ETV Bharat / state

ಕಲುಷಿತ ನೀರು ಸೇವಿಸಿ ಸಾವು ಪ್ರಕರಣಗಳು: ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - Contaminated Water - CONTAMINATED WATER

ಕಲುಷಿತ ನೀರು ಕುಡಿದು ಜನರು ಮೃತಪಟ್ಟಿರುವ ಕುರಿತಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಂಪೂರ್ಣ ವಿವರಣೆ ನೀಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Aug 9, 2024, 4:57 PM IST

ಬೆಂಗಳೂರು: ಕಳೆದ ಒಂದು ತಿಂಗಳಲ್ಲಿ ಕಲುಷಿತ ನೀರು ಸೇವಿಸಿ ತುಮಕೂರು ಜಿಲ್ಲೆಯಲ್ಲಿ ಆರು ಮಂದಿ ಮತ್ತು ಕೋಲಾರ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿರುವ ಘಟನೆ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತಂತೆ ಸಂಪೂರ್ಣ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಇಂದು ಹೈಕೋರ್ಟ್ ಸೂಚನೆ ನೀಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ನಿರ್ದಿಷ್ಟ ದಿನಗಳಿಗೊಮ್ಮೆ ನೀರು ಸಂಗ್ರಹಣಾ ಘಟಕಗಳನ್ನು ಸ್ವಚ್ಛಗೊಳಿಸುವುದೂ ಸೇರಿದಂತೆ ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮವಹಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ತುಮಕೂರಿನ ರಮೇಶ್ ಎಲ್.ನಾಯ್ಕ್ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿತು.

ಕುಡಿಯಬಹುದಾದಂತಹ ಶುದ್ಧ ನೀರಿನ ಲಭ್ಯತೆ ಮತ್ತು ಶೇಖರಣಾ ಸೌಲಭ್ಯ ಹಾಗೂ ಜಲ ಮೂಲಗಳ ಕುರಿತಂತೆ ಮಾಹಿತಿ ನೀಡಬೇಕು. ಕಲುಷಿತ ನೀರು ಕುಡಿದು ಜನ ಮೃತಪಟ್ಟಿರುವ ಕುರಿತಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಂಪೂರ್ಣ ವಿವರಣೆ ನೀಡಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕು ಎಂದು ಮನವಿ ಮಾಡಿದರು. ಈ ವೇಳೆ ಅರ್ಜಿದಾರರೇ ಆದ ವಕೀಲ ರಮೇಶ್ ನಾಯ್ಕ್, ಈ ಅರ್ಜಿ ಸಲ್ಲಿಸಿ ಒಂದು ತಿಂಗಳಾಗಿದೆ. ಈ ಅವಧಿಯಲ್ಲಿ ಕಲುಷಿತ ನೀರು ಕುಡಿದು ತುಮಕೂರು ಜಿಲ್ಲೆಯಲ್ಲಿ ಆರು ಮಂದಿ ಮತ್ತು ಕೋಲಾರ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿರುವುದು ವರದಿಯಾಗಿದೆ. ಇದೊಂದು ಗಂಭೀರ ವಿಚಾರವಾಗಿದೆ ಎಂದು ಪೀಠಕ್ಕೆ ವಿವರಿಸಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವರದಿ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲೇನಿದೆ?: ಕುಡಿಯುವ ನೀರು ಮಾಲಿನ್ಯ ಆಗದಂತೆ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಲು ನಿರ್ದೇಶನ ನೀಡಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿರುವ ನೀರಿನ ಮೂಲಗಳನ್ನು ಆಗಾಗ ಪರಿಶೀಲಿಸಬೇಕು. ಹಳೆಯ ನೀರಿನ ಕೊಳವೆಗಳನ್ನು ಪರಿಶೀಲಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರ್ದಿಷ್ಟ ಸಂಖ್ಯೆಯ ದಿನಗಳಿಗೊಮ್ಮೆ ನೀರು ಸಂಗ್ರಹಿಸುವ ಘಟಕಗಳನ್ನು ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ರಾಯಚೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕುಡಿಯುವ ನೀರು ಕಲುಷಿತಗೊಳ್ಳುತ್ತಿರುವ ಪ್ರಕರಣಗಳು ಮರುಕಳಿಸುತ್ತಿವೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಬಾರಿ ಸರ್ಕಾರದ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

