ETV Bharat / state

ಮನೆಯೂಟಕ್ಕೆ ದರ್ಶನ್​ ಅರ್ಜಿ: ಎಲ್ಲಾ ವಿಚಾರಣಾಧೀನ ಕೈದಿಗಳು ಒಂದೇ ಎಂದ ಹೈಕೋರ್ಟ್​ - DARSHAN PLEA FOR HOME FOOD

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ನಟ ದರ್ಶನ್​, ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಮನೆಯೂಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ಕೋರಿ ನ್ಯಾಯಾಲಯದ ಮೊರೆಹೋಗಿದ್ದಾರೆ.

darshan
ದರ್ಶನ್, ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jul 31, 2024, 3:18 PM IST

Updated : Jul 31, 2024, 3:28 PM IST

ಬೆಂಗಳೂರು: ಸಾಮಾನ್ಯ ವ್ಯಕ್ತಿ, ಕೈದಿ, ಬಡವ, ಬಲ್ಲಿದ ಎಂಬ ಭೇದಭಾವವಿಲ್ಲದೆ, ಪ್ರತಿಯೊಬ್ಬರಿಗೂ ಪೌಷ್ಠಿಕ ಆಹಾರ ಪಡೆದುಕೊಳ್ಳುವ ಹಕ್ಕು ಹೊಂದಿರುತ್ತಾರೆ ಎಂದು ತಿಳಿಸಿರುವ ಹೈಕೋರ್ಟ್, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರು ಮನೆ ಊಟಕ್ಕಾಗಿ ಸಲ್ಲಿಸಿರುವ ಮನವಿ ಬಗ್ಗೆ ಆಗಸ್ಟ್ 20ರೊಳಗೆ ನಿರ್ಧಾರ ಕೈಗೊಳ್ಳಲು ಸೂಚನೆ ನೀಡಿದೆ.

ಮನೆ ಊಟ ಪಡೆಯಲು ನಿರ್ದೇಶನ ಕೋರಿದ್ದ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಸೂಚನೆ ನೀಡಿತು.

ಅಲ್ಲದೆ, ನಿಜಕ್ಕೂ ಅರ್ಜಿದಾರರ ದರ್ಶನ್ ಆರೋಗ್ಯ ಕ್ಷೀಣಿಸಿದ್ದರೆ ಜೈಲಿನಲ್ಲಿ ವೈದ್ಯರು ಇದ್ದಾರೆ. ಅವರು ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಿದ್ದಾರೆ. ಇಲ್ಲಿ ದರ್ಶನ್ ಅಥವಾ ಬೇರಾವುದೇ ವಿಚಾರಣಾಧೀನ ಕೈದಿಯ ವಿಚಾರವಲ್ಲ. ನಾವು ಇಲ್ಲಿ ಪ್ರತ್ಯೇಕಿಸಿ ಹೇಗೆ ನೋಡಲಾಗುತ್ತದೆ? ಪ್ರತಿಯೊಬ್ಬ ವಿಚಾರಣಾಧೀನ ಕೈದಿಗಳೂ ಇಲ್ಲಿನ ಪ್ರಜೆಗಳೇ.. ವಿಚಾರಣಾಧೀನ ಅಥವಾ ದೋಷಿ ಎಂದು ಘೋಷಿತವಾದ ಕೈದಿಗಳ ವಿಚಾರ ಆ ಕಡೆ ಇರಲಿ. ನಮ್ಮಲ್ಲಿ ಕೋಟ್ಯಂತರ ವಿಚಾರಣಾಧೀನ ಕೈದಿಗಳಿದ್ದು, ಅವರಿಗೆ ಉತ್ತಮ ಆಹಾರ ಪದ್ಧತಿ ಬೇಕಿದೆ ಎಂದು ಪೀಠ ತಿಳಿಸಿದೆ.

ಜೈಲಿನ ಮೇಲ್ವಿಚಾರಣಾಧಿಕಾರಿಯು ಅರ್ಜಿದಾರರಿಗೆ ಆಯಾಸವಾಗಿದೆ. ಹೀಗಾಗಿ, ಅವರಿಗೆ ವಿರಾಮ ಅಗತ್ಯವಿದೆ ಎಂದು ಹೇಳಿದ್ದಾರೆ. ರಾಜ್ಯ ಕಾರಾಗೃಹ ಕಾಯಿದೆ ಸೆಕ್ಷನ್ ೩೦ರ ಅಡಿ ಆಹಾರ ನೀಡಬಹುದು ಎಂದಿದೆ. ಆದರೆ, ಅದನ್ನು ಕೈಪಿಡಿ ಮತ್ತು ನಿಯಂತ್ರಣದ ಮೂಲಕ ಜಾರಿಗೊಳಿಸಬಹುದು. ಸರ್ಕಾರವು ದರ್ಶನ್ ಬಗ್ಗೆ ಮಾತ್ರ ಏಕೆ ಎಲ್ಲಾ ವಿಚಾರಣಾಧೀನ ಕೈದಿಗಳ ಬಗ್ಗೆ ಮಾನವೀಯವಾಗಿ ನಡೆಯಬೇಕು. ದರ್ಶನ್ ಕೋರಿಕೆಯನ್ನು ಸರ್ಕಾರ ಪರಿಗಣಿಸಬಹುದು ಎಂದು ಪೀಠ ತಿಳಿಸಿತು. ಅಲ್ಲದೆ, ಕೈದಿಗಳಲ್ಲಿ ಶ್ರೀಮಂತ, ಬಡವ, ಪ್ರಭಾವಿ, ರಾಜಕಾರಣಿ ಭಿನ್ನತೆ ಏಕೆ? ಇಲ್ಲಿ ಎಲ್ಲರೂ ವಿಚಾರಣಾಧೀನ ಕೈದಿಗಳು ಮಾತ್ರ ಎಂದು ಪೀಠ ತಿಳಿಸಿತು.

ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ''ಜೈಲಿನ ಅಧಿಕಾರಿ ನೀಡಿರುವ ಪ್ರಮಾಣ ಪತ್ರದಲ್ಲಿ ದರ್ಶನ್‌ಗೆ ಪೌಷ್ಠಿಕಾಂಶಯುಕ್ತ ಆಹಾರದ ಅಗತ್ಯವಿದೆ ಎಂದು ಹೇಳಿದ್ದಾರೆ. ಕರ್ನಾಟಕ ಕಾರಾಗೃಹ ಕಾಯಿದೆಯಲ್ಲಿ ವಿಚಾರಣಾಧೀನ ಮತ್ತು ದೋಷಿ ಕೈದಿಗಳು ಎಂದು ಮಾತ್ರ ಪ್ರತ್ಯೇಕಿಸಲಾಗಿದೆ. ಕಾಯಿದೆ ಸೆಕ್ಷನ್ 30ರ ಪ್ರಕಾರ ಖಾಸಗಿಯಾಗಿ ವಿಚಾರಣಾಧೀನ ಕೈದಿ ಆಹಾರ ತರಿಸಿಕೊಳ್ಳಬಹುದಾಗಿದೆ. ಜೈಲು ಕೈಪಿಡಿಯಲ್ಲಿ ಮನೆಯೂಟ ಪಡೆಯಬಾರದು ಎಂದು ಹೇಳಿಲ್ಲ. ಆದರೆ, ಆಹಾರ ಪದ್ಧತಿ (ಡಯಟ್) ಬಗ್ಗೆ ಹೇಳಲಾಗಿದೆ. ಕಾಯಿದೆಯ ನಿಬಂಧನೆಗೆ ಅನುಗುಣವಾಗಿ ಜೈಲು ಕೈಪಿಡಿ ನೋಡಬೇಕು. ದರ್ಶನ್ ಮನೆಯೂಟವನ್ನು ಹಕ್ಕಾಗಿ ಕೇಳುತ್ತಿಲ್ಲ. ಬದಲಿಗೆ ಮನವಿ ಮಾಡುತ್ತಿದ್ದಾರೆ. ಇದನ್ನು ಸರ್ಕಾರ ಪ್ರಶ್ನಿಸಿರುವುದರಿಂದ ನ್ಯಾಯಾಲಯದ ಗಮನಕ್ಕೆ ತಂದಿದ್ದೇವೆ. ಮುಂದೆಯೂ ನಮ್ಮದು ಮನವಿಯಾಗಿರಲಿದೆ. ಹೀಗಾಗಿ, ಜೈಲು ಅಧಿಕಾರಿಯ ಪ್ರಮಾಣ ಪಯ್ರ ನೀಡಿರುವಂತೆ ಅಗತ್ಯವಾದ ಊಟ ನೀಡಲು ಅನುಮತಿ ನೀಡಬೇಕು'' ಎಂದು ಕೋರಿದರು.

ಜೊತೆಗೆ, ''ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸುವುದಾದರೆ ಅರ್ಜಿಯನ್ನು ಒಂದು ವಾರ ವಿಚಾರಣೆ ಮುಂದೂಡಬಹುದು. ಸರ್ಕಾರ ಮಾನವೀಯತೆಯಿಂದ ದರ್ಶನ್ ಅವರನ್ನು ನೋಡುತ್ತದೆ ಎಂದುಕೊಳ್ಳುತ್ತೇನೆ. ದರ್ಶನ್ ಅವರನ್ನು ಈಗ ನಟ ಎಂದು ನೋಡದೆ ಅವರು ಗಂಭೀರ ಆರೋಪ ಎದುರಿಸುತ್ತಿದ್ದಾರೆ. ದರ್ಶನ್ ಮನುಷ್ಯನಾಗಿದ್ದು, ದೇಹಕ್ಕೆ ಅಗತ್ಯವಾದ ಆಹಾರ ಬೇಕಿದೆ'' ಎಂದರು.

ಸರ್ಕಾರಿ ವಕೀಲರು, ''ಸುಪ್ರೀಂ ಕೋರ್ಟ್ ನಿರ್ದೇಶನದಂತೆ 2022 ಕೈಪಿಡಿ ಅನ್ವಯ ಕೈದಿಗಳಿಗೆ ಆಹಾರ ಪೂರೈಸಲಾಗುತ್ತಿದೆ. ದರ್ಶನ್ ಮನೆ ಊಟಕ್ಕೆ ಎರಡು ಮನವಿ ಸಲ್ಲಿಸಿದ್ದು, ಎರಡು ವಾರಗಳಲ್ಲಿ ಅವುಗಳಿಗೆ ಸಂಬಂಧಿಸಿದಂತೆ ಸರ್ಕಾರ ಸೂಕ್ತ ಆದೇಶ ಮಾಡಲಿದೆ'' ಎಂದರು. ಈ ಅಂಶ ದಾಖಲಿಸಿಕೊಂಡ ಪೀಠ ವಿಚಾರಣೆಯನ್ನು ಮುಂದೂಡಿತು.

ಇದನ್ನೂ ಓದಿ: ಮನೆ ಊಟಕ್ಕಾಗಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ - Actor Darshan Case

Last Updated : Jul 31, 2024, 3:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.