ETV Bharat / state

ಜಾರಕಿಹೊಳಿ, ಯತ್ನಾಳ್ ಬಣದ ಪಾದಯಾತ್ರೆ ಸಿದ್ಧತಾ ಸಭೆ ಮುಂದೂಡಿಕೆ: ಹೈಕಮಾಂಡ್ ಮಧ್ಯಪ್ರವೇಶದಿಂದ 'ಬಣ ರಾಜಕೀಯ'ಕ್ಕೆ ಬ್ರೇಕ್ - BJP Leaders Padayatra

author img

By ETV Bharat Karnataka Team

Published : Aug 20, 2024, 3:27 PM IST

ಬಿಜೆಪಿಯ ಅತೃಪ್ತರು ನಾಳೆ ಬೆಂಗಳೂರಿನಲ್ಲಿ ಕರೆದಿದ್ದ ಸಭೆಗೆ ಹೈಕಮಾಂಡ್ ತಡೆಯೊಡ್ಡಿದೆ.

bjp
ಬಿಜೆಪಿ (ETV Bharat)

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಆರಂಭಗೊಂಡಿದ್ದು, ಬಸವಕಲ್ಯಾಣದಿಂದ ಬೆಂಗಳೂರಿನವರೆಗೆ ಮತ್ತೊಂದು ಬಣ ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆಗೆ ಹೈಕಮಾಂಡ್ ಮಧ್ಯಪ್ರವೇಶದಿಂದಾಗಿ ಬ್ರೇಕ್ ಬಿದ್ದಿದೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ ನಂತರದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸದ್ಯಕ್ಕೆ ಮತ್ತೊಂದು ಪಾದಯಾತ್ರೆ ಬೇಡ ಎಂಬ ಸಂದೇಶವನ್ನು ವರಿಷ್ಠರು ರವಾನಿಸಿದ್ದಾರೆ. ಹೀಗಾಗಿ ಪಾದಯಾತ್ರೆಯ ಜೊತೆಗೆ ಪಾದಯಾತ್ರೆ ಸಿದ್ದತಾ ಸಭೆಯನ್ನೂ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಬಿಜೆಪಿಯ ಅತೃಪ್ತ ನಾಯಕರು ನಾಳೆ ಬೆಂಗಳೂರಿನಲ್ಲಿ ಕರೆದಿದ್ದ ಸಭೆಗೆ ಹೈಕಮಾಂಡ್ ತಡೆಯೊಡ್ಡಿದೆ. ಈ ಹಂತದಲ್ಲಿ ಯಾವುದೇ ಚಟುವಟಿಕೆ ನಡೆಸಬಾರದೆನ್ನುವ ವರಿಷ್ಠರ ಸೂಚನೆಯ ಹಿನ್ನೆಲೆಯಲ್ಲಿ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಮುಡಾ ಹಗರಣ ವಿರೋಧಿಸಿ ಬಿಜೆಪಿ ನಾಯಕರು ಜೆಡಿಎಸ್ ಜೊತೆಗೂಡಿ ಬೆಂಗಳೂರಿನಿಂದ ಮೈಸೂರಿನವರೆಗೆ ನಡೆಸಿದ ಪಾದಯಾತ್ರೆ ಪೂರ್ಣಗೊಂಡ ಬಳಿಕ ಆಗಸ್ಟ್ 11ರಂದು ಬೆಳಗಾವಿಯ ರೆಸಾರ್ಟ್​ನಲ್ಲಿ ಬಿಜೆಪಿಯ ಅತೃಪ್ತ ನಾಯಕರು ಸಭೆ ನಡೆಸಿದ್ದರು.

ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಪ್ರತಾಪ್ ಸಿಂಹ, ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಸೇರಿ ಹಲವು ಮುಖಂಡರು ಪಾಲ್ಗೊಂಡಿದ್ದರು. ಇದರ ನಂತರ ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿಯೂ ಮತ್ತೊಂದು ಸಭೆ ನಡೆಸಲಾಗಿತ್ತು.

