ETV Bharat / state

ಭಾರೀ ಮಳೆ: ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ - School Holiday - SCHOOL HOLIDAY

ಮಂಗಳೂರು ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರೆಡ್​ ಅಲರ್ಟ್​ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಸೋಮವಾರ ರಜೆ ನೀಡಲಾಗಿದೆ.

Heavy Rain in Mangaluru
ಮಂಗಳೂರಿನಲ್ಲಿ ಭಾರೀ ಮಳೆ (ETV Bharat)
author img

By ETV Bharat Karnataka Team

Published : Jul 8, 2024, 9:36 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಶಾಲೆ, ಪಿಯುಸಿ ತರಗತಿಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ, ಮಂಗಳೂರು ಎ ಹೋಬಳಿ, ಸುರತ್ಕಲ್ ಹೋಬಳಿ ಮತ್ತು ಗುರುಪುರ ಹೋಬಳಿ ವ್ಯಾಪ್ತಿಯ ಎಲ್ಲಾ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ರಜೆ ನೀಡಲಾಗಿದೆ.

ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರಿರುವ ತಗ್ಗು ಪ್ರದೇಶಗಳು, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ, ತೋಡುಗಳ ಮತ್ತು ವಿದ್ಯುತ್ ಕಂಬ, ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು, ಸಂಭಾವ್ಯ ಹಾನಿ ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ, ಸೂಚನೆಗಳನ್ನು ಪಾಲಿಸುವುದು, ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಕೂಡಲೇ ಸಂಬಂಧಪಟ್ಟ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆಯೂ ಸೂಚಿಸಲಾಗಿದೆ‌.

ಇದನ್ನೂ ಓದಿ: ಬೆಳ್ತಂಗಡಿ: ಭಾರೀ ಮಳೆಗೆ ದೇಗುಲದ ಪುರಾತನ ಅಶ್ವತ್ಥ ವೃಕ್ಷ ಧರಾಶಾಹಿ - Belthangady Rain

ETV Bharat Logo

Copyright © 2025 Ushodaya Enterprises Pvt. Ltd., All Rights Reserved.