ETV Bharat / state

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ - Board Exams

ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ವಿಭಾಗೀಯ ಪೀಠ ತನ್ನ ತೀರ್ಪು ಪ್ರಕಟಿಸಿದೆ.

DIVISION BENCH OF HIGH COURT  BOARD EXAMINATION FOR CLASSES  HIGH COURT
ಹೈಕೋರ್ಟ್ ವಿಭಾಗೀಯ ಪೀಠ
author img

By ETV Bharat Karnataka Team

Published : Mar 22, 2024, 12:13 PM IST

Updated : Mar 26, 2024, 12:49 PM IST

ಬೆಂಗಳೂರು : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ ಆದೇಶಿಸಿದೆ.

ಬೋರ್ಡ್​ ಮಟ್ಟದ ಪರೀಕ್ಷೆಗಳನ್ನು ನಡೆಸುವ ಸಂಬಂಧ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ಕೆ. ರಾಜೇಶ್ ರೈ ಅವರ ನೇತೃತ್ವದ ಪೀಠವು ಸುದೀರ್ಘ ಕಾಲ ವಿಚಾರಣೆ ನಡೆಸಿ ಆದೇಶ ಕಾಯ್ದಿಸಿರಿಸಿದ್ದು, ಇಂದು ಪ್ರಕಟಿಸಿದೆ.

ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದು ಮಾಡಿತು. ರಾಜ್ಯ ಸರ್ಕಾರ ಬೋರ್ಡ್ ಪರೀಕ್ಷೆ ನಡೆಸಬಹುದು.‌ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಇದನ್ನು ಮುಂದುವರಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ಪೀಠ ಸೂಚಿಸಿದೆ.

ಜತೆಗೆ, ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರುಪ್ಸಾ ಹಾಗೂ ಅವರ್ಸ್ ಸ್ಕೂಲ್ ಸಲ್ಲಿಸಿದ ಮನವಿಯನ್ನೂ ಇದೇ ವೇಳೆ ಪೀಠ ತಿರಸ್ಕರಿಸಿದೆ. ಅರ್ಜಿಯ ಸಂಬಂಧ ಈ ಹಿಂದೆ ನಡೆದಿದ್ದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ರಾಜ್ಯ ಪಠ್ಯಕ್ರಮ ಅಳವಡಿಸಿರುವ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆಗೆ ಮುಂದಾಗಿದೆ. ಅಲ್ಲದೇ, ಪರೀಕ್ಷೆಗಳು ತಮಾಷೆಯಲ್ಲ. ಮಕ್ಕಳು ಹಲವು ದಿನಗಳಿಂದ ಸಿದ್ದತೆ ಮಾಡಿಕೊಂಡಿರುತ್ತಾರೆ. ಆದರೆ, ಪರೀಕ್ಷಾ ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತರದ ಗೊಂದಲಗಳಿಗೆ ಕಾರಣವಾಗುತ್ತಿದೆ ಎಂದರು.

ಜೊತೆಗೆ ರಾಜ್ಯ ಶಿಕ್ಷಣ ಇಲಾಖೆಗೆ ಆರ್​​ಟಿಐ ಕಾಯಿದೆಯಡಿ ಪರೀಕ್ಷೆಗಳನ್ನು ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಳೆದ ವರ್ಷವೂ ಆರ್​ಟಿಐ ಕಾಯಿದೆಯಡಿ ಸುತ್ತೋಲೆ ಹೊರಡಿಸಿ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಶಿಕ್ಷಣ ಇಲಾಖೆ ಸಮವರ್ತಿ ಪಟ್ಟಿಗೆ ಸೇರಿದ್ದು, ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಅವಕಾಶವಿದೆ ಎಂದಿತ್ತು ಎಂದು ತಿಳಿಸಿದರು.

