ETV Bharat / state

ಹಾಸನ ಪೆನ್​ಡ್ರೈವ್​ ಪ್ರಕರಣ: ಸ್ವತಂತ್ರ ಸಂಸ್ಥೆಯಿಂದ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ - Hassan Sexual Assault Case

author img

By ETV Bharat Karnataka Team

Published : Jun 10, 2024, 9:30 PM IST

ಹಾಸನ ಪೆನ್​ಡ್ರೈವ್​ ಪ್ರಕರಣದ ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಯಿಂದ ನಡೆಸುವಂತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್​ ಮುಂದೂಡಿದೆ.

High court
ಹೈಕೋರ್ಟ್ (ETV Bharat)

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಗರಣವನ್ನು 'ಸ್ವತಂತ್ರ ತನಿಖಾ ಸಂಸ್ಥೆ'ಯಿಂದ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜೂನ್ 12ಕ್ಕೆ ಮುಂದೂಡಿದೆ.

ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಉಪಾಧ್ಯಕ್ಷ ಎಸ್‌.ಹೆಚ್‌.ಲಿಂಗೇಗೌಡ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಆದರೆ, ಕಾಲಾವಕಾಶದ ಕೊರತೆಯಿಂದ ನ್ಯಾಯಪೀಠವು ಅರ್ಜಿ ವಿಚಾರಣೆ ಮುಂದೂಡಿತು.

ಲೈಂಗಿಕ ಹಗರಣದಲ್ಲಿ ಭಾಗಿಯಾದ ಆರೋಪದಲ್ಲಿ ದೇಶಾದ್ಯಂತ ಸುದ್ದಿಯ ಕೇಂದ್ರ ಬಿಂದುವಾಗಿರುವ ಹಾಸನದ ಮಾಜಿ ಸಂಸದ ಸದಸ್ಯ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ದೂರು ನೀಡಲು ಪೊಲೀಸ್ ಠಾಣೆ ಮೆಟ್ಟಿಲೇರಿತ್ತು . ಈ ವೇಳೆ ಪೊಲೀಸರು ಪ್ರಕರಣ ಸಂಬಂಧ ಈಗಾಗಲೇ ದೂರು ದಾಖಲಾಗಿದ್ದು, ಮತ್ತೊಂದು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಹೊಳೆನರಸೀಪುರ ಪೊಲೀಸರು ಹಿಂಬರಹ ಕೊಟ್ಟಿದ್ದರು.

ಆ ಹಿಂಬರಹ ರದ್ದುಪಡಿಸಿ ಎಫ್‌ಐಆರ್‌ ದಾಖಲಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಬೇಕು. ವಿಡಿಯೋ ಮಾಡಿರುವವರು ಮತ್ತು ವಿಡಿಯೋವನ್ನು ಇತರರಿಗೆ ಹಂಚಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ, ಪೂರ್ಣ ಪ್ರಕರಣದ ನ್ಯಾಯಾಂಗ ತನಿಖೆ ಸೇರಿದಂತೆ ಸ್ವತಂತ್ರ ತನಿಖಾ ಸಂಸ್ಥೆಗಳಿಗೆ ವಹಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೂ.24ರವರೆಗೆ ನ್ಯಾಯಾಂಗ ಬಂಧನ - Prajwal Revanna

ETV Bharat Logo

Copyright © 2024 Ushodaya Enterprises Pvt. Ltd., All Rights Reserved.