ETV Bharat / state

ಬೇಸಿಗೆ ಎಫೆಕ್ಟ್​: ಕಪ್ಪು ಕೋಟ್ ಇಲ್ಲದೇ ಕೋರ್ಟ್​ ಕಲಾಪದಲ್ಲಿ ಭಾಗವಹಿಸಲು ವಕೀಲರಿಗೆ ಅವಕಾಶ - High Court

ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ವಿಚಾರಣಾಧೀನ ನ್ಯಾಯಾಲಯದ ವಕೀಲರು ಕಪ್ಪು ಕೋಟ್ ಧರಿಸದೇ ಕಲಾಪದಲ್ಲಿ ಭಾಗಿಯಾಗಲು ವಿನಾಯಿತಿ ನೀಡಲಾಗಿದೆ.

High Court
ಬೇಸಿಗೆ ಎಫೆಕ್ಟ್​: ಕಪ್ಪು ಕೋಟ್ ಇಲ್ಲದೆ ಕೋರ್ಟ್​ ಕಲಾಪದಲ್ಲಿ ಭಾಗವಹಿಸಲು ವಕೀಲರಿಗೆ ಅವಕಾಶ
author img

By ETV Bharat Karnataka Team

Published : Apr 17, 2024, 7:02 AM IST

ಬೆಂಗಳೂರು: ಬೇಸಿಗೆ ಹಿನ್ನೆಲೆಯಲ್ಲಿ ಏಪ್ರಿಲ್ 18 ರಿಂದ ಮೇ 31 ರವರೆಗೆ ಜಿಲ್ಲಾ ಮತ್ತು ವಿಚಾರಣಾಧೀನ ನ್ಯಾಯಾಲಯಗಳಲ್ಲಿ ವಕೀಲರು ಕಪ್ಪು ಕೋಟ್ ಧರಿಸದೇ ಕಲಾಪದಲ್ಲಿ ಭಾಗಿಯಾಗಲು ವಿನಾಯಿತಿ ನೀಡುವ ನಿರ್ಧಾರವನ್ನು ಪೂರ್ಣ ನ್ಯಾಯಾಲಯದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.

Court
ನ್ಯಾಯಾಧೀಶರಿಗೆ ಬೀಳ್ಕೊಡುಗೆ

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರು ಏಪ್ರಿಲ್ 5ರಂದು ನೀಡಿರುವ ಮನವಿ ಆಧರಿಸಿ ಏಪ್ರಿಲ್ 16 ರಂದು ನಡೆದಿರುವ ಪೂರ್ಣ ನ್ಯಾಯಾಲಯದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ದೈನಂದಿನ ಸೂಚಿತ ಡ್ರೆಸ್ ಬದಲಾಗಿ ವಕೀಲರು ಶ್ವೇತವರ್ಣದ ಶರ್ಟ್ ಅಥವಾ ಯಾವುದೇ ಬಣ್ಣದ ಗಂಭೀರತೆ ಬಿಂಬಿಸುವ ಶ್ವೇತವರ್ಣದ ಸಲ್ವಾರ್ ಕಮೀಜ್ ಇಲ್ಲವೇ ಸೀರೆ ಜೊತೆಗೆ ಸಾದಾ ಶ್ವೇತ ವರ್ಣದ ಕುತ್ತಿಗೆ ಬ್ಯಾಂಡ್ ಧರಿಸಿ ಕಲಾಪದಲ್ಲಿ ಭಾಗಿಯಾಗಬಹುದು ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳೆಗೆ ಬೆಂಕಿ ಹಚ್ಚಿ ಕೊಲೆ ಪ್ರಕರಣ: ಸಾಕ್ಷ್ಯಾಧಾರಗಳ ಕೊರತೆ, ಆರೋಪಿಗಳು ಖುಲಾಸೆ - High Court

