ETV Bharat / state

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ - BS YEDIYURAPPA

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

HIGH COURT DENIED TO QUASH POCSO CASE AGAINST FORMER CM BS YEDIYURAPPA
ಯಡಿಯೂರಪ್ಪ ವಿರುದ್ಧದ ಫೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ (ETV Bharat)
author img

By ETV Bharat Karnataka Team

Published : Feb 7, 2025, 11:10 AM IST

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ಹೈಕೋರ್ಟ್, ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.

ಅಲ್ಲದೆ, ಬಂಧನದ ಭೀತಿಯಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಪುರಸ್ಕರಿಸಿದ್ದು, ಬಂಧನದಿಂದ ಅವರು ನಿರಾಳರಾಗಿದ್ದಾರೆ. ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆಯನ್ನು ಜನವರಿ 17ರಂದು ಪೂರ್ಣಗೊಳಿಸಿತ್ತು. ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಶುಕ್ರವಾರ ಪ್ರಕಟಿಸಿತು.

ಸಿಆರ್‌ಪಿಸಿ 161 (ತನಿಖಾಧಿಕಾರಿಗಳ ಮುಂದೆ ಹೇಳಿಕೆ ದಾಖಲು) ಮತ್ತು 164 (ವಿಚಾರಣಾ ನ್ಯಾಯಾಧೀಶರ ಮುಂದೆ ಹೇಳಕೆ ದಾಖಲು) ಅಡಿಯಲ್ಲಿ ಸಂತ್ರಸ್ತರಿಂದ ಹೇಳಿಕೆಗಳನ್ನು ದಾಖಲಿಸಿಕೊಂಡ ಬಳಿಕ ಅಪರೂಪದಲ್ಲಿ ಅಪರೂಪದ ಸಂದರ್ಭದಲ್ಲಿ ಮಾತ್ರ ಪ್ರಕರಣ ರದ್ದುಗೊಳಿಸಬಹುದಾಗಿದೆ ಎಂದು ಅಭಿಪ್ರಾಯ ಪಟ್ಟಿದೆ.

ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡ ಬಳಿಕವೂ ಅಂತಹ ಹೇಳಿಕೆಗಳನ್ನು ಪರಿಶೀಲಿಸುವಂತಿಲ್ಲ ಎಂದು ಯಾವುದೇ ಕಾನೂನಿನಲ್ಲಿ ಇಲ್ಲ. ಆನ್ಯಾಯ ತಡೆಗಟ್ಟವ ಸಲುವಾಗಿ ಪ್ರತಿ ಪ್ರಕರಣಕ್ಕೂ ಭಿನ್ನವಾಗಿರಲಿದೆ. ಹೀಗಾಗಿ ಈ ಹಂತದಲ್ಲಿ ಪ್ರಕರಣ ರದ್ದುಗೊಳಿಸುವ ಅಧಿಕಾರವನ್ನು ಚಲಾಯಿಸಲಾಗದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಜೊತೆಗೆ, ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯ ತೆಗೆದುಕೊಂಡಿದ್ದ ಕಾಜ್ಞೆಜೆನ್ಸ್ ಯಡಿಯೂರಪ್ಪನವರಿಗೆ ಸೀಮಿತಗೊಳಿಸುವಂತೆ ರದ್ದುಪಡಿಸಿದ್ದು, ಹೊಸದಾಗಿ ಪರಿಗಣಿಸಬೇಕು ಎಂದು ನಿರ್ದೇಶನ ನೀಡಿ ಆದೇಶಿಸಿದೆ.

ಪೋಕ್ಸೋ ಪ್ರಕರಣದಲ್ಲಿ ಬಿಎಸ್​ವೈಗೆ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನೀಡಿದ ಷರತ್ತುಗಳು:

  • 5 ಲಕ್ಷ ರೂ ಮೌಲ್ಯದ ವೈಯಕ್ತಿಕ ಬಾಂಡ್‌ ಮತ್ತು ಇಬ್ಬರ ಭದ್ರತೆ ಒದಗಿಸಬೇಕು.
  • ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಮತ್ತು ತನಿಖೆಗೆ ಅಡ್ಡಿ ಮಾಡಬಾರದು.
  • ಪೂರ್ವಾನುಮತಿ ಇಲ್ಲದೇ ಸಕ್ಷಮ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೊರಹೋಗುವಂತಿಲ್ಲ.

