ETV Bharat / state

ಘನ ತ್ಯಾಜ್ಯ ವಿಲೇವಾರಿ ಸಮಸ್ಯೆ ಪರಿಹರಿಸಲು ಸೂಕ್ತ ನಿರ್ಣಯ ಕೈಗೊಳ್ಳಿ: ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ಸೂಚನೆ - ಸರ್ಕಾರ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ಮಾಲಿನ್ಯ ನಿಯಂತ್ರಣ ಮಂಡಳಿಯು ಘನತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಮಾಡುವ ಬಿಬಿಎಂಪಿಯ ಸಾಮರ್ಥ್ಯ ಸಮರ್ಪಕವಾಗಿಲ್ಲ ಎಂದು ವರದಿ ಕೊಟ್ಟಿದೆ. ಆದರೂ ಬಿಬಿಎಂಪಿ, ಎಲ್ಲವೂ ಸರಿಯಾಗಿದೆ ಎಂದು ಸಮರ್ಥಿಸಿಕೊಳ್ಳುತ್ತಿದೆ ಎಂದು ವಕೀಲರು ಕೋರ್ಟ್​ಗೆ ತಿಳಿಸಿದರು.

High court
ಹೈಕೋರ್ಟ್
author img

By ETV Bharat Karnataka Team

Published : Feb 7, 2024, 6:54 AM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಯ ಸಾಮರ್ಥ್ಯ ವೃದ್ಧಿಸಲು ಮತ್ತು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳುವಂತೆ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ 2012ರಲ್ಲಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಹಾಗೂ ನ್ಯಾ.ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು, ನಗರದ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಮಾಡುವ ಬಿಬಿಎಂಪಿಯ ಸಾಮರ್ಥ್ಯ ಸಮರ್ಪಕವಾಗಿಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಕೊಟ್ಟಿದೆ. ಆದಾಗ್ಯೂ ಎಲ್ಲವೂ ಸರಿ ಇದೆ ಎಂದು ಬಿಬಿಎಂಪಿ ಹೇಳುತ್ತಲೇ ಬಂದಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಾಮರ್ಥ್ಯ ಸಮರ್ಪಕವಾಗಿಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಹೇಳಿರುವಾಗ ಅದನ್ನು ಬಿಬಿಎಂಪಿ ಸುಧಾರಿಸಿಕೊಳ್ಳಬೇಕು, ವೃದ್ಧಿಸಿಕೊಳ್ಳಬೇಕಲ್ಲವೇ ಎಂದು ಪ್ರಶ್ನಿಸಿತು. ಅಲ್ಲದೇ ಘನತ್ಯಾಜ್ಯ ವಿಲೇವಾರಿ ಸೇರಿದಂತೆ ಆ ವ್ಯವಸ್ಥೆಯ ಸಾಮರ್ಥ್ಯ ವೃದ್ಧಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ನಿರ್ಣಯಗಳನ್ನು ಕೈಗೊಳ್ಳುವಂತೆ ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಡಿಕೆಶಿ ವಿರುದ್ಧ ಎಫ್​ಐಆರ್​ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ

ಘನ ತ್ಯಾಜ್ಯ ವಿಲೇವಾರಿ ಉಲ್ಲಂಘಿಸುವವರ ವಿರುದ್ಧ ಕ್ರಮಕ್ಕೆ ಸೂಚನೆ: ಕೆಲ ತಿಂಗಳ ಹಿಂದೆ ನಗರದಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್, ತ್ಯಾಜ್ಯ ವಿಲೇವಾರಿ ನಿಮಯ ಉಲ್ಲಂಘಿಸುವವರ ವಿರುದ್ಧ ಕ್ರಮಕ್ಕೆ ಸೂಚಿಸಿತ್ತು. ಈ ಪ್ರಕರಣದಲ್ಲಿ ವಿಧಿಸುವ ದಂಡದ ಪ್ರಮಾಣ ಕಡಿಮೆ ಇದ್ದು, ಇದನ್ನು ಹೆಚ್ಚಳ ಮಾಡುವುದು ಮತ್ತು ಐಪಿಸಿ ಸೆಕ್ಷನ್ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್​ ನಿದೇಶನ ನೀಡಿತ್ತು.

2016ರಿಂದ 2023ರ ವರೆಗಿನ ಅವಧಿಯಲ್ಲಿ ತ್ಯಾಜ್ಯ ಉಲ್ಲಂಘನೆ ಮಾಡಿದ ಒಟ್ಟು 3.84 ಕೋಟಿ ಮಂದಿಗೆ 11.66 ಕೋಟಿ ರೂ.ಗಳ ದಂಡ ವಿಧಿಸಿದ ಪಾಲಿಕೆ ಅಧಿಕಾರಿಗಳ ಕ್ರಮಕ್ಕೆ ನ್ಯಾಯಪೀಠ ತೀವ್ರ ಬೇಸರ ವ್ಯಕ್ತಪಡಿಸಿತ್ತು. ನಿಯಮ ಉಲ್ಲಂಘಿಸುವವರ ವಿರುದ್ಧ ಬಿಬಿಎಂಪಿ ವಿಧಿಸುತ್ತಿರುವ ದಂಡದ ಪ್ರಮಾಣ ತೀರಾ ಕಡಿಮೆ ಇದೆ ಎಂದು ಅಭಿಪ್ರಾಯಪಟ್ಟಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.