ETV Bharat / state

ಮಳೆ ಅಬ್ಬರ: ರಾಜ್ಯದ ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಶುಕ್ರವಾರವೂ ರೆಡ್ ಅಲರ್ಟ್ - Rain Red Alert - RAIN RED ALERT

ಹವಾಮಾನ ಇಲಾಖೆಯು ಇಂದು ಹಾಗೂ ನಾಳೆ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ.

rain
ಮಳೆಯಿಂದ ಮೈದುಂಬಿದ ನದಿ (ETV Bharat)
author img

By ETV Bharat Karnataka Team

Published : Jul 18, 2024, 4:37 PM IST

ಬೆಂಗಳೂರು: ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಮುಂದುವರೆದಿದ್ದು, ಮುಂದಿನ 48 ಗಂಟೆಗಳಿಗೆ ಅನ್ವಯವಾಗುವಂತೆ ಹವಾಮಾನ ಇಲಾಖೆ ಅಲ್ಲಿನ ಜಿಲ್ಲೆಗಳಿಗೆ ಮತ್ತೆ ರೆಡ್ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಯಾದಗಿರಿ ಜಿಲ್ಲೆಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್, ಕಲಬುರಗಿ ಜಿಲ್ಲೆಗೆ ಇಂದು ಹಾಗೂ ಹಾವೇರಿ ಜಿಲ್ಲೆಗೆ ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗೆ ಈ ಎರಡೂ ದಿನ ಯೆಲ್ಲೋ ಅಲರ್ಟ್ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿಯು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬೀಸಲಿದೆ. ಕೊಡಗು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಮಳೆ ಮತ್ತು ನಿರಂತರ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ, ಯಾದಗಿರಿ ಮತ್ತು ಹಾಸನ ಜಿಲ್ಲೆಗಳ ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ, ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಸಿಲಿಕಾನ್ ಸಿಟಿಯಲ್ಲಿ ಹಗುರ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ. ತಲುಪಲಿದೆ. ಗರಿಷ್ಠ 29 ಡಿಗ್ರಿ ಮತ್ತು ಕನಿಷ್ಠ 21 ಡಿಗ್ರಿ ತಾಪಮಾನ ದಾಖಲಾಗಲಿದೆ.

ಮೀನುಗಾರರಿಗೆ ಎಚ್ಚರಿಕೆ: ಕರಾವಳಿ ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದ್ದು, ಪ್ರತಿ ಗಂಟೆಗೆ 55 ಕಿ.ಮೀ.ನಿಂದ 65 ಕಿ.ಮೀ. ವೇಗದಲ್ಲಿ ಬೀಸುವ ಗಾಳಿಯು, ಕರ್ನಾಟಕ ಕರಾವಳಿಯುದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾಗರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ನಿರ್ದೇಶಕರ ಮಾಹಿತಿ: ''ದಕ್ಷಿಣ ಗುಜರಾತ್ ನಿಂದ ಕೇರಳದ ಕರಾವಳಿಯುದ್ದಕ್ಕೂ ಸರಾಸರಿ ಸಮುದ್ರಮಟ್ಟದಲ್ಲಿ ಆಫ್- ಶೋರ್ ಟ್ರಫ್ ಮುಂದುವರೆದಿದೆ. ಆದ್ದರಿಂದ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಇದರ ಪರಿಣಾಮ ನೈಋತ್ಯ ಮಾನ್ಸೂನ್ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಅಂತರಿಕ ಕರ್ನಾಟಕದ ಮೇಲೆ ಸಕ್ರಿಯವಾಗಿದೆ. ಉತ್ತರ ಒಳನಾಡಿನಲ್ಲಿ ಮಾನ್ಸೂನ್ ಸಾಧಾರಣವಾಗಿದೆ. ಇಂದು ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ. ನಿನ್ನೆಯಿಂದ ಅತಿ ಹೆಚ್ಚು ಮಳೆಯು ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್​ನಲ್ಲಿ (24 ಸೆ.ಮೀ.) ದಾಖಲಾಗಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೆಚ್ಚಿದ ಮಳೆಯಿಂದ ಜಲಾಶಯಗಳಿಗೆ ಜೀವಕಳೆ: ಕಬಿನಿ ಡ್ಯಾಂ ಬಹುತೇಕ ಭರ್ತಿ, ನದಿಗೆ ಇಳಿಯದಂತೆ ಜನರಿಗೆ ಎಚ್ಚರಿಕೆ - Karnataka Rain

ETV Bharat Logo

Copyright © 2024 Ushodaya Enterprises Pvt. Ltd., All Rights Reserved.