ETV Bharat / state

ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಅಧ್ಯಕ್ಷರ ನೇಮಿಸಲು ಹೈಕೋರ್ಟ್ ನಿರ್ದೇಶನ - ಹೈಕೋರ್ಟ್

ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಸದಸ್ಯರು ಮತ್ತು ಅಧ್ಯಕ್ಷರನ್ನು ನೇಮಿಸುವ ಬಗ್ಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದರು.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Jan 26, 2024, 3:49 PM IST

ಬೆಂಗಳೂರು : ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರದ (ರೇರಾ) ಮೇಲ್ಮನವಿ ನ್ಯಾಯಾಧಿಕರಣಕ್ಕೆ ಅಧ್ಯಕ್ಷರ ನೇಮಕಾತಿ ವಿಳಂಬವು ನ್ಯಾಯಾಲಯದಲ್ಲಿ ಬಾಕಿ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದ್ದು, ಶೀಘ್ರದಲ್ಲಿ ಅಧ್ಯಕ್ಷರ ನೇಮಕ ಮಾಡಬೇಕು ಎಂದು ನಿರ್ದೇಶನ ನೀಡಿದೆ.

ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಮುಖ್ಯಸ್ಥರನ್ನು ನೇಮಿಸುವಂತೆ ಕೋರಿ ಬೆಂಗಳೂರಿನ ಮ್ಯಾಥ್ಯೂ ಥಾಮಸ್‌ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು. ನ್ಯಾಯಾಧಿಕರಣಕ್ಕೆ ಅಧ್ಯಕ್ಷರನ್ನು ನೇಮಿಸಲು ಹಾಗೂ ಅಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಕ್ರಮಕೈಗೊಂಡಿಲ್ಲ. ರೇರಾದ ಸೆಕ್ಷನ್‌ 22ರ ಪ್ರಕಾರ ರಾಜ್ಯ ಸರ್ಕಾರ ಹುದ್ದೆಗಳನ್ನು ತುಂಬಿದರೆ ಪ್ರಕ್ರಿಯೆ ಮುಂದುವರಿಯಲಿದೆ. ರೇರಾ ಹೊರಡಿಸಿದ ಆದೇಶಗಳನ್ನು ಕಾಯಿದೆಯ ಸೆಕ್ಷನ್‌ 44(5)ರ ಅಡಿ ಪ್ರಶ್ನಿಸಬಹುದಾಗಿದೆ. ಮೇಲ್ಮನವಿ ನ್ಯಾಯಾಧಿಕರಣವು 60 ದಿನಗಳ ಒಳಗಾಗಿ ಮೇಲ್ಮನವಿ ಇತ್ಯರ್ಥಪಡಿಸಬೇಕು.‌ ಆದರೆ, ನ್ಯಾಯಾಧಿಕರಣಕ್ಕೆ ಅಧ್ಯಕ್ಷರನ್ನು ನೇಮಕ ಮಾಡದಿರುವುದರಿಂದ ಸಕ್ಷಮ ಪ್ರಾಧಿಕಾರ ಮಾಡಿದ ಆದೇಶಗಳನ್ನು ಪ್ರವರ್ತಕರು ಪ್ರಶ್ನಿಸಿದ್ದು, ಸಾಕಷ್ಟು ಅರ್ಜಿಗಳು ಹೈಕೋರ್ಟ್‌ಗೆ ಸಲ್ಲಿಕೆಯಾಗಿವೆ ಎಂದು ತಿಳಿಸಿದೆ.

