ETV Bharat / state

ವಾಲ್ಮೀಕಿ: ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆ.4ಕ್ಕೆ - Valmiki Corporation Scam

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್​ ಅನ್ನು ದುರ್ಬಳಕೆ ಮಾಡಿಕೊಂಡಿದ್ದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆ.4ಕ್ಕೆ ನಿಗದಿಪಡಿಸಿದೆ.

ಹೈಕೋರ್ಟ್​
ಹೈಕೋರ್ಟ್​ (ETV Bharat)
author img

By ETV Bharat Karnataka Team

Published : Aug 7, 2024, 3:18 PM IST

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್​ ಅನ್ನು ದುರ್ಬಳಕೆ ಮಾಡಿಕೊಂಡಿದ್ದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ವಹಿಸಬೇಕು ಎಂದು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಸೆ.4ಕ್ಕೆ ನಿಗದಿಪಡಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದರು.

ಬ್ಯಾಂಕ್ ಪರ ವಾದ ಮಂಡಿಸಿದ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ವೆಂಕಟರಮಣಿ, ಬ್ಯಾಂಕ್‌ನಲ್ಲಿ 50 ಕೋಟಿಗಿಂತಲೂ ಹೆಚ್ಚು ಅವ್ಯವಹಾರ ನಡೆದಿದೆ. ಸಿಬಿಐಗೆ ಮಾತ್ರ ಬ್ಯಾಂಕ್‌ ಹಗರಣಗಳ ತನಿಖೆ ಮಾಡಲು ಅವಕಾಶವಿದೆ. ಅಲ್ಲದೇ, ಹಗರಣದಲ್ಲಿ ಭಾಗಿಯಾಗಿರುವ ಬ್ಯಾಂಕ್ ಅಧಿಕಾರಿಗಳಲ್ಲದೇ ಇತರರನ್ನೂ ತನಿಖೆ ನಡೆಸಬಹುದು. ಆದರೆ, ರಾಜ್ಯ ಸರ್ಕಾರ ತನಿಖೆಗಾಗಿ ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಿದೆ. ಸಿಬಿಐಗೆ ಅಧಿಕಾರವಿರುವ ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುವುದಕ್ಕೆ ಅವಕಾಶವಿಲ್ಲ ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ರಾಜ್ಯದಲ್ಲಿ ನಡೆದಿರುವ ಹಗರಣಗಳ ಕುರಿತು ರಾಜ್ಯ ಪೊಲೀಸರು ವಿಚಾರಣೆ ನಡೆಸಬಹುದು. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಬೇಕು. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ಅರ್ಜಿಗೆ ಸಂಬಂಧಿಸಿದಂತೆ ಮೊದಲು ದೂರು ದಾಖಲಿಸಿರುವುದು ನಿಗಮದಿಂದ. ಆದರೆ, ನಿಗಮಕ್ಕೆ ಈವರೆಗೂ ಅರ್ಜಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಒದಗಿಸಿಲ್ಲ. ಆದ ಕಾರಣ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಇದಕ್ಕೆ ನ್ಯಾಯಪೀಠ, ಪ್ರಕರಣ ಸಂಬಂಧ ಎಸ್‌ಐಟಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಾಥಮಿಕ ಆರೋಪ ಪಟ್ಟಿಯಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಆರೋಪಗಳನ್ನು ದಾಖಲಿಸಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಪ್ರಕರಣವನ್ನು ಮುಕ್ತಾಯಗೊಳಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಪ್ರಶ್ನಿಸಿದ್ದ ಅರ್ಜಿ ವಜಾ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.