ಬೆಂಗಳೂರು ಮೈಸೂರು ಪಾದಯಾತ್ರೆಗೆ ಪರ್ಯಾಯವಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಖಂಡಿಸಿ ಕೂಡಲ ಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಲು ತೀರ್ಮಾನಿಸಲಾಗಿತ್ತು. ಅದರಂತೆ ಪಾದಯಾತ್ರೆ ಸಿದ್ದತೆಗೆ ನಾಳೆ ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಭಿನ್ನಮತೀಯರ ಸಭೆ ಕರೆಯಲು ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಸಿದ್ದತೆ ನಡೆಸಿದ್ದರು. ಆದರೆ ವರಿಷ್ಠರ ಮಧ್ಯಪ್ರವೇಶದಿಂದ ಸಭೆ ಮುಂದೂಡಿಕೆಯಾಗಿದೆ.

ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಕಳೆದ ವಾರ ಬೆಂಗಳೂರಿಗೆ ಭೇಟಿ ನೀಡಿದ್ದರು. ಸಂಘದ ಮಧ್ಯಸ್ಥಿಕೆಯಲ್ಲಿ ರಾಜ್ಯ ನಾಯಕತ್ವ ಹಾಗೂ ಇನ್ನೊಂದು ಬಣದ ಮುಖಂಡರ ಜೊತೆ ಸಮಾಲೋಚನೆ ನಡೆಸಿ, ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನವೂ ನಡೆದಿತ್ತು. ನಂತರ ಪಕ್ಷ ನಿಷ್ಠರು ಎಂದು ಹೇಳಿಕೊಳ್ಳುತ್ತಿರುವ ಜಾರಕಿಹೊಳಿ, ಯತ್ನಾಳ್ ಬಣವನ್ನು ದೆಹಲಿಗೆ ಬರುವಂತೆ ಸಂತೋಷ್ ಸೂಚಿಸಿದ್ದರು. ಆದರೆ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದರಿಂದ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಈ ಹಿನ್ನೆಲೆಯಲ್ಲಿ ರಾಜ್ಯ ನಾಯಕತ್ವ ಅಥವಾ ಬಳ್ಳಾರಿ ಪಾದಯಾತ್ರೆಯಂತಹ ವಿಷಯಗಳ ಚರ್ಚೆ ಮಾಡುವ ವಿಚಾರವನ್ನು ವರಿಷ್ಠರು ಮುಂದೂಡಿದ್ದಾರೆ. ಸದ್ಯಕ್ಕೆ ಯಾವುದೇ ಸಭೆ, ಪಾದಯಾತ್ರೆ ಬೇಡ, ಪಕ್ಷದಲ್ಲಿ ನಮ್ಮ ಅನುಮತಿ ಪಡೆಯದೇ ಯಾವುದೇ ಚಟುವಟಿಕೆ ನಡೆಸಬೇಡಿ ಎಂದು ಸಂದೇಶ ರವಾನಿಸಿದ್ದಾರೆ. ಹೀಗಾಗಿ ನಾಳೆ ನಡೆಯಬೇಕಿದ್ದ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ.

ನಾಳಿನ ಸಭೆ ಮುಂದೂಡಿಕೆಯಾಗಿರುವುದನ್ನು ಯತ್ನಾಳ್ ಆಪ್ತ ಬಳಗ ಖಚಿತಪಡಿಸಿದೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹಾಗಾಗಿ ವರಿಷ್ಠರ ಮಧ್ಯಪ್ರವೇಶದಿಂದಾಗಿ ರಾಜ್ಯ ಬಿಜೆಪಿಯಲ್ಲಿ ತಲೆದೋರಿದ್ದ ಭಿನ್ನಮತೀಯ ಚಟುವಟಿಕೆಗೆ ತಾತ್ಕಾಲಿಕ ಕಡಿವಾಣ ಬಿದ್ದಂತಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ನಾಯಕರ ಸಭೆ : ಸಭೆ ಬಗ್ಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದೇನು? - BJP rebel leaders meeting

ETV Bharat Logo

Copyright © 2024 Ushodaya Enterprises Pvt. Ltd., All Rights Reserved.