ್ಯೂ ಟೆಸ್ಟಿಂಗ್​ಗೆ ಒಳಪಡಿಸಿ. ಆರಂಭದಲ್ಲೇ ಡೆಂಗ್ಯೂ ಪತ್ತೆಯಾದರೆ ಚಿಕಿತ್ಸೆ ನೀಡಿ ಗುಣಪಡಿಸಬಹುದು. ವಿಳಂಬವಾದಾಗ ಸಾವುಗಳು ಸಂಭವಿಸುತ್ತವೆ. ಡೆಂಗ್ಯೂನಿಂದ ಸಾವುಗಳಾಗಬಾರದು. ಸಾವುಗಳಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಆದ್ಯತೆಯಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜನರಿಗೆ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಮುಂದಾಗಬೇಕು.‌ ಮನೆ ಮನೆಗೆ ಆಶಾ ಕಾರ್ಯಕರ್ತರು ಭೇಟಿ ಮಾಡಬೇಕು. ಮೆಡಿಕಲ್ ಆಫಿಸರ್ಸ್ ಸ್ಕೂಲ್​ಗಳಿಗೆ ಭೇಟಿ ನೀಡಿ ವಿಜ್ಞಾನ ಶಿಕ್ಷಕರ ಮೂಲಕ ಮಕ್ಕಳಲ್ಲಿ ಡೆಂಗ್ಯೂ ಕುರಿತು ತಿಳಿಹೇಳಬೇಕು. ಪ್ರಮುಖವಾಗಿ, ಲಾರ್ವಾ ಉತ್ಪತ್ತಿ ಕಂಡುಬಂದಲ್ಲಿ, ಅದನ್ನ ನಾಶಪಡಿಸುವ ಕೆಲಸ ಆದ್ಯತೆಯ ಮೇಲೆ ಕೈಗೊಳ್ಳಿ ಎಂದರು.

ಜಿಲ್ಲಾವಾರು ಡೆಂಗ್ಯೂ ಕೇಸ್​ಗಳನ್ನು ಪ್ರಕಟಿಸಲು ಹೇಳಿದ ಸಚಿವರು, ಶಿಕ್ಷಣ ಇಲಾಖೆ ಸೇರಿ ಎಲ್ಲಾ ಇಲಾಖೆಯವರು ಕೂಡ ವಾರಕ್ಕೆ ಒಂದು ದಿನ ಶುಕ್ರವಾರ ಫೀಲ್ಡ್​​ಗಿಳಿದು ಕೆಲಸ ಮಾಡ್ಬೇಕು. ಒಂದು‌ ಗಂಟೆಯ ಕಾಲವಾದರೂ ಡೆಂಗ್ಯೂ ನಿವಾರಣೆಗೆ ಮೀಸಲಿಡಲು ಜಿಲ್ಲಾಮಟ್ಟದ ಅಧಿಕಾರಿಗಳು ಮುಂದಾಗಬೇಕು.‌ ಡೆಂಗ್ಯೂ ಟೆಸ್ಟ್​ಗೆ ನಿಗದಿ ಮಾಡಿರುವ ದರವನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ‌ ವಹಿಸುವಂತೆಯೂ ತಾಕೀತು ಮಾಡಿದರು.

ಈಡಿಸ್ ಸೊಳ್ಳೆಯಿಂದಲೇ ಝೀಕಾ ವೈರಸ್ ಕೂಡ ಕಂಡು ಬರುತ್ತದೆ. ಪಕ್ಕದ ರಾಜ್ಯದಲ್ಲಿ ಝೀಕಾ ವೈರಸ್ ಕಂಡುಬಂದಿರುವುದರಿಂದ ರಾಜ್ಯದಲ್ಲೂ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಶಿವಮೊಗ್ಗದಲ್ಲಿ ಒಂದು ಶಂಕಿತ ಝೀಕಾ ಕೇಸ್ ಪತ್ತೆಯಾಗಿದೆ.‌ ಆದರೆ ಇನ್ನೂ ಕನ್ಪರ್ಮ್ ಆಗಿಲ್ಲ‌. ಝೀಕಾ ಅಷ್ಟೇನೂ ಅಪಾಯಕಾರಿ ಅಲ್ಲದಿದ್ದರೂ, ಅಲರ್ಟ್ ಆಗಿರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ: ಡೆಂಗ್ಯೂ ಟೆಸ್ಟಿಂಗ್: ಹೆಚ್ಚಿನ ಬೆಲೆ ವಿಧಿಸುತ್ತಿದ್ದ ಆಸ್ಪತ್ರೆಗಳಿಗೆ ಕಡಿವಾಣ: 600 ರೂ. ದರ ನಿಗದಿಪಡಿಸಿ ಸರ್ಕಾರದ ಆದೇಶ - Dengue testing rate

ETV Bharat Logo

Copyright © 2024 Ushodaya Enterprises Pvt. Ltd., All Rights Reserved.