ETV Bharat / state

ಮಾಹಿತಿ ಹಕ್ಕು ಆಯೋಗದ ನಿವೃತ್ತ ಅಧಿಕಾರಿಗೆ ಕೇಂದ್ರದ ಯೋಜನೆಯಡಿ ಚಿಕಿತ್ಸೆ ಪಡೆಯಲು ಹೈಕೋರ್ಟ್ ಅನುಮತಿ - Retired Officer To Get Treatment

author img

By ETV Bharat Karnataka Team

Published : Jul 9, 2024, 7:09 AM IST

ಕೇಂದ್ರ ಸರ್ಕಾರದ ಯೋಜನೆಯಡಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಮಾಹಿತಿ ಹಕ್ಕು ಆಯೋಗದ ನಿವೃತ್ತ ಮಾಹಿತಿ ಅಧಿಕಾರಿಗೆ ಅವಕಾಶ ನೀಡಿ ಹೈಕೋರ್ಟ್ ಆದೇಶಿಸಿದೆ.

High Court
ಹೈಕೋರ್ಟ್ (ETV Bharat)

ಬೆಂಗಳೂರು: ಕರ್ನಾಟಕ ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ಎಲ್.ಕೃಷ್ಣಮೂರ್ತಿ ಅವರಿಗೆ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಡಿ (ಸಿಜಿಎಚ್‌ಎಸ್) ಬರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳಲು ಹೈಕೋರ್ಟ್ ಅವಕಾಶ ಮಾಡಿಕೊಟ್ಟಿದೆ.

ಸಿಜಿಎಚ್‌ಎಸ್ ಆಸ್ಪತ್ರೆಗಳಲ್ಲಿ ಕೃಷ್ಣಮೂರ್ತಿ ಅವರಿಗೆ ಚಿಕಿತ್ಸೆ ನೀಡುವಂತೆ ಏಕ ಸದಸ್ಯಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ಪ್ರಕರಣದಲ್ಲಿ ಏಕ ಸದಸ್ಯ ಪೀಠದ ಆದೇಶವನ್ನು ಅನುಮೋದಿಸುತ್ತೇವೆ. ಮೇಲ್ಮನವಿಯನ್ನು ವಜಾಗೊಳಿಸುತ್ತಿದ್ದೇವೆ. ಈ ಕುರಿತು ನಂತರ ವಿವರವಾದ ತೀರ್ಪು ನೀಡಲಾಗುವುದು ಎಂದು ಪೀಠ ಹೇಳಿತು. ಏಕ ಸದಸ್ಯಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂಬ ಕೇಂದ್ರದ ವಾದವನ್ನೂ ಸಹ ತಳ್ಳಿಹಾಕಿದೆ.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ನಿಯಮದಲ್ಲಿ ನಿವೃತ್ತಿಯ ನಂತರ ಪ್ರಯೋಜನಗಳನ್ನು ದೊರಕಿಸಿಕೊಡಲು ಅವಕಾಶವಿಲ್ಲ. ಈ ಕುರಿತು ಆದೇಶ ಹೊರಡಿಸಲಾಗಿದೆ. ಹಾಗಾಗಿ ಏಕ ಸದಸ್ಯ ಪೀಠದ ಅದೇಶವನ್ನು ರದ್ದುಗೊಳಿಸಬೇಕೆಂದು ಕೋರಿದ್ದರು.

ಪ್ರಕರಣದ ಹಿನ್ನೆಲೆ: ಮಾಹಿತಿ ಹಕ್ಕು ಆಯೋಗದ ಮಾಹಿತಿ ಆಯುಕ್ತರಾಗಿದ್ದ ಎಲ್.ಕೃಷ್ಣಮೂರ್ತಿ 2016ರ ಅ.25ರಂದು ನಿವೃತ್ತರಾಗಿದ್ದರು. ನಂತರ ವೈದ್ಯಕೀಯ ಪ್ರಯೋಜನಗಳನ್ನು ಕೋರಿ ಹಲವು ಬಾರಿ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳನ್ನು ಅಧಿಕಾರಿಗಳು ತಿರಸ್ಕರಿಸಿ 2019ರ ಅ.24ರಂದು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ವೈದ್ಯಕೀಯ ಭತ್ಯೆಗಳನ್ನು ನೀಡಲಾಗದು ಎಂದು ತಿಳಿಸಿದ್ದರು.

ಆ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಏಕ ಸದಸ್ಯ ಪೀಠದ ಮೊರೆ ಹೋಗಿದ್ದರು. ಏಕ ಸದಸ್ಯ ಪೀಠವು ವಾದ-ಪ್ರತಿವಾದ ಆಲಿಸಿ, 2023ರ ಜೂ.21ರಂದು ನೀಡಿದ ತೀರ್ಪಿನಂತೆ 2019ರ ಅ.24ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ, ರಾಜ್ಯ ಮಾಹಿತಿ ಆಯುಕ್ತರಿಗೆ ವೈದ್ಯಕೀಯ ಚಿಕಿತ್ಸೆ ವೆಚ್ಚ ಹಾಗೂ ಆಸ್ಪತ್ರೆ ಸೌಕರ್ಯಗಳನ್ನು ಒದಗಿಸಬೇಕು. ವೈದ್ಯಕೀಯ ಚಿಕಿತ್ಸೆಗೆ ಅರ್ಜಿದಾರರು ಅರ್ಹರು. ಆದರೂ ಅರ್ಜಿದಾರರ ಮನವಿ ತಿರಸ್ಕರಿಸಿರುವುದು ಸರಿಯಲ್ಲ ಎಂದು ಏಕ ಸದಸ್ಯ ಪೀಠ ಕೇಂದ್ರ ಸರ್ಕಾರದ ಅದೇಶವನ್ನು ರದ್ದುಗೊಳಿಸಿತ್ತು.

ಇದನ್ನೂ ಓದಿ: ಪವರ್ ಬ್ಯಾಂಕ್ ಹಗರಣ: ಚೀನಾ ಆರೋಪಿಗೆ ಸ್ವದೇಶಕ್ಕೆ ತೆರಳಲು ಅನುಮತಿ ನಿರಾಕರಿಸಿದ ಹೈಕೋರ್ಟ್ - Power Bank scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.