ETV Bharat / state

ಕೋಲಾರ ಅಥವಾ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೈಟೆಕ್ ಫಾರ್ಮಾಸ್ಯುಟಿಕಲ್ಸ್ ಪಾರ್ಕ್: ಸಚಿವ ಎಂ.ಬಿ.ಪಾಟೀಲ್

ಕೋಲಾರ ಅಥವಾ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೈಟೆಕ್ ಫಾರ್ಮಾಸ್ಯುಟಿಕಲ್ಸ್ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

M.B. Patil
ವರ್ಚುವಲ್ ಸಭೆಯಲ್ಲಿ ಎಂ.ಬಿ.ಪಾಟೀಲ್, ಇತರರು (ETV Bharat)
author img

By ETV Bharat Karnataka Team

Published : 2 hours ago

ಬೆಂಗಳೂರು: ಕೈಗಾರಿಕಾ ಬೆಳವಣಿಗೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ಕೋಲಾರ ಅಥವಾ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಫಾರ್ಮಾಸ್ಯುಟಿಕಲ್ಸ್ ಪಾರ್ಕ್ ಸ್ಥಾಪಿಸಲು ತೀರ್ಮಾನಿಸಿದೆ.

ಖನಿಜ ಭವನದಲ್ಲಿ ಬುಧವಾರ ನಡೆದ ಇಂಡಸ್ಟ್ರಿ 5.0 ಮತ್ತು ಫಾರ್ಮಾಸುಟಿಕಲ್ಸ್ ವಿಷನ್ ಗ್ರೂಪ್​ಗಳ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ವಿವಿಧ ಔಷಧ ತಯಾರಿಕೆ ಕಂಪನಿಗಳ ಪ್ರಮುಖರೊಂದಿಗೆ ಮಾತನಾಡಿದರು. ಸಚಿವರ ಈ ಘೋಷಣೆಯನ್ನು ಉದ್ಯಮಿಗಳು ಸ್ವಾಗತಿಸಿದ್ದಾರೆ. ಇದಕ್ಕೆ ಔಷಧ ತಯಾರಿಕಾ ಕ್ಷೇತ್ರದಲ್ಲಿರುವ ಪರಿಣಿತ ಉದ್ಯಮಿಗಳು ಮತ್ತು ವಿಜ್ಞಾನಿಗಳ ಸಲಹೆಗಳನ್ನು ಪಡೆಯಲಾಗುವುದು ಎಂದು ಸಚಿವರು ಹೇಳಿದ್ದಾರೆ.

ವಿದೇಶಿ ಹೂಡಿಕೆದಾರರು ಭಾರತದಲ್ಲಿ ಬಂಡವಾಳ ಹೂಡಲು ಹತ್ತು ಕ್ಷೇತ್ರಗಳನ್ನು ಆಕರ್ಷಣೀಯವೆಂದು ಗುರುತಿಸಿದ್ದು, ಇವುಗಳಲ್ಲಿ ಫಾರ್ಮಾಸುಟಿಕಲ್ಸ್ ಕೂಡ ಒಂದಾಗಿದೆ. ಈ ಕ್ಷೇತ್ರವು ವರ್ಷಕ್ಕೆ ಶೇ.11ರ ಪ್ರಮಾಣದಲ್ಲಿ ಬೆಳವಣಿಗೆ ಕಾಣುತ್ತಿದ್ದು, ಮುಂದಿನ ಆರು ವರ್ಷಗಳಲ್ಲಿ ಇದರ ವಾರ್ಷಿಕ ವಹಿವಾಟು 130 ಬಿಲಿಯನ್ ಡಾಲರ್ ಮುಟ್ಟಲಿದೆ. ಕೈಗೆಟುಕುವಂತಹ ಔಷಧಿಗಳು, ಲಸಿಕೆಗಳು ಮತ್ತು ಔಷಧೋತ್ಪನ್ನಗಳ ಗರಿಷ್ಠ ರಫ್ತು ವಹಿವಾಟು ಇದಕ್ಕೆ ಕಾರಣಗಳಾಗಿವೆ ಎಂದು ಅವರು ತಿಳಿಸಿದರು.

