ETV Bharat / state

ವೈದ್ಯೆಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯಾಧಿಕಾರಿ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್ - Sexual Assault By doctor - SEXUAL ASSAULT BY DOCTOR

ವೈದ್ಯೆಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಲಿ. ನಂತರ ಆರೋಪಗಳನ್ನು ಕೈಬಿಡುವಂತೆ ಕೋರಿ ಆರೋಪಿ ವೈದ್ಯ ಅರ್ಜಿ ಸಲ್ಲಿಸಲಿ ಎಂದು ಹೈಕೋರ್ಟ್ ಸೂಚಿಸಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Aug 24, 2024, 8:11 AM IST

ಬೆಂಗಳೂರು: ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ ಘನತೆಗೆ ಧಕ್ಕೆ ತಂದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೋ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ತನ್ನ ವಿರುದ್ಧ ಕುಂದಾಪುರ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಡಾ.ರಾಬರ್ಟ್‌ ರೆಬೆಲ್ಲೋ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುವ ವೈದ್ಯರನ್ನು ಸುಮ್ಮನೆ ಬಿಡಲು ಸಾಧ್ಯವೇ ಇಲ್ಲ ಎಂದು ಮಾರ್ಮಿಕವಾಗಿ ನುಡಿದಿದೆ. ಸಾಕ್ಷ್ಯಧಾರಗಳನ್ನು ಪರಿಶೀಲಿಸಿದರೆ ಅರ್ಜಿದಾರನು ದೂರುದಾರ ವೈದ್ಯೆಗೆ ಕಿರುಕುಳ ನೀಡಿರುವ ಬಗ್ಗೆ ತಿಳಿಯಲಿದೆ. ಈ ಹಂತದಲ್ಲಿ ಎಫ್‌ಐಆರ್‌ ರದ್ದುಪಡಿಸಲಾಗದು ಎಂದು ತಿಳಿಸಿದೆ.

ಅಲ್ಲದೆ, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಲಿ. ನಂತರ ಆರೋಪಗಳ ಕೈಬಿಡಲು ಕೋರಿ ಆರೋಪಿ ವೈದ್ಯ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿತು. ಇದರಿಂದ ಅರ್ಜಿಯನ್ನು ಅರ್ಜಿದಾರ ಪರ ವಕೀಲರು ಹಿಂಪಡೆದರು.

ಮಧ್ಯರಾತ್ರಿ ಊಟಕ್ಕೆ ಕರೆದಿದ್ದೇಕೆ?: ಇದಕ್ಕೂ ಮುನ್ನ ಪ್ರಕರಣದಲ್ಲಿ ದೂರುದಾರ ವೈದ್ಯೆಗೆ ಆರೋಪಿ ವೈದ್ಯ ಮಧ್ಯರಾತ್ರಿ ಊಟ ಕರೆದ, ಅಶ್ಲೀಲ ಸಂದೇಶ ಕಳುಹಿಸಿದ ಮತ್ತು ಆಕೆಯ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ತನಿಖಾ ದಾಖಲೆಗಳಿಂದ ಗೊತ್ತಾಗುತ್ತಿದೆ ಎಂದು ಪೀಠ ತಿಳಿಸಿತು. ವಿಚಾರಣೆ ವೇಳೆ ವೈದ್ಯರ ಪರ ವಕೀಲರು, ಕರ್ತವ್ಯ ಸಮಯದ ನಂತರ ಮತ್ತು ಮಧ್ಯರಾತ್ರಿಯಲ್ಲಿ ದೂರುದಾರರಾದ ವೈದ್ಯೆಗೆ ಸಂದೇಶ ಕಳುಹಿಸಿದ ಮತ್ತು ವಿಡಿಯೋ ಕಾಲ್‌ ಮಾಡಿ ದೂರುದಾರ ವೈದ್ಯೆಗೆ ಕಿರುಕುಳ ನೀಡಿದ ಆರೋಪ ಅರ್ಜಿದಾರರ ಮೇಲಿದೆ. ಆದರೆ, ಅರ್ಜಿದಾರರು ಯಾವುದೇ ಅಪರಾಧ ಎಸಗಿಲ್ಲ ಎಂದು ತಿಳಿಸಿದರು. ಇದರಿಂದ ಬೇಸರಗೊಂಡ ನ್ಯಾಯಮೂರ್ತಿಗಳು, ಏಕೆ ಮಧ್ಯರಾತ್ರಿ ಸಂದೇಶ ಕಳುಹಿಸಲಾಗಿದೆ ಹಾಗೂ ಕರೆ ಮಾಡಲಾಗಿದೆ ಎಂದು ಪ್ರಶ್ನಿಸಿದರು.

