ETV Bharat / state

ಮಾಲೂರು ಕ್ಷೇತ್ರದ ಮತಎಣಿಕೆ ದೃಶ್ಯಾವಳಿ ಸಲ್ಲಿಕೆಗೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ - High Court - HIGH COURT

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಸಂದರ್ಭ ಚಿತ್ರೀಕರಿಸಿದ ದೃಶ್ಯಾವಳಿಯನ್ನು ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಆದೇಶಿಸಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Aug 15, 2024, 7:26 AM IST

ಬೆಂಗಳೂರು: ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ವೇಳೆ ವಿವಿ ಪ್ಯಾಟ್‌ ಎಣಿಕೆ ಹಾಗೂ ಹೊಂದಾಣಿಕೆ ಕಾರ್ಯದ ಚಿತ್ರೀಕರಣದ ದೃಶ್ಯಾವಳಿಯನ್ನು ಆಗಸ್ಟ್​​ 19ರಂದು ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆ.ವೈ. ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಎಸ್. ಮಂಜುನಾಥ್ ಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಪೀಠ ಈ ಆದೇಶ ನೀಡಿತು.

ವಿಚಾರಣೆ ವೇಳೆ ಕೇಂದ್ರ ಚುನಾವಣಾ ಆಯೋಗದ ಪರ ವಕೀಲ ಶರತ್‌ ದೊಡವಾಡ, ''ಮತ ಎಣಿಕೆ ಸಂದರ್ಭದಲ್ಲಿ ವಿವಿ ಪ್ಯಾಟ್‌ ಎಣಿಕೆ ಮತ್ತು ಹೊಂದಾಣಿಕೆ ಕಾರ್ಯದ ಚಿತ್ರೀಕರಣ ಮಾಡಲಾಗಿತ್ತು. ಆ ದೃಶ್ಯಾವಳಿ ಒಳಗೊಂಡ ಒಂದು ಸಿಡಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ'' ಎಂದು ತಿಳಿಸಿದರು.

''ಅಲ್ಲದೇ, ನ್ಯಾಯಾಲಯದ ಅನುಮತಿ ಮೇರೆಗೆ ಇವಿಎಂ ಇರಿಸಲಾಗಿದ್ದ ಸ್ಟ್ರಾಂಗ್‌ ರೂಂ ತೆರೆದು ಪರಿಶೀಲನೆ ನಡೆಸಲಾಗಿದೆ. ಅಲ್ಲಿ ವಿವಿ ಪ್ಯಾಟ್‌ ಎಣಿಕೆ ಮತ್ತು ಹೊಂದಾಣಿಕ ಕಾರ್ಯದ ಚಿತ್ರೀಕರಣದ ದೃಶ್ಯಾವಳಿಗಳನ್ನು ಒಳಗೊಂಡ ಮೂರು ಸಿಡಿಗಳು ಲಭ್ಯವಾಗಿವೆ. ಮತ ಎಣಿಕೆ ವೇಳೆ ಅಭ್ಯರ್ಥಿಗಳ ಏಜೆಂಟರಿಗೆ ನೀಡಲಾಗಿದ್ದ ಫಾರ್ಮ್‌ ನಂ.17(ಸಿ)ನ ನಕಲು ಪ್ರತಿ ಸಹ ಲಭ್ಯವಾಗಿದೆ. ಅವುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಕಾಲಾವಕಾಶ ನೀಡಬೇಕು'' ಎಂದು ಕೋರಿದರು.

ಅದನ್ನು ನ್ಯಾಯಪೀಠ, ಸಿಡಿ ಹಾಗೂ ಫಾರ್ಮ್‌ ನಂ.17(ಸಿ)ರ ನಕಲು ಪ್ರತಿಯನ್ನು ಆಗಸ್ಟ್​ 19ರಂದು ಸಲ್ಲಿಸುವಂತೆ ಚುನಾವಣಾ ಆಯೋಗದ ಪರ ವಕೀಲರಿಗೆ ಸೂಚಿಸಿ, ವಿಚಾರಣೆ ಮುಂದೂಡಿದೆ.

ಮಾಲೂರು ವಿಧಾನಸಭೆ ಕ್ಷೇತ್ರ ಮತ ಎಣಿಕೆ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಆಗಿವೆ. ಇದರಿಂದ ಆ ಕ್ಷೇತ್ರದಿಂದ ಶಾಸಕರಾಗಿ ಕೆ.ವೈ. ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಮಾಲೂರು ಕ್ಷೇತ್ರದ ಫಾರ್ಮ್‌ ನಂ.17(ಸಿ)ನ ನಕಲು ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆಯೋಗಕ್ಕೆ ಅರ್ಜಿಯ ಹಿಂದಿನ ವಿಚಾರಣೆ ವೇಳೆ ಹೈಕೋರ್ಟ್‌ ನಿರ್ದೇಶಿಸಿತ್ತು.

ಇದನ್ನೂ ಓದಿ: ಉಡುಪಿ ಪರಶುರಾಮನ ಪ್ರತಿಮೆಯಲ್ಲಿ ಕಳಪೆ ಕಾಮಗಾರಿ: ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.