ಮೇಲಿನ ಷರತ್ತಗಳನ್ನು ಉಲ್ಲಂಘಿಸಿದರೆ ನಿರೀಕ್ಷಣಾ ಜಾಮೀನು ರದ್ದತಿ ಕೋರಲು ಪ್ರಾಸಿಕ್ಯೂಷನ್‌ ಸ್ವತಂತ್ರವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ, ಅರ್ಜಿದಾರರು 80 ವರ್ಷ ವಯೋಮಾನದವರಾಗಿದ್ದು, ಮುಖ್ಯಮಂತ್ರಿ ಹುದ್ದೆ ನಿಭಾಯಿಸಿದ್ದರಿಂದ ಅವರು ವಿಚಾರಣೆಗೆ ಸಹಕರಿಸುವುದಿಲ್ಲ ಎನ್ನಲಾಗದು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಜೊತೆಗೆ, ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಕ್ಷಮ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಹೈಕೋರ್ಟ್​​ ರದ್ದುಮಾಡಿದೆ.

ಸಕ್ಷಮ ನ್ಯಾಯಾಲಯವು ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಯಡಿಯೂರಪ್ಪ ಅವರಿಗೆ ಸೀಮಿತವಾಗಿ ವಜಾ ಮಾಡಲಾಗಿದೆ. ಅಪರಾಧ, ತನಿಖೆ, ಅಂತಿಮ ವರದಿ ಎಲ್ಲವೂ ಮುಂದುವರೆಯಲಿದೆ.. ಈ ಆದೇಶದಲ್ಲಿ ಮಾಡಿರುವ ಅಭಿಪ್ರಾಯಗಳನ್ನು ಗಮನದಲ್ಲಿ ಇಟ್ಟುಕೊಂಡು ಅಂತಿಮ ವರದಿಗೆ ಸಂಬಂಧಿಸಿದಂತೆ ಆದೇಶ ಮಾಡಲು ಪ್ರಕರಣವನ್ನು ಮತ್ತೆ ಸಕ್ಷಮ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಸಂಜ್ಞೇ ಪರಿಗಣಿಸಿರುವ ಆದೇಶ ಹೊರತುಪಡಿಸಿ ಉಭಯ ಪಕ್ಷಕಾರರ ಪರ ಹಿರಿಯ ವಕೀಲರ ಎತ್ತಿರುವ ಯಾವುದೇ ವಾದಗಳಿಗೆ ಈ ನ್ಯಾಯಾಲಯವು ಉತ್ತರಿಸಿಲ್ಲ. ಎಲ್ಲಾ ವಾದಗಳನ್ನು ಮುಕ್ತವಾಗಿರಿಸಲಾಗಿದ್ದು, ಅರ್ಜಿದಾರರು ಸೂಕ್ತ ಸಂದರ್ಭದಲ್ಲಿ ಸೂಕ್ತ ವೇದಿಕೆಯಲ್ಲಿ ಪರಿಹಾರ ಪಡೆಯಬಹುದಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಪ್ರಕರಣದ ಕುರಿತು ಸದಾಶಿವನಗರ ಠಾಣಾ ಪೊಲೀಸರು 2024ರ ಮಾರ್ಚ್​​ 14ರಂದು ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಅದನ್ನು ರದ್ದುಪಡಿಸಲು ಕೋರಿ ಯಡಿಯೂರಪ್ಪ ಅವರು 2024ರ ಜೂನ್​ 13ರಂದು ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಜೂನ್​ 14ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣದ ತನಿಖೆ ತಡೆ ನೀಡಲು ನಿರಾಕರಿಸಿತ್ತಾದರೂ ಬಿಎಸ್​ವೈ ಅವರನ್ನು ಬಂಧಿಸದಂತೆ ಸಿಐಡಿ ತನಿಖಾಧಿಕಾರಿಗಳಿಗೆ ಸೂಚಿಸಿತ್ತು.

ನಂತರ ಪ್ರಕರಣದ ಕುರಿತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ಯಡಿಯೂರಪ್ಪ ಅವರಿಗೆ ವಿನಾಯ್ತಿ ನೀಡಿ, 2024ರ ಜುಲೈ 12ರಂದು ಹೈಕೋರ್ಟ್ ಮತ್ತೊಂದು ಆದೇಶ ಮಾಡಿತ್ತು. ಅಂತಿಮವಾಗಿ 2025ರ ಜನವರಿ 17ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಇದನ್ನೂ ಓದಿ: ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೊರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.