ETV Bharat / state

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್ - YEDIYURAPPA POCSO CASE

ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜ.15ಕ್ಕೆ ಮುಂದೂಡಿದೆ.

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್
ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್ (ETV Bharat)
author img

By ETV Bharat Karnataka Team

Published : 4 hours ago

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ 2025ರ ಜನವರಿ 15 ಕ್ಕೆ ಮುಂದೂಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿತು.

ಯಡಿಯೂರಪ್ಪ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರು ಮತ್ತಿತರರ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ಅದನ್ನು ಸ್ವೀಕರಿಸಲಾಗುವುದಿಲ್ಲ. ದೂರುದಾರ ಮಹಿಳೆ ಪದೇ ಪದೇ ದೂರು ದಾಖಲಿಸುವುದು ಅವರ ನಡುವಳಿಕೆ ತೋರಿಸುತ್ತದೆ‌. ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು‌ ಮತ್ತಿತರ ಪ್ರಮುಖ ವ್ಯಕ್ತಿಗಳ ವಿರುದ್ಧ ದೂರು ನೀಡುವುದು ಅಭ್ಯಾಸ ಮಾಡಿಕೊಂಡಿದ್ದರು. ಅಲ್ಲದೇ, ಗಂಡ ಮತ್ತು ಮಗನ ಮೇಲೆಯೂ ದೂರು ದಾಖಲಿಸಿದ್ದರು ಎಂದು ತಿಳಿಸಿದರು.

ವಾದ ಆಲಿಸಿದ ಪೀಠ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಸಂಜ್ಞೆ ಪರಿಗಣಿಸುವಲ್ಲಿ ವಿಚಾರಣಾ ನ್ಯಾಯಾಲಯ ವಿವೇಚನೆ ಬಳಸಿಲ್ಲ : ಹೈಕೋರ್ಟ್

ಇದನ್ನೂ ಓದಿ: ಯತ್ನಾಳ್ ವಿಷಯ ಸೇರಿ ಎಲ್ಲವೂ ಸುಸೂತ್ರವಾಗಿ ಬಗೆಹರಿಯಲಿದೆ: ಬಿ.ಎಸ್.ಯಡಿಯೂರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.