ETV Bharat / state

ಗ್ರಾ.ಪಂ ಅಧ್ಯಕ್ಷ /ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದವರ ವಿರುದ್ಧ ಅವಿಶ್ವಾಸ ಮಂಡಿಸಲು 15 ತಿಂಗಳು ಕಳೆಯಬೇಕು: ಹೈಕೋರ್ಟ್​ - High Court - HIGH COURT

ಗ್ರಾ.ಪಂ ಅಧ್ಯಕ್ಷ /ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆ ಅಥವಾ ಅನರ್ಹಗೊಂಡಿದ್ದರೆ ಅಥವಾ ಮರಣವನ್ನಪ್ಪಿದಲ್ಲಿ ಅದೇ ಹುದ್ದೆಗೆ ಆಯ್ಕೆಯಾದವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕನಿಷ್ಠ 15 ತಿಂಗಳು ಕಳೆದಿರಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಹೈಕೋರ್ಟ್​
ಹೈಕೋರ್ಟ್​ (ETV Bharat)
author img

By ETV Bharat Karnataka Team

Published : Jun 20, 2024, 12:27 PM IST

Updated : Jun 20, 2024, 4:33 PM IST

ಬೆಂಗಳೂರು: ಗ್ರಾಮ ಪಂಚಾಯತ್​​ ಅಧ್ಯಕ್ಷರು ಅಥವಾ ಉಪಾಧ್ಯಕ್ಷರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದು, ಅನರ್ಹಗೊಳ್ಳುವುದು ಮತ್ತು ಮರಣವನ್ನಪ್ಪಿದಲ್ಲಿ ಅದೇ ಹುದ್ದೆಗೆ ಆಯ್ಕೆಯಾದವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕನಿಷ್ಠ 15 ತಿಂಗಳು ಕಳೆದಿರಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಅಧ್ಯಕ್ಷ/ಉಪಾಧ್ಯಕ್ಷರ ರಾಜೀನಾಮೆ ಬಳಿಕ ಆಯ್ಕೆಯಾದ ಸದಸ್ಯರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು 15 ತಿಂಗಳು ಕಳೆಯಬೇಕಾದ ಅಗತ್ಯವಿಲ್ಲ ಎಂಬುದಾಗಿ ಆದೇಶಿಸಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಯಲಹಂಕ ತಾಲೂಕಿನ ಬಾಗಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಪ್ರೀತಿ ಮುನೇಗೌಡ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, "ಪಂಚಾಯತ್​ ರಾಜ್‌ನಂತಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಿಶ್ವಾಸವೆಂಬ ಅಸ್ತ್ರವು ಅಧಿಕಾರ ಕೂಗುಮರಿಗಳಿಂದ ಅಪಾಯಕಾರಿಯಾಗಿರಲಿದೆ. ಅನೈತಿಕ ರಾಜಕೀಯ ಹಿತಾಸಕ್ತಿ ಈಡೇರಿಸುವುದು ಮತ್ತು ಕ್ಷುಲ್ಲಕ ಕಾರಣಗಳಿಂದ ಅತೃಪ್ತಿ ಗುಂಪುಗಳಿಂದ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುವ ಪ್ರವೃತ್ತಿಯನ್ನು ನಿಯಂತ್ರಿಸುವುದು ಪಂಚಾಯತ್ ರಾಜ್ ಕಾಯ್ದೆ ಸೆಕ್ಷನ್ 49(2)ರ ಮೂಲ ಉದ್ದೇಶವಾಗಿದೆ".

