ಬೆಂಗಳೂರು: ಕರಾವಳಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬೀದರ್, ಬೆಳಗಾವಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಚಿಕ್ಕಬಳ್ಳಾಪುರ, ವಿಜಯಪುರ, ರಾಯಚೂರು, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಹೆಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಜಧಾನಿ ಬೆಂಗಳೂರಿನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.