ETV Bharat / state

ಶ್ರೀರಂಗಪಟ್ಟಣ ಮಸೀದಿಯಲ್ಲಿನ ಮದರಸಾ ತೆರವಿಗೆ ಜಿಲ್ಲಾಧಿಕಾರಿಗೆ ಸೂಚಿಸಲು ಕೋರಿದ ಕೇಂದ್ರ ಸರ್ಕಾರ - HIGH COURT

ಶ್ರೀರಂಗಪಟ್ಟಣದ ಮಸೀದಿಯಲ್ಲಿರುವ ಮದರಸಾ ತೆರವಿಗೆ ಜಿಲ್ಲಾಧಿಕಾರಿ ಹಾಗೂ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

high court
ಹೈಕೋರ್ಟ್‌ (ETV Bharat)
author img

By ETV Bharat Karnataka Team

Published : Nov 13, 2024, 7:39 PM IST

ಬೆಂಗಳೂರು: ಶ್ರೀರಂಗಪಟ್ಟಣದ ಜುಮ್ಮಾ ಮಸೀದಿಯಲ್ಲಿರುವ ಮದರಸಾ ತೆರವಿಗೆ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ಚಟುವಟಿಕೆ ನಡೆಯುತ್ತಿರುವುದನ್ನು ಪ್ರಶ್ನಿಸಿ ಕನಕಪುರ ತಾಲೂಕು ಕಬ್ಬಾಳುವಿನ ಅಭಿಷೇಕ್‌ ಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.

ಸಾಲಿಸಿಟರ್‌ ಜನರಲ್‌ ವಾದವೇನು?: ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಅರವಿಂದ್‌ ಕಾಮತ್‌, ''1951ರಲ್ಲಿಯೇ ಜುಮ್ಮಾ ಮಸೀದಿ ಸಂರಕ್ಷಿತ ಸ್ಮಾರಕ ಎಂದು ಘೋಷಿಸಲಾಗಿದೆ. ಆದರೆ, ಅಲ್ಲಿ ಕಾನೂನು ಬಾಹಿರ ಮದರಸಾ ಚಟುವಟಿಕೆ ನಡೆಯುತ್ತಿದೆ. ಆ ಚಟುವಟಿಕೆಯನ್ನು ತಡೆದರೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಾಗಲಿದೆ ಎಂದು ಈವರೆಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹಾಗಾಗಿ, ಮಸೀದಿಯಲ್ಲಿ ಮದರಸಾವನ್ನು ತೆರವು ಮಾಡಲು ಜಿಲ್ಲಾಧಿಕಾರಿಗೆ ಅಗತ್ಯ ನಿರ್ದೇಶನ ನೀಡಬೇಕು'' ಎಂದು ನ್ಯಾಯಪೀಠವನ್ನು ಕೋರಿದರು.

ಆದರೆ, ಕೇಂದ್ರ ಸರ್ಕಾರದ ಹೇಳಿಕೆಗೆ ರಾಜ್ಯ ಸರ್ಕಾರ ಮತ್ತು ವಕ್ಫ್ ಬೋರ್ಡ್‌ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೇ, 1963ರಲ್ಲಿಯೇ ಆ ಮಸೀದಿಯನ್ನು ವಕ್ಫ್ ಬೋರ್ಡ್‌ ಆಸ್ತಿ ಎಂದು ಅಧಿಸೂಚನೆ ಹೊರಡಿಸಲಾಗಿದೆ. ಟಿಪ್ಪು ಸುಲ್ತಾನ್‌ ಷಹೀದ್‌ ವಕ್ಫ್ ಎಂದು ಘೋಷಿಸಿದ್ದರು. ಅದರಂತೆ ವಕ್ಫ್ ಬೋರ್ಡ್‌ ಆಸ್ತಿಯಲ್ಲಿ ಮದರಸಾ ಚಟುವಟಿಕೆಗೆ ಅವಕಾಶವಿದೆ ಎಂದು ವಕೀಲರು ವಾದಿಸಿದರು. ವಾದ - ಪ್ರತಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ನವೆಂಬರ್​ 20ಕ್ಕೆ ವಿಚಾರಣೆ ನಿಗದಿಪಡಿಸಿತು.

ಅರ್ಜಿದಾರರ ಮನವಿ ಏನು?: ಮಸೀದಿಯಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಮದರಸಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ ಏನೂ ಪ್ರಯೋಜನವಾಗಿಲ್ಲ. ಹಾಗಾಗಿ ನ್ಯಾಯಾಲಯ ಮದರಸಾ ತೆರವಿಗೆ ಸರಕಾರ ಮತ್ತು ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು.

ಇದನ್ನೂ ಓದಿ: ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ: 98 ಆರೋಪಿಗಳಿಗೆ ಜಾಮೀನು ಮಂಜೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.