ETV Bharat / state

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ, ರೆಡ್​​​ ಅಲರ್ಟ್​ ಘೋಷಣೆ: ಇಂದು ಶಾಲೆಗಳಿಗೆ ರಜೆ - Heavy Rain In Dakshina Kannada

author img

By ETV Bharat Karnataka Team

Published : Jun 26, 2024, 8:20 PM IST

Updated : Jun 27, 2024, 6:11 AM IST

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಬೀಳುತ್ತಿದ್ದು ಜೂನ್​ 27ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ
ಸಂಗ್ರಹ ಚಿತ್ರ (ETV Bharat)

ಮಂಗಳೂರು: ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು (ಗುರುವಾರ) ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ತಗ್ಗು ಪ್ರದೇಶಗಳಲ್ಲಿ ಎಚ್ಚರ: ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲೂ ಸೂಚಿಸಲಾಗಿದೆ. ನೀರು ನುಗ್ಗುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳಬಾರದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ತಿಳಿಸಲಾಗಿದೆ.

ಸಾರ್ವಜನಿಕರು ನದಿ, ತೋಡುಗಳ ಸಮೀಪ ಹೋಗದಂತೆ ನಿರ್ಬಂಧ ವಿಧಿಸಲಾಗಿದೆ. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಅವಘಡಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಕೂಡಲೇ ಸಂಬಂಧಪಟ್ಟ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುವಂತೆಯೂ ಕೋರಲಾಗಿದೆ.

ಸಂಭಾವ್ಯ ಹಾನಿ ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ, ಸೂಚನೆಗಳನ್ನು ಪಾಲಿಸಬೇಕು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ನಂ.2497, ಕಂಟ್ರೋಲ್ ರೂಂ 1077/0824-2442590 ಸಂಪರ್ಕಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಉಳ್ಳಾಲದಲ್ಲಿ ಮನೆ ಕುಸಿದು ನಾಲ್ವರ ದುರ್ಮರಣ: ಸ್ಥಳಕ್ಕೆ ಜಿಲ್ಲಾಧಿಕಾರಿ, ಸ್ಪೀಕರ್​ ಯು.ಟಿ ಖಾದರ್‌ ಭೇಟಿ - DC AND SPEAKER UT KHADER VISIT SPOT

Last Updated : Jun 27, 2024, 6:11 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.