ETV Bharat / state

ಭಾರಿ ಮಳೆ: ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಶಾಲಾ - ಕಾಲೇಜುಗಳಿಗೆ ಇಂದು ರಜೆ - Rain Holiday For Schools - RAIN HOLIDAY FOR SCHOOLS

ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಶಾಲಾ - ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.

heavy rain
ಮಂಗಳೂರಲ್ಲಿ ಮಳೆ (ETV Bharat)
author img

By ETV Bharat Karnataka Team

Published : Jul 15, 2024, 8:09 AM IST

ಮಂಗಳೂರು/ಕಾರವಾರ: ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ‌ ಮುಗಿಲನ್ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ದುರ್ಬಲ/ಶಿಥಿಲ ಕಟ್ಟಡಗಳಿದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಶಾಲಾ ಕಾಲೇಜು ಮುಖ್ಯಸ್ಥರುಗಳು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಲಾಗಿದೆ.

ಉತ್ತರ ಕನ್ನಡದಲ್ಲೂ 10 ತಾಲೂಕುಗಳ ಶಾಲೆಗೆ ರಜೆ: ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಸಹ ಮಳೆ ಅಬ್ಬರ ಮುಂದುವರೆದಿದ್ದು, ಸೋಮವಾರ (ಜು.15) ವಿವಿಧ ತಾಲೂಕುಗಳ ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತವು ರಜೆ ಘೋಷಣೆ ಮಾಡಿದೆ. ಕಾರವಾರ, ಕುಮಟಾ, ಹೊನ್ನಾವರ, ಅಂಕೋಲಾ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಸರ್ಕಾರಿ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮುಂಡಗೋಡ ಹಾಗೂ ಹಳಿಯಾಳ ತಾಲೂಕುಗಳಲ್ಲಿ ಎಂದಿನಂತೆಯೇ ಶಾಲಾ-ಕಾಲೇಜು ತರಗತಿಗಳು ನಡೆಯಲಿವೆ.

ಇದನ್ನೂ ಓದಿ: ಮುಂಗಾರು ಮಳೆ: ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಮುಂದಿನ 48 ಗಂಟೆ ರೆಡ್ ಅಲರ್ಟ್ ಘೋಷಣೆ - Rain Forecast

ETV Bharat Logo

Copyright © 2025 Ushodaya Enterprises Pvt. Ltd., All Rights Reserved.