ಅಲ್ಲದೇ, ಈ ಎಲ್ಲ ಅರ್ಜಿಗಳು ನ್ಯಾಯಾಧಿಕರಣದ ಮುಂದೆ ಸಲ್ಲಿಸಬೇಕಾಗಿದೆ. ನ್ಯಾಯಾಧಿಕರಣ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಏಕೈಕ ಕಾರಣಕ್ಕೆ ಈ ನ್ಯಾಯಾಲಯದಲ್ಲಿ ಸಾಕಷ್ಟು ಅರ್ಜಿಗಳು ಬಾಕಿ ಉಳಿದಿವೆ. ರಾಜ್ಯ ಸರ್ಕಾರವು ಅಧ್ಯಕ್ಷರನ್ನು ನೇಮಕ ಮಾಡದಿರುವುದರಿಂದ ನ್ಯಾಯಾಧಿಕರಣ ಕೆಲಸ ಮಾಡುತ್ತಿಲ್ಲ. ಹೀಗಾಗಿ, ಮೇಲ್ನೋಟಕ್ಕೆ ಹೈಕೋರ್ಟ್‌ನಲ್ಲಿ ಬಾಕಿ ಪ್ರಕರಣ ಹೆಚ್ಚಲು ಕಾರಣವಾಗುತ್ತಿದೆ ಎಂದು ಪೀಠ ಹೇಳಿದೆ.

ಜತೆಗೆ ಅಡ್ವೋಕೇಟ್ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ತಡ ಮಾಡದೇ ನ್ಯಾಯಾಧಿಕರಣಕ್ಕೆ ಅಧ್ಯಕ್ಷರ ನೇಮಕಾತಿ ಖಾತರಿಪಡಿಸಬೇಕು. ಯಾವಾಗಿನಿಂದ ನ್ಯಾಯಾಧಿಕರಣ ಕಾರ್ಯಾರಂಭ ಮಾಡಲಿದೆ ಎಂಬ ಕಾಲಾನುಕ್ರಮವನ್ನು ಅಡ್ವೊಕೇಟ್‌ ಜನರಲ್‌ ಸಲ್ಲಿಸಬೇಕು ಎಂದು ತಿಳಿಸಿ ವಿಚಾರಣೆ ಫೆಬ್ರವರಿ ಮುಂದೂಡಿದೆ.

ಪ್ರಕರಣದ ಹಿನ್ನೆಲೆ ಏನು? : 2021ರ ಮಾರ್ಚ್​ 17ರಂದು ನಿರ್ಮಾಣ ಯೋಜನೆಯೊಂದಕ್ಕೆ ಸಂಬಂಧಿಸಿದಂತೆ ರೇರಾ ಸಂಸ್ಥೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಂಸ್ಥೆ ನ್ಯಾಯಾಧಿಕರಣದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಅದನ್ನು ಪುರಸ್ಕರಿಸಿ ಪ್ರಕರಣವನ್ನು ರೇರಾಕ್ಕೆ ಮರಳಿಸಲಾಗಿತ್ತು. ಆನಂತರ ರೇರಾ ಮತ್ತೆ 2022ರ ಸೆಪ್ಟೆಂಬರ್‌ 2ರಂದು ಅರ್ಜಿದಾರರ ಪರವಾಗಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ 2023ರ ಫೆಬ್ರವರಿ 2ರಂದು ಸಂಸ್ಥೆ ನ್ಯಾಯಾಧಿಕರಣದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ನ್ಯಾಯಾಧಿಕರಣ ರಚನೆಯಾಗದಿರುವುದರಿಂದ ಅದು ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಅರ್ಜಿದಾರರು ನ್ಯಾಯಾಧಿಕರಣದಲ್ಲಿ ಬಾಕಿ ಇರುವ ಹುದ್ದೆಗಳನ್ನು ತುಂಬುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. 2023ರ ಜೂನ್ 2 ರಂದು ನ್ಯಾಯಾಧಿಕರಣವು ಖಾಲಿಯಿದ್ದು, ಅರ್ಜಿದಾರರು ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಸದಸ್ಯರು ಮತ್ತು ಅಧ್ಯಕ್ಷರನ್ನು ನೇಮಿಸುವಂತೆ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಅರ್ಜಿದಾರರು ಹೈಕೋರ್ಟ್‌ ಕದ ತಟ್ಟಿದ್ದಾರೆ.

ಇದನ್ನೂ ಓದಿ : ಎನ್​ಸಿಹೆಚ್​ ಅಧ್ಯಕ್ಷ ಸ್ಥಾನದಿಂದ ಡಾ. ಅನಿಲ್ ಖುರಾನಾ ನೇಮಕಾತಿ ರದ್ದುಪಡಿಸಿದ ಹೈಕೋರ್ಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.