ETV Bharat / state

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವಾರಪೂರ್ತಿ ಮಳೆ: ಆರೆಂಜ್ ಅಲರ್ಟ್ ಘೋಷಣೆ - Karnataka Rain Forecast

ಮುಂದಿನ ಒಂದು ವಾರಗಳ ಕಾಲ ರಾಜ್ಯದ ಕರಾವಳಿ ಭಾಗದಲ್ಲಿ ಸತತ ಮಳೆ ಮುಂದುವರೆಯಲಿದೆ. ಹವಾಮಾನ ಇಲಾಖೆಯು ಕೆಲವು ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಹಾಗೂ ಮತ್ತಷ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ.

rain
ಮಳೆ (IANS)
author img

By ETV Bharat Karnataka Team

Published : Aug 28, 2024, 10:06 AM IST

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮತ್ತಷ್ಟು ಚುರುಕಾಗಿದ್ದು, ಈ ವಾರ ಪೂರ್ತಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ರಾಜ್ಯದ 6 ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚು ಸುರಿಯಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ವಾರ್ನಿಂಗ್​ ನೀಡಲಾಗಿದೆ.

ಕೆಲ ದಿನಗಳಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ ಮಳೆ ಬೀಳುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್‌ನಲ್ಲಿ ನಿನ್ನೆ ಅತ್ಯಧಿಕ 160 ಮಿ.ಮೀ. ಪ್ರಮಾಣದ ಮಳೆಯಾಗಿದೆ. ಕೊಟ್ಟಿಗೆಹಾರದಲ್ಲಿ 110, ಪುತ್ತೂರಿನಲ್ಲಿ 100, ಭಾಗಮಂಡಲ ಹಾಗೂ ತಲಾ 80, ಶಿರಾಲಿಯಲ್ಲಿ 60, ಧರ್ಮಸ್ಥಳ, ಬೆಳ್ತಂಗಡಿ, ಶೃಂಗೇರಿ ಹಾಗೂ ಪೊನ್ನಂಪೇಟೆಯಲ್ಲಿ ತಲಾ 50 ಮಿ.ಮೀ. ಮಳೆ ದಾಖಲಾಗಿದೆ.

ರಾಜ್ಯದ ಪಶ್ಚಿಮಘಟ್ಟ ಪ್ರದೇಶ ಸೇರಿ ಕರಾವಳಿಯ ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಭಾರಿ ಮಳೆಯಾಗಲಿದೆ. ಇದೇ ವೇಳೆ ಕರಾವಳಿ ತೀರದುದ್ದಕ್ಕೂ ಗಾಳಿಯು ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಬೀಸಲಿದ್ದು, ಕೆಲವೆಡೆ 55 ಕಿ.ಮೀ. ವೇಗವನ್ನೂ ತಲುಪಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಕ್ಷೀಣಿಸಿದೆ. ಮುಂದಿನ ಮೂರು ದಿನಗಳು ಹಗರ ಅಥವಾ ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ನಂತರ ಈ ಭಾಗಗಳಲ್ಲಿ ಮುಂಗಾರು ಚುರುಕು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಸಾಧ್ಯತೆ ಇದೆ. ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹೆಚ್​ಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ತೂಫಾನ್: ಬೈತಖೋಲ್ ಬಂದರಿನಲ್ಲಿ ಲಂಗರು ಹಾಕಿದ ಬೋಟ್​ಗಳು - fishing boats anchored

ETV Bharat Logo

Copyright © 2024 Ushodaya Enterprises Pvt. Ltd., All Rights Reserved.