ETV Bharat / state

ದರ್ಶನ್ ಜಾಮೀನು ಅರ್ಜಿ ; ಆರೋಗ್ಯ ಕುರಿತು ಮಾಹಿತಿ ಕೇಳಿದ ಹೈಕೋರ್ಟ್ - DARSHAN HEALTH

ದರ್ಶನ್ ಆರೋಗ್ಯದ ಕುರಿತು ಮಾಹಿತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿದೆ.

high-court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Oct 22, 2024, 12:47 PM IST

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ‌ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರ ಆರೋಗ್ಯದ ಕುರಿತು ಮಾಹಿತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಜಾಮೀನು ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ಅರ್ಜಿಯ ಕುರಿತಂತೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕ ಪ್ರಸನ್ನ ಕುಮಾರ್ ಅವರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ಅರ್ಜಿದಾರ‌ ದರ್ಶನ್ ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದಾರೆ. ವಿಮ್ಸ್ ಆಸ್ಪತ್ರೆಗೆ ನಿನ್ನೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಎಂಆರ್​ಐ ಸ್ಕ್ಯಾನ್ ಮಾಡಿಸಲಾಗಿದೆ. ಬೆನ್ನು ಹುರಿಯ ಸರ್ಜರಿ ಅಗತ್ಯವೆಂದು ವೈದ್ಯರು ಮಾಹಿತಿ ನೀಡಿದ್ದಾರೆ. ಹೀಗಾಗಿ ಅನಾರೋಗ್ಯ ಕಾರಣಕ್ಕೆ ಜಾಮೀನು ಕೇಳುತ್ತಿದ್ದೇವೆ ಎಂದು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರ ದರ್ಶನ್ ಅವರ ವೈದ್ಯಕೀಯ ವರದಿ ನೀಡಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಹಿನ್ನೆಲೆ ದರ್ಶನ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ದರ್ಶನ್‌ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನಗರದ 57ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಅ. 14 ರಂದು ಆದೇಶಿಸಿತ್ತು.

ಇದರಿಂದ ಅ.15 ರಂದು ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್‌, ಪ್ರಕರಣದಲ್ಲಿ ಪ್ರತ್ಯಕ್ಷ ದರ್ಶಿಗಳ ಹೇಳಿಕೆಯನ್ನು ತಡವಾಗಿ ದಾಖಲು ಮಾಡಿಕೊಳ್ಳಲಾಗಿದೆ. ಶವಪರೀಕ್ಷೆಯನ್ನು ಸಹ ವಿಳಂಬವಾಗಿ ಮಾಡಲಾಗಿದೆ. ಪ್ರತ್ಯಕ್ಷ ಸಾಕ್ಷಿದಾರರನ್ನು ತನಿಖಾಧಿಕಾರಿಗಳೇ ಸೃಷ್ಟಿ ಮಾಡಿದ್ದಾರೆ. ಪ್ರಕರಣದಲ್ಲಿ ಇತರೆ ಆರೋಪಿಗಳೊಂದಿಗೆ ತಾನು ಯಾವುದೇ ಒಳಸಂಚು ರೂಪಿಸಿಲ್ಲ. ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಹೆಚ್ಚಿನ ತನಿಖೆ ಅಗತ್ಯ ಇಲ್ಲವಾಗಿದೆ. ಹಾಗೆಯೇ, ತಾನು ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಕೇಸ್: ಅ.22ರಂದು ಹೈಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.