ಅದಕ್ಕೆ, ಅರ್ಜಿದಾರ ವಕೀಲರು, ದೂರುದಾರೆಗೆ ಯಾವುದೇ ಅಶ್ಲೀಲ ಅಥವಾ ಅಪರಾಧ ಸಂದೇಶವನ್ನು ಅರ್ಜಿದಾರರು ಕಳುಹಿಸಿಲ್ಲ ಎಂದು ಉತ್ತರಿಸಿದರು. ಇದಕ್ಕೆ ಪೀಠ, ಮತ್ತೇನು? ಗುಡ್‌ ಮಾರ್ನಿಂಗ್‌, ಗುಡ್‌ ನೈಟ್‌ ಮಸೇಜ್‌ ಕಳುಹಿಸಿದ್ದೀರಾ? ಅರ್ಜಿದಾರರ ಪರ ವಕೀಲರು ಉತ್ತರಿಸಿ, ಅದು ಸಹ ಇದೆ. ಕೆಲ ಚರ್ಚೆಯ ಸಂದೇಶ ಕಳುಹಿಸಲಾಗಿದೆ. ಅವು ಅಪರಾಧದ ಸಂದೇಶಗಳಲ್ಲ. ದೂರುದಾರೆ ಸಹ ಆರೋಪಿಯ ಸಂದೇಶಕ್ಕೆ ಉತ್ತರಿಸಿದ್ದಾರೆ ಎಂದು ಸಮಜಾಯಿಸಿ ನೀಡಿದರು.

ಇದರಿಂದ ತೀವ್ರ ಅಸಮಾಧಾನಗೊಂಡ ನ್ಯಾಯಮೂರ್ತಿಗಳು, ನೀವು ಯಾವ ಸಂದೇಶ ಕಳುಹಿಸಿದ್ದೀರಾ? ಎಂಬ ಬಗ್ಗೆ ದಾಖಲೆಗಳು ಕೋರ್ಟ್‌ ಮುಂದಿವೆ. ಅವುಗಳನ್ನು ನಿಮಗೆ ನೀಡಲೇ? ತಡರಾತ್ರಿ ಊಟಕ್ಕೆ ಬರುವಂತೆ ದೂರುದಾರೆಗೆ ಏಕೆ ಹೇಳುತ್ತಿದ್ದೀರಿ? ಅರ್ಜಿದಾರರು ಸರ್ಕಾರಿ ನೌಕರ. ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವವರು. ಸಿಬ್ಬಂದಿಯನ್ನು ಲೈಂಗಿಕವಾಗಿ ಹಿಂಸಿಸುವ ವೈದ್ಯರನ್ನು ಬಿಡಲು ಸಾಧ್ಯವೇ ಇಲ್ಲ. ದೋಷಾರೋಪ ಪಟ್ಟಿ ಸಲ್ಲಿಸಿದ ನಂತರ ಎಲ್ಲಾ ಸಂಗತಿಗಳು ತಿಳಿಯಲಿವೆ ಎಂದು ಚಾಟಿ ಬೀಸಿದರು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ‌ ಎಂಡಿ ಪದ್ಮನಾಭ್​, ಸತ್ಯನಾರಾಯಣ ಇಟಕಾರಿ ಇಡಿ ಕಸ್ಟಡಿಗೆ - Valmiki Corporation Scam

ETV Bharat Logo

Copyright © 2025 Ushodaya Enterprises Pvt. Ltd., All Rights Reserved.