ETV Bharat / state

ರಾಜಧಾನಿಯಲ್ಲಿ ನಿರಂತರ ಮಳೆ; ಅಧಿಕಾರಿಗಳು ಸನ್ನದ್ಧರಾಗಿರುವಂತೆ ತುಷಾರ್ ಗಿರಿನಾಥ್ ಕಟ್ಟಪ್ಪಣೆ - BBMP NOTICE TO AUTHORITIES

ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಎಲ್ಲಿಯೂ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Heavy Rain In Bengaluru: BBMP Chief Commissioner Tushar Girinath Notice To Authorities
ಮರ ತೆರವುಗೊಳಿಸುತ್ತಿರುವುದು (ETV Bharat)
author img

By ETV Bharat Karnataka Team

Published : Oct 15, 2024, 1:04 PM IST

ಬೆಂಗಳೂರು : ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವರ್ಚುವಲ್ ಮೂಲಕ ಸಭೆ ನಡೆಸಿದ ಅವರು, ಇಂದು ಮುಂಜಾನೆಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲ ಅಧಿಕಾರಿಗಳು ಮುಂಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

Heavy Rain In Bengaluru: BBMP Chief Commissioner Tushar Girinath Notice To Authorities
ಮರ ತೆರವುಗೊಳಿಸುತ್ತಿರುವುದು (ETV Bharat)

ಎಲ್ಲಿಯೂ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಪೀಡಿತ ಪ್ರದೇಶಗಳ ಬಳಿ ನಿಗಾವಹಿಸಬೇಕು. ಏನಾದರು ಸಮಸ್ಯೆಯಾಗುವ ಸಂಭವವಿದ್ದರೆ ಸ್ಥಳೀಯ ನಿವಾಸಿಗಳನ್ನು ಕೂಡಲೇ ಸುರಕ್ಷಿತ ಸ್ಥಳಕೆ ಕರೆದೊಯ್ಯುವ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶಿಸಿದರು.

ಜಲಾವೃತಗೊಂಡ ರಸ್ತೆ (ETV Bharat)

ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಿ : ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ರಸ್ತೆಗಳಲ್ಲಿ ನೀರು ನಿಂತು ಜಲಾವೃತವಾಗುವ ಕಾರಣ ಹೆಚ್ಚು ಸಂಚಾರ ದಟ್ಟಣೆಯಾಗಲಿದೆ. ಈ ಸಂಬಂಧ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಅಧಿಕಾರಿಗಳು ಎಲ್ಲ ಪ್ರಮುಖ ರಸ್ತೆಗಳಲ್ಲಿ ಪರಿಶೀಲನೆ ನಡೆಸಿ ನೀರು ನಿಲ್ಲದಂತೆ ಸೂಕ್ತ ಕ್ರಮ ವಹಿಸಬೇಕು. ಪಾಲಿಕೆ ಸಿಬ್ಬಂದಿಯ ಸಹಯೋಗದೊಂದಿಗೆ ಗ್ರೇಟಿಂಗ್ಸ್​ಗಳ ಬಳಿ ತ್ಯಾಜ್ಯವನ್ನು ಸ್ವಚ್ಛಗೊಳಿಸಿ ಸೈಡ್ ಡ್ರೈನ್‌ಗಳಿಗೆ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ನೋಡಿಕೊಳ್ಳಬೇಕು. ರಾಜಕಾಲುವೆಗಳಲ್ಲಿಯೂ ಸರಾಗವಾಗಿ ನೀರು ಹರಿದು ಹೊಗಬೇಕು. ಎಲ್ಲಿಯೂ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕ್ರಮ ವಹಿಸಬೇಕೆಂದು ಸೂಚಿಸಿದರು.

ಮಳೆಯಿಂದ ಧರೆಗುರುಳಿದ ಮರ (ETV Bharat)

ದೂರುಗಳಿಗೆ ಕೂಡಲೆ ಸ್ಪಂದನೆ : ಮಳೆಯಾಗುತ್ತಿರುವುದರಿಂದ ಮಳೆ ನೀರು ನಿಂತಿರುವ, ಜಲಾವೃತವಾಗಿರುವ, ಮರ, ರೆಂಬೆ-ಕೊಂಬೆಗಳು ಧರೆಗುರುಳಿರುವುದು ಸೇರಿದಂತೆ ಇನ್ನಿತೆ ಸಮಸ್ಯೆಗಳ ಕುರಿತು ನಾಗರಿಕರಿಂದ ನಿಯಂತ್ರಣ ಕೊಠಡಿಗೆ ಬರುವ ದೂರುಗಳಿಗೆ ಕೂಡಲೇ ಸ್ಪಂದಿಸಿ ಇರುವ ಸಮಸ್ಯೆಗಳನ್ನು ಬಗೆಹರಸಬೇಕು. ಧರೆಗುರುಳುವ ಮರ, ರೆಂಬೆ - ಕೊಂಬೆಗಳನ್ನು ತೆರವುಗೊಳಿಸುವ ತಂಡಗಳು ಕಾರ್ಯಪ್ರವೃತ್ತರಾಗಬೇಕು. ನಾಗರಿಕರಿಂದ ದೂರುಗಳು ಬಂದ ತಕ್ಷಣ ಸ್ಥಳಕ್ಕೆ ತೆರಳಿ ತೆರವುಗೊಳಿಸುವ ಕೆಲಸ ಮಾಡಲು ಸೂಚಿಸಿದರು.

ಪಾಲಿಕೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ : ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಚೇರಿಯಲ್ಲಿ 1 ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರೂ ಸಮಸ್ಯೆಗಳಿದ್ದರೆ ನಾಗರೀಕರು ಕೂಡಲೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಸದರಿ ದೂರಗಳನ್ನು ಸಂಬಂಧಪಟ್ಟ ವಲಯ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆ: ಇನ್ನೂ ಮೂರು ದಿನ ರಾಜ್ಯದಲ್ಲಿ ವರುಣನ ಅಬ್ಬರ; ಹವಾಮಾನ ಇಲಾಖೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.