ETV Bharat / state

ಮುಡಾ ಹಗರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜ.15ಕ್ಕೆ ಮುಂದೂಡಿಕೆ - MUDA LAND SCAM

ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇಂದು, ಜನವರಿ 15ಕ್ಕೆ ಮುಂದೂಡಿದೆ.

MUDA LAND SCAM
ಹೈಕೋರ್ಟ್ (ETV Bharat)
author img

By ETV Bharat Karnataka Team

Published : 3 hours ago

Updated : 2 hours ago

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿ 15ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅರ್ಜಿ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಹಾಜರಾಗಿದ್ದ ಸಿದ್ದರಾಮಯ್ಯ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಪರ ವಕೀಲರು, "ಎರಡು ದಿನಗಳ ಹಿಂದೆಯಷ್ಟೇ ನೋಟಿಸ್​ ಜಾರಿಯಾಗಿದೆ. ಅದಕ್ಕೆ ಆಕ್ಷೇಪಣೆ ಸಿದ್ದಪಡಿಸಬೇಕಾಗಿದೆ. ಆದ್ದರಿಂದ ಅರ್ಜಿಯ ವಿಚಾರಣೆ ಮುಂದೂಡಬೇಕು" ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ ಪತ್ನಿ ಪರ ಹಾಜರಿದ್ದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್​, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದಕ್ಕೆ ಪೀಠ, ಜಾರಿ ನಿರ್ದೇಶನಾಲಯವನ್ನು(ಇ.ಡಿ) ಪ್ರತಿವಾದಿಯನ್ನಾಗಿಸಲು ಸೂಚನೆ ನೀಡಿತು.

ಕೋರ್ಟ್ ಆದೇಶಕ್ಕೆ ಸಿದ್ದರಾಮಯ್ಯ ಪತ್ನಿ ಪರ ವಕೀಲರಿಂದ ಆಕ್ಷೇಪ: ವಿಚಾರಣೆ ವೇಳೆ ಪ್ರೊ.ರವಿವರ್ಮ ಕುಮಾರ್​, "ನಮ್ಮ ಕಕ್ಷಿದಾರರಿಗೆ ಈವರೆಗೂ ನೋಟಿಸ್​ ಜಾರಿ ಮಾಡಿಲ್ಲ. ಆದರೂ, ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಬಾರದೆಂದು ಆದೇಶಿಸಲಾಗಿದೆ. ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಎಂದು ಅರ್ಜಿದಾರರು ಕೇಳಿಯೇ ಇಲ್ಲ. ಆದರೂ ಈ ಆದೇಶ ನೀಡಲಾಗಿದೆ. ಲೋಕಾಯುಕ್ತ ತನಿಖೆಯಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ನಮ್ಮ ವಾದ ಆಲಿಸದೆಯೇ ಸ್ವಯಂಪ್ರೇರಿತವಾಗಿ ಈ ಆದೇಶ ನೀಡುವುದು ಎಷ್ಟು ಸರಿ" ಎಂದು ಪ್ರಶ್ನಿಸಿದರು.

ಇದಕ್ಕೆ ನ್ಯಾಯಪೀಠ, "ಅರ್ಜಿ ಸಲ್ಲಿಕೆಯಾಗಿ 35 ದಿನಗಳಾಗಿವೆ. ಆದರೂ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿರಲಿಲ್ಲ. ಹೀಗಾಗಿ ಹ್ಯಾಂಡ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ಪ್ರತಿವಾದಿಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಯಾವುದೇ ಮಧ್ಯಂತರ ತಡೆ ನೀಡಿಲ್ಲ. ಸೆಷನ್ಸ್ ಕೋರ್ಟ್​ಗೆ ಡಿ.24ಕ್ಕೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಬೇಕಿದೆ. ಅಂತಿಮ ವರದಿ ಸಲ್ಲಿಸಿದರೆ ಅರ್ಜಿ ವಿಚಾರಣೆಗೆ ತೊಂದರೆಯಾಗುತ್ತದೆ. ಹೀಗಾಗಿ ಅಂತಿಮ ವರದಿ ಸಲ್ಲಿಸಲು ನೀಡಿರುವ ಗಡುವು ವಿಸ್ತರಿಸಲಾಗುತ್ತಿದೆ" ಎಂದು ನ್ಯಾಯಪೀಠ ತಿಳಿಸಿತು. ಇದೇ ವೇಳೆ, "ಈ ಹಿಂದೆ ಜನವರಿ 28ರವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಸಲ್ಲಿಕೆಗೆ ಕಾಲಾವಕಾಶ ನೀಡುತ್ತಿದ್ದೇನೆ" ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಮುಡಾ ಪ್ರಕರಣದಿಂದ ಹಿಂದೆ ಸರಿಯುವಂತೆ ಆಮಿಷ ಆರೋಪ: ಲೋಕಾಗೆ ಸ್ನೇಹಮಯಿ ಕೃಷ್ಣ ದೂರು, ಹೋರಾಟ ನಿಲ್ಲಸಬೇಡಿ ಎಂದ ವಿಶ್ವನಾಥ್ - SNEHAMAYI KRISHNA

Last Updated : 2 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.