ETV Bharat / state

ಜಾತಿ ಗಣತಿ ವರದಿಯನ್ನು ಸ್ವೀಕರಿಸಿರುವ ಬಗ್ಗೆ ಮಾಹಿತಿ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ - Caste Census Report

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಜಾತಿ ಗಣತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್​ ಮುಂದೂಡಿದೆ.

high court
ಹೈಕೋರ್ಟ್
author img

By ETV Bharat Karnataka Team

Published : Mar 1, 2024, 2:19 PM IST

Updated : Mar 1, 2024, 4:56 PM IST

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ಧಪಡಿಸಿರುವ ವರದಿಯನ್ನು ಸ್ವೀಕರಿಸಲಾಗಿದೆಯೇ ಎಂಬ ಕುರಿತ ಸತ್ಯಾಂಶಗಳನ್ನು ಪ್ರಮಾಣ ಪತ್ರದ ಮೂಲಕ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೊರ್ಟ್ ನಿರ್ದೇಶನ ನೀಡಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸಲು 2014ರ ಜನವರಿ 23ರಂದು ಸರ್ಕಾರದ ಆದೇಶ ಪ್ರಶ್ನಿಸಿ ಬೀದರ್‌ನ ಶಿವರಾಜ್ ಕಣಶೆಟ್ಟಿ ಮತ್ತಿತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರು, 2015ರ ಮೇ 5ರಂದು ಜಾತಿ ಗಣತಿ ಮುಗಿದಿದೆ ಎಂದು ಅರ್ಜಿದಾರರೇ ಹೇಳಿದ್ದಾರೆ. ಈ ವರದಿಯು ಒಂಭತ್ತು ವರ್ಷಗಳಿಂದ ಹಾಗೇ ಉಳಿದಿದೆ. ಈಗ ಯಾವುದೇ ತುರ್ತು ಇಲ್ಲ. ವರದಿ ಸ್ವೀಕರಿಸಿರುವುದುಕ್ಕೆ ಆಕ್ಷೇಪವಿಲ್ಲ. ಆದರೆ, 1931ರ ಬಳಿಕ ಮೊದಲ ಬಾರಿಗೆ ಜಾತಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು 2014ರಲ್ಲಿ ಬಜೆಟ್ ಅಧಿವೇಶನದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ತಿಳಿಸಿದ್ದರು. ಆದರೆ, ಜಾತಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದೆ. 2015ರಲ್ಲಿ ಸಂಗ್ರಹಿಸಿರುವ ದತ್ತಾಂಶವನ್ನು ಹಿಂದುಳಿದ ವರ್ಗದ ವರದಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಇದರಲ್ಲಿ ಜಾತಿ ಉಲ್ಲೇಖಿಸುವುದಿಲ್ಲ ಎಂದು ಸರ್ಕಾರ ಹೇಳಿದರೆ ವಿವಾದವನ್ನು ಬಗೆಹರಿಸಬಹುದು ಎಂದರು.

ಅಲ್ಲದೆ, ಸಂವಿಧಾನದ 245 ಮತ್ತು 246ರ ಪ್ರಕಾರ ಜಾತಿ ಸಮೀಕ್ಷೆ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ. ಅಲ್ಲದೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿ ವಾರು ಸಮೀಕ್ಷೆ ನಡೆಸುವುದಕ್ಕೆ ಅಧಿಕಾರವೇ ಇಲ್ಲ. ಆದರೂ, ಸರ್ಕಾರ ಸಮೀಕ್ಷೆ ನಡೆಸಿದೆ. ಜತೆಗೆ. ಆ ವರದಿಯನ್ನು ಮುಖ್ಯಮಂತ್ರಿಗಳು ಸ್ವೀಕರಿಸಿದ್ದಾರೆ. ಅಲ್ಲದೆ, ಜಾತಿ ಗಣತಿ ವರದಿ ಸಲ್ಲಿಕೆ ಅಥವಾ ಅದರ ಸ್ವೀಕಾರದ ಸಂದರ್ಭದ ಬಗ್ಗೆ ನಾವು ಆಕ್ಷೇಪಿಸುವುದಿಲ್ಲ. ನಾವು ಸಾಂವಿಧಾನಿಕ ಮತ್ತು ಕಾನೂನಾತ್ಮಕ ವಿಚಾರಕ್ಕಷ್ಟೇ ಸೀಮಿತವಾಗಿದ್ದೇವೆ ಎಂದು ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜಾತಿ ಆಧಾರದಲ್ಲಿಯೇ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಗತಿ ಇಲ್ಲವೇ ಎಂದು ಪ್ರಶ್ನೆ ಮಾಡಿತು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು ಜಾತೀ ಆಧಾರದಲ್ಲಿ ಶೈಕ್ಷಣಿಕ, ಸಾಮಾಜಿಕ ವರದಿ ಸಿದ್ಧಪಡಿಸಲಾಗಿದೆ, ಈಗಾಗಲೇ ಸರ್ಕಾರ ಸ್ವೀಕರಿಸಿದೆ ಎಂದು ತಿಳಿಸಿದರು.

ಈ ವೇಳೆ ಸರ್ಕಾರಿ ವಕೀಲರು, ವರದಿ ಸ್ವೀಕರಿಸಿರುವ ಸಂಬಂಧ ಮಾಹಿತಿ ಇಲ್ಲ. ಈ ಬಗ್ಗೆ ಯಾವುದೇ ಸರ್ಕಾರದ ನಿರ್ದೇಶನ ಇಲ್ಲ ಎಂದು ಹೇಳಿದರು. ಏನೋ ಆಗಬಹುದು ಎಂಬ ಆತಂಕವನ್ನು ನಮ್ಮ ಅರ್ಜಿದಾರರ ಪರ ವಕೀಲರು ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಈ ಬಗ್ಗೆ ಮಾಹಿತಿ ನೀಡಲು ಕಾಲಾವಕಾಶ ನೀಡಬೇಕು. ಈ ಸಂಬಂಧ ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದಾರೆ ಎಂದು ತಿಳಿಸಿದರು.

ಇದಕ್ಕೆ ಪೀಠ, ಮುಂದಿನ ಕ್ರಮ ಜಾತಿ ಗಣತಿ ವರದಿಯನ್ನು ಸದನದಲ್ಲಿ ಮಂಡಿಸುವುದೇ? ಅವರ ನಡೆ ನಿಮಗೆ ಗೊತ್ತಿಲ್ಲವೇ? ಇದು ಸಂಪುಟಕ್ಕೆ ಹೋಗುತ್ತದೆಯೇ?” ಎಂದರು.

ಅದಕ್ಕೆ ಅರ್ಜಿದಾರರ ಪರ ವಕೀಲರು, “ಸದನದ ಮುಂದೆ ಮಂಡಿಸಬಹುದು ಅಥವಾ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಬಹುದು. ಪ್ರತಿವಾರ ಸಂಪುಟ ಸಭೆ ನಡೆಯುತ್ತದೆ. ಅವರ ಉದ್ದೇಶ ಏನು ಎಂದು ತಿಳಿಸಿಲ್ಲ ಎಂದು ತಿಳಿಸಿದರು. ವಾದ ಆಲಿಸಿದ ಪೀಠ ಈ ಸಂಬಂಧ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಜಾತಿ ಗಣತಿ ವರದಿ ಬಿಡುಗಡೆ ಮಾಡದಂತೆ ಹೈಕೋರ್ಟ್​ಗೆ ಅರ್ಜಿ: ಇಂದು ವಿಚಾರಣೆ

Last Updated : Mar 1, 2024, 4:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.