ಅರ್ಜಿದಾರರ ಪರ ವಕೀಲರು (ಮೇಲ್ಮನವಿಯಲ್ಲಿ ಪ್ರತಿವಾದಿಗಳು), ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಮುಂದಾಗಿರುವುದು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಗೆ ತದ್ವಿರುದ್ಧವಾಗಿದೆ. ಈ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಕಾನೂನುಬಾಹಿರ ಎಂದು ವಿವರಿಸಿದ್ದರು.

ಆದೇಶದಲ್ಲೇನಿದೆ?: 5, 8, 9 ಮತ್ತು 11 ನೇ ತರಗತಿಗಳ ಪರೀಕ್ಷಾ ಮಾದರಿಯನ್ನು ಬದಲಾಯಿಸುವುದು ಕೇವಲ ರಾಜ್ಯ ಸರ್ಕಾರದಿಂದ ನಿರ್ಧರಿಸುವ ವಿಷಯವಲ್ಲ. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಪರೀಕ್ಷೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದಕ್ಕಾಗಿ ಪರೀಕ್ಷಾ ಮಾದರಿಯಲ್ಲಿ ಬದಲಾವಣೆ ಕುರಿತು ಸರ್ಕಾರವು ಎಲ್ಲಾ ಪಾಲುದಾರರೊಂದಿಗೆ ಚರ್ಚಿಸಬೇಕು. ಪರೀಕ್ಷಾ ಮಾದರಿ ಬದಲಾದರೆ ಮಕ್ಕಳನ್ನು ಪರೀಕ್ಷೆಗೆ ಸಜ್ಜುಗೊಳಿಸುವುದು ಹಾಗೂ ಅವರ ಯೋಗಕ್ಷೇಮ ಮತ್ತು ಬೆಳವಣಿಗೆಗೆ ಅಡ್ಡಿಯಾಗುತ್ತದೆ ಎಂಬ ಕೆಲವು ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳ ವಾದವನ್ನು ತಿರಸ್ಕರಿಸಿದ ಪೀಠ, ಬೋರ್ಡ್ ಪರೀಕ್ಷೆ ಕುರಿತು ಪೋಷಕರಿಗೆ ಮುಂಚಿತವಾಗಿ ತಿಳಿಸಬೇತ್ತು ಎಂದು ಆದೇಶದಲ್ಲಿ ತಿಳಿಸಿದೆ.

ಅಲ್ಲದೆ, ಪ್ರಶ್ನೆಪತ್ರಿಕೆಗಳನ್ನು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ( ಕೆಎಸ್‌ಇಎಬಿ) ಸಿದ್ಧಪಡಿಸುತ್ತಿದೆ ಎಂಬ ಕಾರಣಕ್ಕೆ ಬದಲಾದ ಪರೀಕ್ಷಾ ಮಾದರಿಯನ್ನು ಬೋರ್ಡ್ ಪರೀಕ್ಷೆ ಎಂದು ಕರೆಯಲಾಗುವುದಿಲ್ಲ. ಪರೀಕ್ಷೆಗಳಲ್ಲಿ ವಿಫಲರಾದ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದು, ಬಾಹ್ಯ ಅಧ್ಯಾಪಕರಿಂದ ಉತ್ತರ ಸ್ಕ್ರಿಪ್ಟ್‌ಗಳ ಮೌಲ್ಯಮಾಪನದಂತಹ ಪ್ರಮುಖ ಲಕ್ಷಣಗಳು ಬದಲಾದ ಪರೀಕ್ಷಾ ವಿಧಾನಕ್ಕೆ ಅನ್ವಯಿಸುವುದಿಲ್ಲ ಎಂದು ಪೀಠ ತಿಳಿಸಿದೆ.