2022ರ ಜೂನ್ ತಿಂಗಳಲ್ಲಿ ಕಲುಷಿತ ನೀರು ಕುಡಿದು ರಾಯಚೂರು ಪಟ್ಟಣದಲ್ಲಿ ನಾಲ್ವರು ಸಾವನ್ನಪ್ಪಿ, ಅನೇಕರು ಅಸ್ವಸ್ಥರಾಗಿದ್ದರು ಮತ್ತು ಎರಡು ವಾರಗಳ ಕಾಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. 2023ರ ಮೇ ತಿಂಗಳಲ್ಲಿ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ 3 ವರ್ಷದ ಮಗು ಸಾವನ್ನಪ್ಪಿದ್ದು, 34 ಮಂದಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಹಾಗೂ ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲೂಕಿನ ಗೋರೆಬಾಳ ಗ್ರಾಮದಲ್ಲಿ 25 ಮಂದಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಿದ್ದವು ಎಂದು ಅರ್ಜಿಯಲ್ಲಿ ಮಾಹಿತಿ ನೀಡಲಾಗಿದೆ.

2023ರ ಜುಲೈ ತಿಂಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಪ್ರದೇಶದಲ್ಲಿ ಕಲುಷಿತ ನೀರು ಕುಡಿದ ಹಿನ್ನೆಲೆಯಲ್ಲಿ ಆರು ಮಂದಿ ಸಾವಿಗೆ ಗುರಿಯಾಗಿದ್ದರು. ಇದೇ ಕಾರಣಕ್ಕೆ 180 ಮಂದಿ ಆಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂಬುದಾಗಿ ವರದಿಯಾಗಿತ್ತು. ಈ ಎಲ್ಲ ಘಟನೆಗಳಲ್ಲಿ ಸರ್ಕಾರವು ಮೃತರಿಗೆ ಪರಿಹಾರವನ್ನು ನೀಡಿ ಕೈತೊಳೆದುಕೊಂಡಿದೆ. ಆದರೆ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡಿಲ್ಲ. ಇದರಿಂದಾಗಿ ಘಟನೆಗಳು ಮರುಕಳಿಸುತ್ತಿವೆ. ಸಂವಿಧಾನದ ಪರಿಚ್ಛೇದ 21ರಂತೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಪಡೆಯುವುದು ಸಹ ಹಕ್ಕಾಗಿದೆ. ಅಲ್ಲದೆ, ಎಲ್ಲ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಪಡೆಯುವುದು ಮೂಲಭೂತ ಹಕ್ಕಾಗಿದೆ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಕುಡಿಯುವ ನೀರು ಕಲುಷಿತವಾಗದಂತೆ ನಿಯಂತ್ರಣ ಮಾಡಲು ಸರ್ಕಾರದ ಪ್ರಾಧಿಕಾರಗಳು ನಿರ್ಲಕ್ಷ್ಯ ವಹಿಸುತ್ತಿವೆ. ಇದೇ ಕಾರಣದಿಂದ ರಾಜ್ಯದಲ್ಲಿ ಈ ರೀತಿಯ ಪ್ರಕರಣಗಳು ಮರುಕಳಿಸುತ್ತಿವೆ. ಇದರಿಂದ ಸಂವಿಧಾನದ ಪರಿಚ್ಛೇದ 21ರ ಉಲ್ಲಂಘನೆ ಆಗುತ್ತಿದೆ. ಅಲ್ಲದೆ, ಕಲುಷಿತ ನೀರನ್ನು ಸರಿಪಡಿಸದ ಹಿನ್ನೆಲೆಯಲ್ಲಿ ರಾಜ್ಯ ಜಲ ನೀತಿ 222 ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಯಾವ ಸಮಯದಲ್ಲಿ ನೀರು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು?: ಇಲ್ಲಿದೆ ನೋಡಿ ಮಹತ್ವದ ಮಾಹಿತಿ - Best Time For Drinking Water

ETV Bharat Logo

Copyright © 2025 Ushodaya Enterprises Pvt. Ltd., All Rights Reserved.