ETV Bharat / state

ಮಳೆ: ಉಡುಪಿ ಜಿಲ್ಲೆಯ 3 ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ - Udupi Rain - UDUPI RAIN

ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲೆ-ಕಾಲೇಜುಗಳಿಗೆ ಜು.5ರಂದು ರಜೆ ಘೋಷಣೆ ಮಾಡಲಾಗಿದೆ.

ಉಡುಪಿ: ಮಳೆ ಹಿನ್ನೆಲೆಯಲ್ಲಿ  ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (ETV Bharat)
author img

By ETV Bharat Karnataka Team

Published : Jul 4, 2024, 10:53 PM IST

ಉಡುಪಿ: ಭಾರೀ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನಲ್ಲಿ ಜುಲೈ 5ರಂದು ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಆದೇಶ ಹೊರಡಿಸಿದ್ದಾರೆ.

ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐ.ಟಿ.ಐಗಳಿಗೆ ರಜೆ ನೀಡಲಾಗಿಲ್ಲ. ಕಾಲೇಜುಗಳಲ್ಲಿ ವಾಠ ಪ್ರವಚನಗಳನ್ನು ನಡೆಸುವಾಗ ಹಲವು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರು ಹಾಗೂ ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ.

  • ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ.
  • ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುವುವ ಬಗ್ಗೆ ಗಮನವಹಿಸುವುದು.
  • ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಬೇಕು.
  • ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕು.
  • ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆ ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟ ಸರಿದೂಗಿಸಬೇಕು.
  • ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳ ನೀರು ಇರುವ ತಗು, ಪ್ರದೇಶ, ಕರೆ, ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.
  • ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
  • ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದಾಗಿ ಜಿಲ್ಲಾಡಳಿತ ಅಧಿಕಾರಿಗಳಿಗೆ‌ ತಿಳಿಸಿದೆ.

ಇದನ್ನೂ ಓದಿ: ಹೊಸನಗರ: ಹಳ್ಳ ದಾಟುವಾಗ ಕಾಲು ಸಂಕದಿಂದ ಬಿದ್ದು ಮಹಿಳೆ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.