ETV Bharat / state

ಮತದಾನ ಮಾಡಿದ ಗ್ರಾಹಕರಿಗೆ ಉಚಿತ ಆಹಾರ ಒದಗಿಸಲು ಹೋಟೆಲ್‌ಗಳಿಗೆ ಹೈಕೋರ್ಟ್ ಸಮ್ಮತಿ - Free Food For Voters - FREE FOOD FOR VOTERS

ಲೋಕಸಭಾ ಚುನಾವಣೆ ವೇಳೆ ಮತದಾನ ಮಾಡಿದ ಗ್ರಾಹಕರಿಗೆ ಉಚಿತ ಆಹಾರ ಒದಗಿಸಲು ಹೋಟೆಲ್‌ಗಳಿಗೆ ಹೈಕೋರ್ಟ್ ಸಮ್ಮತಿಸಿದೆ.

HIGH COURT  HOTELS TO PROVIDE FREE FOOD  VOTING CUSTOMERS  Bengaluru
ಹೋಟೆಲ್‌ಗಳಿಗೆ ಹೈಕೊರ್ಟ್ ಸಮ್ಮತಿ
author img

By ETV Bharat Karnataka Team

Published : Apr 23, 2024, 10:25 PM IST

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನವಾಗಬೇಕೆಂಬ ಸದುದ್ದೇಶದಿಂದ ಮತದಾನ ಮಾಡಿ ಬರುವ ಗ್ರಾಹಕರಿಗೆ ಉಚಿತ ಆಹಾರ ಒದಗಿಸುವ ಬೆಂಗಳೂರು ಹೋಟೆಲ್ ಸಂಘದ ನಿರ್ಧಾರಕ್ಕೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಬಿಬಿಎಂಪಿ ಆಕ್ಷೇಪಣೆ ವ್ಯಕ್ತಪಡಿಸಿದ್ದನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲ್ ಸಂಘ ಮತ್ತು ನಿಸರ್ಗ ಗ್ರ್ಯಾಂಡ್ ಹೋಟೆಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರ ಸಂಘ ಯಾವುದೇ ರಾಜಕೀಯ ದುರುದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿಲ್ಲ. ಮತದಾನದ ಉತ್ತೇಜನಕ್ಕೆ ನಾವು ಈ ಕಾರ್ಯ ಕೈಗೊಂಡಿದ್ದು, ಈ ಹಿಂದೆಯೂ ಮತದಾರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಉಚಿತ ಆಹಾರ ವಿತರಣೆ ಮಾಡಿದ್ದೇವೆ. ಹಾಗಾಗಿ ನಮ್ಮ ನಿರ್ಧಾರಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

ಕೆಲಕಾಲ ವಾದ ಆಲಿಸಿದ ನ್ಯಾಯಪೀಠ ಅರ್ಜಿದಾರರ ಉತ್ತಮ ನಡೆಗೆ ಪ್ರಶಂಸೆ ವ್ಯಕ್ತಪಡಿಸಿತು. ಚುನಾವಣೆ ದಿನ ಮತಯಾಚನೆ ಮಾಡಿ ಬಂದ ಗ್ರಾಹಕರಿಗೆ ಉಚಿತವಾಗಿ ಆಹಾರ ನೀಡಲು ಅವಕಾಶ ಕಲ್ಪಿಸಿತು.

ಇದನ್ನೂ ಓದಿ: ನ್ಯಾಯಾಲಯದ ಆದೇಶ ಪಾಲಿಸಲು ನಿರಾಸಕ್ತಿ: ಸಿಎಸ್‌ ಸೇರಿದಂತೆ 41 ಇಲಾಖೆಗಳಿಗೆ ನೋಟಿಸ್ - High Court Notice

ETV Bharat Logo

Copyright © 2024 Ushodaya Enterprises Pvt. Ltd., All Rights Reserved.