"ಹೀಗಾಗಿ 15 ತಿಂಗಳ ಕಾಲ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ಅವಕಾಶವಿರುವುದಿಲ್ಲ. ಆದ್ದರಿಂದ ಅಧ್ಯಕ್ಷರ ಚುನಾವಣೆ ದಿನಾಂಕದಿಂದ ಮೊದಲ 15 ತಿಂಗಳವರೆಗೂ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ನಿರ್ಬಂಧವಿರಲಿದೆ" ಎಂದು ಪೀಠ ತಿಳಿಸಿದೆ. ಅಲ್ಲದೆ, "ಪ್ರಸ್ತುತದ ಪ್ರಕರಣದಲ್ಲಿ 2023ರ ಮಾರ್ಚ್ 7 ರಂದು ಅಧಿಕಾರ ವಹಿಸಿಕೊಂಡಿದ್ದು, ಪಂಚಾಯತ್ ರಾಜ್(ತಿದ್ದುಪಡಿ) ಕಾಯ್ದೆ 2021ರ ಸೆಕ್ಷನ್ 49ರ ಅಡಿಯಲ್ಲಿ ತಿಳಿಸಿರುವಂತೆ ಅಧಿಕಾರ ವಹಿಸಿಕೊಂಡ 15 ತಿಂಗಳ ಒಳಗಾಗಿ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶವಿಲ್ಲ" ಎಂದು ಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ?: ಅರ್ಜಿದಾರರು 2021ರ ಡಿಸೆಂಬರ್ 27ರಂದು ಬಾಗಲೂರು ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದು, 2022ರ ಜನವರಿ 18 ರಂದು ಹಮೀದಾ ಎಂಬುವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2023ರ ಫೆಬ್ರವರಿ 1ರಂದು ಹಮೀದಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಂದೇ ರಾಜೀನಾಮೆಯನ್ನು ಪುರಸ್ಕರಿಸಲಾಗಿತ್ತು.

ಅದೇ ಸ್ಥಾನಕ್ಕೆ 2023ರ ಮಾರ್ಚ್ 7ರಂದು ಹೊಸದಾಗಿ ಚುನಾವಣೆ ನಡೆದು ಅಧ್ಯಕ್ಷರ ಹುದ್ದೆಗೆ ಪ್ರೀತಿ ಮುನೇಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬಳಿಕ 2023ರ ಅಕ್ಟೋಬರ್ 10ರಂದು ಪ್ರೀತಿ ಮುನೇಗೌಡರ ವಿರುದ್ಧ ಇತರೆ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದರು. 2023ರ ನವೆಂಬರ್ 21 ನಿರ್ಣಯ ಮಂಡಿಸಲು ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಪ್ರೀತಿ ಮುನೇಗೌಡ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರೀತಿ ಮುನೇಗೌಡ ಅವರು 2023ರ ಮಾರ್ಚ್ ತಿಂಗಳಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 49ರ ಅವರ ವಿರುದ್ಧ 15 ತಿಂಗಳ ಮುನ್ನ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ಅವಕಾಶವಿಲ್ಲ. ಅಲ್ಲದೆ, ಅಧ್ಯಕ್ಷರಾಗಿ ಆಯ್ಕೆಯಾದ ಎಂಟು ತಿಂಗಳ ಒಳಗೆ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ.

ಅದನ್ನು ಪರಿಗಣಿಸುವುದು ಮತ್ತು ಚುನಾವಣಾ ಸಭೆಗೆ ನೋಟಿಸ್ ನೀಡುವುದಕ್ಕೆ ನಿಯಮ ಬಾಹಿರ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠ, ಅರ್ಜಿ ವಜಾಗೊಳಿಸಿ, ಅವಿಶ್ವಾಸ ನಿರ್ಣಯ ಮಂಡಿಸಲು 15 ತಿಂಗಳ ಕಾಲಾವಕಾಶ ಅಗತ್ಯವಿಲ್ಲ ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ವಿದೇಶಿಯರಿಗೆ ವೈದ್ಯಕೀಯ ವೀಸಾ ನೀಡುವಾಗ ಸೂಕ್ಷ್ಮವಾಗಿ ಪರಿಶೀಲಿಸಿ: ಎಫ್‌ಆರ್‌ಆರ್‌ಒಗೆ ಹೈಕೋರ್ಟ್ ನಿರ್ದೇಶನ - High Court

Last Updated : Jun 20, 2024, 4:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.