ETV Bharat / state

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರಿಂದ ವಿವೇಚನೆ ಬಳಸಿ ಅನುಮತಿ; ತುಷಾರ ಮೆಹ್ತಾ ವಾದ - CM Siddaramaiah Petition Hearing

author img

By ETV Bharat Karnataka Team

Published : Aug 31, 2024, 11:44 AM IST

Updated : Aug 31, 2024, 1:52 PM IST

ಮುಡಾ ಹಗರಣ ಆರೋಪ ಪ್ರಕರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯುತ್ತಿದೆ.

CM case
ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕೋರ್ಟ್ (ETv Bharat)

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬದ ಸದಸ್ಯರಿಗೆ ನಿವೇಶನಗಳ ಹಂಚಿಕೆ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯುತ್ತಿದೆ.

ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು ವಿಚಾರಣೆ ನಡೆಸುತ್ತಿದೆ. ರಾಜ್ಯಪಾಲರ ಕಾರ್ಯದರ್ಶಿ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡನೆ ಮಾಡುತ್ತಿದ್ದಾರೆ.

''ಯಾವುದೇ ಆರೋಪ ಸಂಬಂಧ ಅನುಮತಿ ಬಂದ ಬಳಿಕ ಅದರ ಕುರಿತಂತೆ ಮೇಲ್ನೋಟಕ್ಕೆ ಸತ್ಯ ಎಂಬುದಾಗಿ‌ ಗೊತ್ತಾದ ನಂತರ ತಹಶೀಲ್ದಾರ್ ಇಲ್ಲವೇ, ರಾಜ್ಯಪಾಲರು ಸಹ ಅನುಮತಿ ನೀಡಬೇಕಾಗುತ್ತದೆ. ಈ ಪ್ರಕ್ರಿಯೆಯಲ್ಲಿ ರಾಜಕೀಯ ಉದ್ದೇಶ ಅಡಗಿದೆ ಎಂಬುದಾಗಿ ಆರೋಪಿಸಲಾಗದು'' ಎಂದು ತುಷಾರ್ ಮೆಹ್ತಾ ವಾದಿಸಿದರು.

''ಪ್ರಕರಣ ಸಂಬಂಧ ಟಿ.ಜೆ. ಅಬ್ರಾಹಂ ಅವರು ದಾಖಲೆಗಳ ಮೂಲಕ ರಾಜ್ಯಪಾಲರಿಗೆ ಅನುಮತಿ ಕೇಳಿ ಮನವಿ ಮಾಡಿದ್ದರು. ಅದೇ ಆರೋಪ ಸಂಬಂಧ ಇನ್ನಿಬ್ಬರು ಮನವಿ ಮಾಡಿದ್ದಾರೆ. ಹೀಗಾಗಿ, ಅಬ್ರಾಹಂ ಅವರ ಅರ್ಜಿ ಸಂಬಂಧ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಲಾಗಿದೆ. ಇನ್ನಿಬ್ಬರ ಅರ್ಜಿಗೆ ಸಂಬಂಧಿಸಿದಂತೆ ಶೋಕಾಸ್ ನೋಟಿಸ್ ನೀಡಿರಲಿಲ್ಲ ಎಂಬ ಅಂಶ ಮುಖ್ಯವಾಗಲಿದೆ. ರಾಜ್ಯಪಾಲರು ವಿವೇಚನೆ ಬಳಸಿಯೇ ಅನುಮತಿ ನೀಡಿದ್ದಾರೆ. ಹೀಗಾಗಿ, ತನಿಖೆ ನಡೆದು ಸತ್ಯಾಂಶ ಹೊರ ಬರಬೇಕಾಗಿದೆ'' ಎಂದರು.

ಸ್ವಾತಂತ್ರ್ಯದ ಬಳಿಕ ದೊಡ್ಡ ಪ್ರತಿಕ್ರಿಯೆ: ವಾದ ಮುಂದುವರೆಸಿದ ಮೆಹ್ತಾ, ''ಮುಖ್ಯಮಂತ್ರಿಗಳ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಸಂಬಂಧ ಸಚಿವ ಸಂಪುಟವು ತನ್ನ ನಿರ್ಧಾರ ತಿಳಿಸಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತ್ರತ್ವದಲ್ಲಿ ಸಂಪುಟ ಸಭೆ ನಡೆಸಿ, ಸುಮಾರು 91 ಪುಟಗಳ ಪ್ರತಿಕ್ರಿಯೆ ನೀಡಲಾಗಿದೆ. ಇದು ಸ್ವಾತಂತ್ರ್ಯ ಭಾರತದಲ್ಲಿಯೇ ಅತಿದೊಡ್ಡ ಪ್ರತಿಕ್ರಿಯೆ'' ಎಂದು ವಿವರಿಸಿದರು.