ಔಷಧ ಕ್ಷೇತ್ರದಿಂದ ಬರುತ್ತಿರುವ ವರಮಾನದಲ್ಲಿ ರಾಜ್ಯದ ಕೊಡುಗೆ ಶೇ.11ರಷ್ಟಿದೆ. ಜೊತೆಗೆ ಬಯೋಟೆಕ್ ವಲಯದ ಆದಾಯ ಮತ್ತು ನಿರ್ಯಾತದಲ್ಲಿ ನಮ್ಮ ಕೊಡುಗೆ ಶೇ.60ರಷ್ಟಿದೆ. ಬೇರೆ ಯಾವ ರಾಜ್ಯಗಳೂ ಈ ವಿಷಯದಲ್ಲಿ ನಮ್ಮ ಸನಿಹದಲ್ಲೂ ಇಲ್ಲ. ಈ ಸಾಧನೆಯನ್ನು ಇನ್ನಷ್ಟು ವ್ಯಾಪಕಗೊಳಿಸಿ, ಬಂಡವಾಳವನ್ನು ಆಕರ್ಷಿಸಲಾಗುವುದು ಎಂದು ಸಚಿವರು ಹೇಳಿದರು.

ಕ್ವೀನ್ ಸಿಟಿಯಲ್ಲಿ ನಾವೀನ್ಯತೆಗೆ ಆದ್ಯತೆ: ಇಂಡಸ್ಟ್ರಿ 5.0 ವಿಷನ್ ಗ್ರೂಪ್ ಸಭೆಯಲ್ಲಿ ಮಾತನಾಡಿದ ಎಂ.ಬಿ. ಪಾಟೀಲ್​, ಡಾಬಸಪೇಟೆ ಬಳಿ ಅಸ್ತಿತ್ವಕ್ಕೆ ಬರುತ್ತಿರುವ ಕ್ವಿನ್ ಸಿಟಿಯನ್ನು ಜಾಗತಿಕ ಮಟ್ಟದ ನಾವೀನ್ಯತೆಯ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಉದ್ಯಮಗಳನ್ನು, ಹೊಸಹೊಸ ತಂತ್ರಜ್ಞಾನವನ್ನು ಆವಿಷ್ಕರಿಸುವಂತಹ ನವೋದ್ಯಮಗಳೊಂದಿಗೆ ಬೆಸೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ, ಮುಂಬರುವ ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ನವೋದ್ಯಮಗಳು ತಮ್ಮ ಸಂಶೋಧನೆಗಳ ಮೂಲಮಾತೃಕೆಗಳನ್ನು ಪ್ರದರ್ಶಿಸಲು ಸೂಕ್ತ ವ್ಯವಸ್ಥೆ ಮಾಡಬೇಕೆಂಬ ಸಲಹೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ವಿವರಿಸಿದರು.

ಸಭೆಯಲ್ಲಿ ಉದ್ಯಮಿಗಳಾದ ರೆಡ್ಡಿ ಲ್ಯಾಬೊರೇಟರೀಸ್ ಮುಖ್ಯಸ್ಥ ಜಿ.ವಿ. ಪ್ರಸಾದ್, ಬಯೋಕಾನ್ ಸಿಇಒ ಸಿದ್ಧಾರ್ಥ ಮಿತ್ತಲ್, ಶಿಲ್ಪಾ ಬಯೊಲಾಜಿಕಲ್ಸ್ ನಿರ್ದೇಶಕ ವಿಷ್ಣುಕಾಂತ್ ಭೂತದ, ಸಿಪ್ಲಾ ಉನ್ನತಾಧಿಕಾರಿ ರಾಜೀವ್ ಕುಮಾರ್ ಸಿನ್ಹಾ, ಲಾಗ್9 ಸಂಸ್ಥಾಪಕ ಅಕ್ಷಯ್ ಸಿಂಘಾಲ್, ಬೆಲಾಟ್ರೆಕ್ಸ್ ಸಿಇಒ ಅಭಿಲಾಷ್, ನೋಪೋ ನ್ಯಾನೋ ಟೆಕ್ನಾಲಜೀಸ್ ಸಿಇಒ ಗದಾಧರ ರೆಡ್ಡಿ, ಎಥರಿಯಲ್ ಮಷಿನ್ಸ್ ಸಿಇಒ ಕೌಶಿಕ್ ಮುದ್ದಾ ಉಪಸ್ಥಿತರಿದ್ದರು.

ಇದನ್ನೂ ಓದಿ: ಮುಜರಾಯಿ ದೇವಾಲಯಗಳ ಖಾಸಗೀಕರಣ ಬೇಡ: ಅರ್ಚಕ ಸಮೂಹದಿಂದ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.