ETV Bharat / state

ಭಾರಿ ಮಳೆ ಎಚ್ಚರಿಕೆ​: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲೆಗಳಿಗೆ ರಜೆ - Holidays For Schools

ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಸುರಕ್ಷಿತಾ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

rain
ಸಂಗ್ರಹ ಚಿತ್ರ (IANS)
author img

By ETV Bharat Karnataka Team

Published : Jul 31, 2024, 10:19 PM IST

Updated : Aug 1, 2024, 5:58 AM IST

ಉಡುಪಿ/ದಕ್ಷಿಣ ಕನ್ನಡ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್​ 1 ಅಂದರೆ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅಗಸ್ಟ್ 1ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡದಲ್ಲೂ ಶಾಲೆಗೆ ರಜೆ: ಜಿಲ್ಲೆಯಲ್ಲಿ ನಾಳೆ ಆರೆಂಜ್​ ಅಲರ್ಟ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆಗಸ್ಟ್​​ 1ರಂದು ಆರೆಂಜ್ ಅಲರ್ಟ್ ಘೋಷಣೆ ಕಾರಣ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮ ಕೈಗೊಂಡಿದೆ.

ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ - ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದು ಎಂದು ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗಬಾರದು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ದೊಡ್ಡತಪ್ಪಲು ಬಳಿ 5ನೇ ಬಾರಿ ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ ಹಲವು ವಾಹನಗಳು - landslide in sakleshpura

Last Updated : Aug 1, 2024, 5:58 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.