ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಿಸಲು ಹೈಕೋರ್ಟ್ ಅನುಮತಿ ನೀಡಿ ಆದೇಶಿಸಿದೆ. ಮತ ಚಲಾವಣೆಗೆ ಧಾರವಾಡ ಪ್ರವೇಶಿಸಲು ಅನುಮತಿ ಕೋರಿದ್ದ ಅರ್ಜಿ ವಜಾಗೊಳಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ಗೆ ಅರ್ಜಿ ಅಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜೆ. ಉಮಾ ಅವರಿದ್ದ ನ್ಯಾಯಪೀಠ ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಅಲ್ಲದೆ, ಈ ವೇಳೆ ನೇರವಾಗಿ ಪೋಲಿಂಗ್ ಬೂತ್ಗೆ ಹೋಗಬೇಕು, ಮತ ಚಲಾವಣೆ ಮಾಡಿ ತಕ್ಷಣ ಹಿಂದಿರುಗಬೇಕು. ಈ ವೇಳೆ ಯಾವುದೇ ಸಮಸ್ಯೆಗಳನ್ನು ಉಂಟು ಮಾಡದಂತೆ ತಮ್ಮ ಕಕ್ಷಿದಾರರಿಗೆ ತಿಳಿಸುವಂತೆ ಕುಲಕರ್ಣಿ ಪರ ವಕೀಲರಿಗೆ ಮೌಖಿಕವಾಗಿ ಸೂಚನೆ ನೀಡಿತು. ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ ಕೊಲೆ ಆರೋಪ ಎದುರಿಸುತ್ತಿದ್ದಾರೆ.
ಇದನ್ನೂ ಓದಿ: ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ; ಎಸ್‌ಐಟಿಗೆ ಕೋರ್ಟ್ ನೋಟಿಸ್, ವಿಚಾರಣೆ ಮುಂದೂಡಿಕೆ - h d revanna case