ETV Bharat / state

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ - MUDA Scam - MUDA SCAM

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

muda case
ಕೋರ್ಟ್​, ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Sep 25, 2024, 1:37 PM IST

Updated : Sep 25, 2024, 3:08 PM IST

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಿಂದ ತಮ್ಮ ಕುಟುಂಬಸ್ಥರಿಗೆ ಅಕ್ರಮವಾಗಿ ಬದಲಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮೈಸೂರು ಲೋಕಾಯುಕ್ತ ಎಸ್​ಪಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಆದೇಶಿಸಲು ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ಕೋರ್ಟ್​​ ವಿಚಾರಣೆ ನಡೆಸಿತು.

ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಲು ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಈ ಆದೇಶ ನೀಡಿದ್ದು, ಡಿಸೆಂಬರ್ 24ರ ಒಳಗಾಗಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ.

ಪ್ರಕರಣ ಸಂಬಂಧ ಮೇಲ್ನೋಟಕ್ಕೆ ತನಿಖೆ ಅಗತ್ಯವೆಂದು ಹೈಕೋರ್ಟ್ ಕೂಡಾ ಅಭಿಪ್ರಾಯಪಟ್ಟಿದೆ. ಹೀಗಾಗಿ ತನಿಖೆಗೆ ಮುಖ್ಯಮಂತ್ರಿ ಹಿಂಜರಿಯಬಾರದೆಂಬ ಹೈಕೋರ್ಟ್ ತೀರ್ಪಿನ ಅಂಶವನ್ನು ವಿಶೇಷ ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಸಿಆರ್ಪಿಸಿ ಸೆಕ್ಷನ್ ೧೫೬(೩)ರ ಅಡಿ ತನಿಖೆಗೆ ಸೂಚಿಸಲು ಇರುವ ಅಧಿಕಾರವನ್ನು ಬಳಸಿ ನ್ಯಾಯಾಲಯ ಈ ನಿರ್ದೇಶನ ನೀಡಿದೆ.

ಇದಕ್ಕೂ ಮುನ್ನ, ರಾಜ್ಯಪಾಲರು ತನಿಖೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ಪ್ರತಿಯನ್ನು ಅರ್ಜಿದಾರರ ಪರ ಹಿರಿಯ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು.

ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದಾರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜೆ ದೇವರಾಜು ಹಾಗೂ ಇತರೆ ಹೆಸರಿನಡಿ ಐವರನ್ನು ಆರೋಪಿಗಳನ್ನಾಗಿಸಲಾಗಿದೆ. ಸಿದ್ದರಾಮಯ್ಯ ಮತ್ತು ಇತರೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳು, ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ 1988ರ ಸೆಕ್ಷನ್ 9 & 13, ಬೇನಾಮಿ ಆಸ್ತಿ ವರ್ಗಾವಣೆ ನಿಷೇಧ ಕಾಯಿದೆ 1988 ಮತ್ತು ಕರ್ನಾಟಕ ಅಕ್ರಮವಾಗಿ ಭೂ ಕಬಳಿಕೆ ಕಾಯಿದೆ 2011ರ ಸೆಕ್ಷನ್ 3 & 4ರ ಅಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸಬೇಕು ಎಂದು ಕೋರಿದ್ದರು

ರಾಜ್ಯಪಾಲರು ಅನುಮತಿ ನೀಡಿದ್ದ ಪ್ರಾಸಿಕ್ಯೂಷನ್​ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ಹೈಕೋರ್ಟ್ ವಜಾಗೊಳಿಸಿ, ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿತ್ತು. ರಾಜ್ಯಪಾಲರು ಕೈಗೊಂಡಿರುವ ಸ್ವತಂತ್ರ ನಿರ್ಧಾರದಲ್ಲಿ ಯಾವುದೇ ಲೋಪ ಕಂಡು ಬರುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳುವ ಪ್ರಾಧಿಕಾರ (ಸಕ್ಷಮ ಪ್ರಾಧಿಕಾರ) ಅದರಲ್ಲೂ ರಾಜ್ಯಪಾಲರಂತಹ ಉನ್ನತ ಕಚೇರಿಯು ಕಡತದಲ್ಲಿರುವ ಕಾರಣಗಳನ್ನು ದಾಖಲಿಸಿದರೆ ಸಾಕಾಗುತ್ತದೆ. ಆ ಕಾರಣಗಳು ರಾಜ್ಯಪಾಲರ ಆದೇಶದ ಭಾಗದಲ್ಲಿ ಸಂಕ್ಷಿಪ್ತವಾಗಿದೆ. ಕಾರಣಗಳು ಕಡತದಲ್ಲಿರಬೇಕು. ಮೊದಲ ಬಾರಿಗೆ ಕಾರಣಗಳನ್ನು ಆಕ್ಷೇಪಣೆಗಳ ಮೂಲಕ ಸಾಂವಿಧಾನಿಕ ನ್ಯಾಯಾಲಯದ ಮುಂದೆ ತರಲಾಗುವುದಿಲ್ಲ ಎಂದು ಪೀಠ ತಿಳಿಸಿತ್ತು .

ಇದನ್ನೂ ಓದಿ: ಕೆಸರೆ ಗ್ರಾಮದ ಜಮೀನಿಗೆ ಮೈಸೂರು ನಗರದಲ್ಲಿ ಬದಲಿ ನಿವೇಶನ ನೀಡಿರುವ ಬಗ್ಗೆ ತನಿಖೆ ಅಗತ್ಯ: ಹೈಕೋರ್ಟ್ - MUDA Scam.

Last Updated : Sep 25, 2024, 3:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.