ಕೆಎಸ್‌ಇಎಬಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿದ್ದರೂ, ಕಳಪೆ ಪ್ರದರ್ಶನದ ಮಾಡಿದ ಯಾವುದೇ ವಿದ್ಯಾರ್ಥಿಯನ್ನು ಅದೇ ತರಗತಿಯಲ್ಲಿ ಉಳಿಸಬಾರದು. ಆದರೆ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಆಂತರಿಕ ಅಧ್ಯಾಪಕರಿಂದ ಮಾಡಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ: ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘಗಳು, ಸರ್ಕಾರದ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 30 ಮತ್ತು ಕರ್ನಾಟಕ ಶಿಕ್ಷಣ ಕಾಯಿದೆಯ ವಿವಿಧ ಸೆಕ್ಷನ್​ಗಳ ಉಲ್ಲಂಘನೆಯಾಗಿದ್ದು, ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು ಎಂದು ಕೋರಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ರದ್ದುಪಡಿಸಿ ಆದೇಶಿಸಿತ್ತು. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ್ದ ದ್ವಿಸದಸ್ಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಅರ್ಜಿದಾರರು ಸುಪ್ರೀಂಕೋರ್ಟ್​​ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

ದ್ವಿಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂಕೋರ್ಟ್, ದ್ವಿಸದಸ್ಯ ಪೀಠದ ಮುಂದೆ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಆದಷ್ಟು ಶೀಘ್ರವಾಗಿ ವಿಚಾರಣೆ ನಡೆಸಿ, ಸೂಕ್ತ ಆದೇಶವನ್ನು ನೀಡುವಂತೆ ಸೂಚನೆ ನೀಡಿತ್ತು.

ವಕೀಲರಿಂದ ಆಯುಕ್ತರಿಗೆ ಪತ್ರ: ಹೈಕೋರ್ಟ್ ತೀರ್ಪು ಆಧರಿಸಿ ತಕ್ಷಣವೇ ಪರೀಕ್ಷೆ ನಡೆಸಲು ಮುಂದಾಗದಂತೆ ಕೋರಿ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಆರ್‌ಟಿಇ ಮಕ್ಕಳು ಮತ್ತು ಪೋಷಕರ ಸಂಘದ ಪರ ವಕೀಲ ಎ.ವೇಲನ್ ಪತ್ರ ಬರೆದಿದ್ದಾರೆ. ಮಾ.31ರವರೆಗೆ ಪರೀಕ್ಷೆ ನಿಗದಿಪಡಿಸುವುದನ್ನು ಮುಂದೂಡಬೇಕು ಎಂದು ಕೋರಿ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪು ಶಿಕ್ಷಣ ವ್ಯವಸ್ಥೆ ಮತ್ತು ಆರ್‌ಇಟಿ, ಮಕ್ಕಳು-ಪೋಷಕರ ಮೇಲೆ ಗಮನಾರ್ಹವಾದ ಪರಿಗಣಾಮ ಬೀರಲಿದೆ. ತೀರ್ಪು ಪ್ರಶ್ನಿಸಿ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಉದ್ದೇಶಿಸಿದೆ. ಸುಪ್ರೀಂಕೋರ್ಟ್‌ಗೆ ಇಂದಿನಿಂದ ಮಾ.31ರವರೆಗೆ ರಜೆಯಿದೆ. ಚಾಲ್ತಿಯಲ್ಲಿದ್ದ ಪರೀಕ್ಷಾ ಪ್ರಕ್ರಿಯೆಯನ್ನು ಸುಪ್ರಿಂಕೋರ್ಟ್ ತಡೆಹಿಡಿದು ಮಾ.12ರಂದು ಆದೇಶಿಸಿತ್ತು. ಪ್ರಕರಣದ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಲಾಗುವುದು. ಆದ್ದರಿಂದ ಪ್ರಕರಣ ಸಂಬಂಧ ಮಾ.31ರವರೆಗೆ ಪರೀಕ್ಷೆ ನಿಗದಿಪಡಿಸುವ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಪತ್ರದಲ್ಲಿ ಕೋರಲಾಗಿದೆ.

ಇದನ್ನೂ ಓದಿ: 5,8, 9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Last Updated : Mar 26, 2024, 12:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.