''ಅಲ್ಲದೆ, ರಾಜ್ಯಪಾಲರು ಕಾನೂನಿನ ಪ್ರಕಾರ ನೋಟಿಸ್‌ ನೀಡುವ ಅಗತ್ಯವೇ ಇಲ್ಲ. ಪಿಸಿ ಕಾಯಿದೆ ಸೆಕ್ಷನ್‌ 17ಎ ಅಥವಾ 19 ಸಂದರ್ಭದಲ್ಲೂ ನೋಟಿಸ್‌ ನೀಡಬೇಕಿಲ್ಲ. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಯಾವುದೇ ರೀತಿಯ ಶಿಫಾರಸು ಮಾಡಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಅನುಮತಿ ಪಡೆಯುವ ಅಗತ್ಯವೇ ಇಲ್ಲ. ರಾಜ್ಯಪಾಲರು ಯಾವುದೇ ರೀತಿಯ ಆತುರದ ನಿರ್ಧಾರ ಕೈಗೊಂಡಿಲ್ಲ. ದಾಖಲೆಗಳನ್ನು ಪರಿಶೀಲಿಸಿಯೇ ಅನುಮತಿ ನೀಡಿದ್ದಾರೆ. ಹೀಗಾಗಿ, ರಾಜ್ಯಪಾಲರ ಕ್ರಮ ಸರಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಜಾಗೊಳಿಸಬೇಕು'' ಎಂದು ಪೀಠಕ್ಕೆ ಮನವಿ ಮಾಡಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿಗಳ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ''ಇಡೀ ಅರೋಪ ಇರುವುದು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಅವರ ಪತ್ನಿ ತಮ್ಮನ ವಿರುದ್ಧವಾಗಿದೆ. ಹೀಗಾಗಿ, ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಅಗತ್ಯವಿಲ್ಲ'' ಎಂದು ಪೀಠಕ್ಕೆ ತಿಳಿಸಿದ್ದರು.

ದೂರುದಾರರಲ್ಲಿ ಒಬ್ಬರಾದ ಸ್ನೆಹಮಹಿ ಕೃಷ್ಣ ಪರವಾಗಿ ವಾದ ಮಂಡಿಸಿದ ವಕೀಲರಾದ ಮಣೀಂದರ್ ಸಿಂಗ್, ''ಮುಡಾ ಅಭಿವೃದ್ಧಿಪಡಿಸಿದ ಭೂಮಿಯನ್ನು ಕಂದಾಯ ಭೂಮಿ ಎಂಬುದಾಗಿ‌ ತೋರಿಸಲಾಗಿದೆ. ಇದರಿಂದ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮೇಲ್ನೋಟಕ್ಕೆ‌ ತಿಳಿಯಲಿದೆ. ಪ್ರಕರಣ ಸಂಬಂಧ ರಂಜನೆ ಮಾಡಬೇಕು ಎಂಬುದು ನಮ್ಮ ಉದ್ದೇಶವಲ್ಲ. ಆದರೂ, ತನಿಖೆ ನಡೆಯಬೇಕು. ‌ಸತ್ಯಾಂಶ ಹೊರಬರಬೇಕು ಎನ್ನುವುದೇ ನಮ್ಮ ಉದ್ದೇಶ'' ಎಂದರು.

ಪ್ರಕರಣದಲ್ಲಿ ವಾದ ಹಾಗೂ ಪ್ರತಿವಾದ ಆಲಿಸಿದ ನ್ಯಾಯಪೀಠ, ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಿತು.

ಇದನ್ನೂ ಓದಿ: ಲೈವ್ Karnataka News Today Live: ಒಂದೇ ಕ್ಲಿಕ್​ನಲ್ಲಿ ಬಿಎಂಟಿಸಿ ಡಿಜಿಟಲ್​ ಪಾಸ್​ ಸೇರಿ ಕರ್ನಾಟಕದ ಇಂದಿನ ಪ್ರಮುಖ ಸುದ್ದಿಗಳ ಮಾಹಿತಿ - LIVE UPDATE

Last Updated : Aug 31, 2024, 1:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.