ETV Bharat / state

ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್ ಕಾರಿಡಾರ್ ಮಾರ್ಗದಲ್ಲಿ ಮೇಲ್ಸೇತುವೆ ಮನವಿ ಪರಿಗಣಿಸಲು ಸೂಚಿಸಿದ ಹೈಕೋರ್ಟ್ - High Court

ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್ ಕಾರಿಡಾರ್ ಮಾರ್ಗದಲ್ಲಿ ಮೇಲ್ಸೇತುವೆ ನಿರ್ಮಿಸುವಂತೆ ಕೋರಿ ಸಲ್ಲಿಕೆಯಾದ ಮನವಿಯನ್ನು ಪರಿಗಣಿಸುವಂತೆ ಎನ್​ಎಚ್​ಐಎಗೆ ಹೈಕೋರ್ಟ್​ ಸೂಚನೆ ನೀಡಿದೆ.

High court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jun 5, 2024, 11:05 PM IST

ಬೆಂಗಳೂರು : ಬೆಂಗಳೂರು - ಚೆನ್ನೈ ಎಕ್ಸ್​​ಪ್ರೆಸ್ ಕಾರಿಡಾರ್ ಮಾರ್ಗದಲ್ಲಿ ಹೊಸಕೋಟೆ ತಾಲೂಕಿನ ಕೊಳತೂರು ಜಂಕ್ಷನ್ ಬಳಿ ಮೇಲ್ಸೇತುವೆ ನಿರ್ಮಿಸುವಂತೆ ಕೋರಿ ಸ್ಥಳೀಯರು ಸಲ್ಲಿಸಿರುವ ಮನವಿಯನ್ನು ಮುಂದಿನ ಎಂಟು ವಾರಗಳಲ್ಲಿ ಪರಿಗಣಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಐಎ)ಕ್ಕೆ ಹೈಕೋರ್ಟ್ ಸೂಚಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ರೈತ ಕೆ. ವಿ ರವಿಕುಮಾರ್ ಸೇರಿದಂತೆ ಕೊಳತೂರು, ಅಪ್ಪಸಂದ್ರ, ಸೋಲೂರು, ಊರಹಳ್ಳಿ ಗ್ರಾಮಗಳ ಒಟ್ಟು 13 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ. ವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ. ಶಿವಪ್ರಕಾಶ್ ವಾದ ಮಂಡಿಸಿ, ಕಾರಿಡಾರ್ ನಿರ್ಮಾಣದಿಂದ ಗ್ರಾಮೀಣ ಭಾಗದ ನಿವಾಸಿಗಳು ಅನಪೇಕ್ಷಿತ ತೊಂದರೆ ಅನುಭವಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕೊಳತೂರು ಗ್ರಾಮದ ಮುಖ್ಯ ರಸ್ತೆಯು ಕನಿಷ್ಠ 20 ಗ್ರಾಮಗಳನ್ನು ಸಂಪರ್ಕಿಸುತ್ತದೆ. ಈ ಗ್ರಾಮ ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2ನೇ ಸ್ಥಾನದಲ್ಲಿದೆ.

ಸಮೀಪದಲ್ಲೇ ಜಿಲ್ಲಾ ತಾಯಿ ಮಕ್ಕಳ ಆಸ್ಪತ್ರೆ ಇದ್ದು, ಪ್ರತಿದಿನ ನೂರಾರು ಜನರು ಹೋಗುತ್ತಾರೆ. ಈ ಭಾಗದಲ್ಲಿ ಪ್ರತಿ ದಿನ ಸರಾಸರಿ ಒಂದು ಸಾವಿರ ವಾಹನಗಳ ಸಂಚಾರವಿದೆ. ಮುಖ್ಯವಾಗಿ ಶಾಲಾ ಮಕ್ಕಳು ಮತ್ತು ಹಾಲು ಸಾಗಣೆ ವಾಹನಗಳು, ಉಗ್ರಾಣಗಳಿಂದ ತರಕಾರಿ, ಹಣ್ಣು, ಇತ್ಯಾದಿ ದಿನಬಳಕೆ ಸಾಮಗ್ರಿಗಳ ಸರಬರಾಜು ನೇರವಾಗಿ ಬೆಂಗಳೂರು-ಕೋಲಾರ ರಸ್ತೆಯ ರಾಷ್ಟ್ರೀಯ ಹೆದ್ದಾರಿ-75ಕ್ಕೆ ತಲುಪುತ್ತದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಆದ್ದರಿಂದ, ಕೊಳತೂರು ಮತ್ತು ಸುತ್ತಲಿನ 20 ಗ್ರಾಮಗಳನ್ನು ಸಂಧಿಸುವ ರಾಷ್ಟ್ರೀಯ ಹೆದ್ದಾರಿ-75 ಹಾಗೂ 648 ರ ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್ ಕಾರಿಡಾರ್‌ಗೆ ಸಂಪರ್ಕ ಕಲ್ಪಿಸುವ ಕೊಳತೂರು ಜಂಕ್ಷನ್ ಬಳಿ ಮೇಲ್ಸೇತುವೆ ನಿರ್ಮಿಸಬೇಕು.

ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ಸಂಬಂಧಪಟ್ಟ ಪ್ರಾಧಿಕಾರ ಹಾಗೂ ಇಲಾಖೆಗಳಿಗೆ 2023ರ ಸೆ.4 ರಂದು ಮನವಿ ಕೊಟ್ಟರೂ ಈವರೆಗೆ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ ಸ್ಥಳೀಯರ ಮನವಿ ಪರಿಗಣಿಸುವಂತೆ ಸಂಬಂಧಪಟ್ಟ ಪ್ರಾಧಿಕಾರ ಹಾಗೂ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಈ ಅಂಶವನ್ನು ಪರಿಗಣಿಸಿದ ನ್ಯಾಯಪೀಠ, ಸ್ಥಳೀಯರು ಸಲ್ಲಿಸಿರುವ ಮನವಿಯನ್ನು ಎಂಟು ವಾರಗಳಲ್ಲಿ ಕಾನೂನು ರೀತಿ ಪರಿಗಣಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಇತರ ಪ್ರಾಧಿಕಾರಿಗಳಿಗೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿತು.

ಇದನ್ನೂ ಓದಿ : ತತ್ಕಾಲ್ ಸೇವೆ ಸಲ್ಲಿಸಿರುವ ಭೂ ಮಾಪಕರಿಗೆ ನಿಗದಿತ ಸಂಭಾವನೆ ಪಾವತಿಸಲು ಹೈಕೋರ್ಟ್ ಸೂಚನೆ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.