ನ್ಯಾಯಾಧೀಶರಿಗೆ ಬೀಳ್ಕೊಡುಗೆ: ಮುನ್ಸಿಫ್ ನ್ಯಾಯಾಧೀರಾಗಿ ಹಲವು ವರ್ಷಗಳ ಸೇವೆ ಸಲ್ಲಿಸಿದ್ದ ನಿವೃತ್ತ ನ್ಯಾಯಮೂರ್ತಿ ಅನಿಲ್ ಬಿ.ಕಟ್ಟಿ ಅವರಿಗೆ ವಕೀಲರ ಪರಿಷತ್ ಹಾಗೂ ವಕೀಲರ ಸಂಘದಿಂದ ಗೌರವಿಸಿ ಬೀಳ್ಕೊಡುಗೆ ನೀಡಲಾಯಿತು. ಹೈಕೋರ್ಟ್‌ನ ವಕೀಲರ ಸಂಘದದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ, ನ್ಯಾಯಾಂಗದಲ್ಲೂ ಪ್ರಾಮಾಣಿಕತೆ ಅಪರೂಪ ಎನ್ನುವಂತಾಗಿರುವ ಇಂದಿನ ದಿನಗಳಲ್ಲಿ ನ್ಯಾಯಮೂರ್ತಿ ಅನಿಲ್ ಬಿ.ಕಟ್ಟಿ ಅಂತವರ ನಿಸ್ಪೃಹ ಸೇವೆ ಮತ್ತು ಪ್ರಾಮಾಣಿಕತೆಯಿಂದ ನ್ಯಾಯಾಂಗದ ಘನತೆ ಜೀವಂತವಾಗಿದೆ. ಕಟ್ಟಿ ಅವರ ಸತ್ಯನಿಷ್ಠೆ, ಬದ್ಧತೆ ಮತ್ತು ಪ್ರಾಮಾಣಿಕತೆ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ನ್ಯಾಯಮೂರ್ತಿ ಅನಿಲ್ ಬಿ.ಕಟ್ಟಿ, ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ ಕಾಮತ್ ಮತ್ತಿತರರಿದ್ದರು.

ನ್ಯಾಯಮೂರ್ತಿ ಕಟ್ಟಿ ಅವರು 1995ರಲ್ಲಿ ಮುನ್ಸಿಫ್ ನ್ಯಾಯಾಧೀಶರಾಗಿ ನ್ಯಾಯಾಂಗ ಸೇವೆ ಆರಂಭಿಸಿದರು. ನಂತರ ವಿವಿಧೆಡೆ ಜಿಲ್ಲಾ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿದರು. ಬೆಂಗಳೂರು ನಗರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಿದ ಮರುಗಳಿಗೆಯಲ್ಲೇ 2022ರ ಆಗಸ್ಟ್ 16ರಂದು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ್ದರು.

ಮಂಗಳವಾರ (ಏ.16) ಬೆಳಗ್ಗೆಯಷ್ಟೇ ಕಾಯಂ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಧ್ಯಾಹ್ನದ ಕಲಾಪದಲ್ಲಿ ಬೀಳ್ಕೊಡುಗೆ ಸ್ವೀಕರಿಸಿದರು. ಹೈಕೊರ್ಟ್‌ನಲ್ಲಿ ಈವರೆಗೂ ಹೆಚ್ಚುವರಿ ನ್ಯಾಯಮೂರ್ತಿಗಳಾಗಿದ್ದ ಸಿ.ಎಂ.ಪೂಣಚ್ಚ, ಅನಿಲ್ ಭೀಮಸೇನ ಕಟ್ಟಿ, ಚಂದ್ರಶೇಖರ್ ಮೃತ್ಯಂಜಯ ಜೋಶಿ, ಉಮೇಶ್ ಎಂ.ಅಡಿಗ ಮತ್ತು ಟಿ.ಜಿ.ಶಿವಶಂಕರೇ ಗೌಡ ಅವರ ನೇಮಕಾತಿ ಕಾಯಂಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಎಲ್ಲರಿಗೂ ಪ್ರಮಾಣ ವಚನ ಬೋಧಿಸಿದರು.

ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಜಿ.ಬಸವರಾಜ ಅವರನ್ನು 2024ರ ಆಗಸ್ಟ್ 16ರಿಂದ ಅನ್ವಯವಾಗುವಂತೆ ಪುನಃ ಒಂದು ವರ್ಷ ಹೆಚ್ಚುವರಿ ನ್ಯಾಯಮೂರ್ತಿ ಹುದ್ದೆಯಲ್ಲಿ ಮುಂದುವರೆಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.