ETV Bharat / state

ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಮದ ಕುರಿತು ಪ್ರಮಾಣಪತ್ರ ಸಲ್ಲಿಸಿ: ಹೈಕೋರ್ಟ್ - Fake Caste Certificate

author img

By ETV Bharat Karnataka Team

Published : Aug 13, 2024, 8:37 AM IST

ರಾಜ್ಯದಲ್ಲಿ ಸುಮಾರು 30 ಸಾವಿರ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದೆ ಎಂಬ ಮಾಹಿತಿ ಇದೆ. ಅದರಲ್ಲಿ 10 ಸಾವಿರ ಜಾತಿ ಪ್ರಮಾಣಪತ್ರಗಳನ್ನು ಸರ್ಕಾರದ ವಿಶೇಷ ವಕೀಲರಿಗೆ ಒದಗಿಸಲಾಗಿದೆ ಎಂದು ಜಾತಿ ಪ್ರಮಾಣಪತ್ರಗಳುಳ್ಳ ಚೀಲವನ್ನು ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲರು ತೋರಿಸಿದರು.

ಹೈಕೋರ್ಟ್
ಹೈಕೋರ್ಟ್ (ETV Bharat)

ಬೆಂಗಳೂರು: ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವ ಕುರಿತಂತೆ ಎಷ್ಟು ಪ್ರಕರಣಗಳಲ್ಲಿ ಈವರೆಗೆ ನೋಟಿಸ್ ಜಾರಿಗೊಳಿಸಲಾಗಿದೆ ಮತ್ತು ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಯಾದಗಿರಿ ಜಿಲ್ಲೆಯ ಎಸ್‌ಸಿ-ಎಸ್‌ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ. ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್‌ಟಿ ವರ್ಗಕ್ಕೆ ಸೇರಿಸಲಾಗಿದೆ. ಆದರೆ ಪ್ರವರ್ಗ 1ರಲ್ಲಿ ಬರುವ ಬೆಸ್ತರ ಉಪಜಾತಿಯಾದ ಪರಿವಾರ ಹಾಗೂ ತಳವಾರ ಬೋಯಾ ಉಪಪಂಗಡದವರಿಗೂ ಪರಿಶಿಷ್ಟ ವರ್ಗದ ನಕಲಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆ ಅಶ್ವಿನಿ ಓಬಳೇಶ್, ರಾಜ್ಯದಲ್ಲಿ ಸುಮಾರು 30 ಸಾವಿರ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದೆ ಎಂಬ ಮಾಹಿತಿ ಇದೆ. ಅದರಲ್ಲಿ 10 ಸಾವಿರ ಜಾತಿ ಪ್ರಮಾಣಪತ್ರಗಳನ್ನು ಸರ್ಕಾರದ ವಿಶೇಷ ವಕೀಲರಿಗೆ ಒದಗಿಸಲಾಗಿದೆ ಎಂದು ಜಾತಿ ಪ್ರಮಾಣಪತ್ರಗಳುಳ್ಳ ಚೀಲವನ್ನು ನ್ಯಾಯಪೀಠಕ್ಕೆ ತೋರಿಸಿದರು. ಕಳೆದ ಏಪ್ರಿಲ್‌ನಲ್ಲಿ ಈ ಜಾತಿ ಪ್ರಮಾಣಪತ್ರಗಳನ್ನು ಕೊಡಲಾಗಿದೆ. ಆದರೆ, ಈವರೆಗೆ ಯಾವುದೇ ಕ್ರಮ ಆಗಿಲ್ಲ. ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಪರ ವಿಶೇಷ ವಕೀಲರು ಹೇಳುತ್ತಿದ್ದಾರೆ. ಆದರೆ, ನ್ಯಾಯಾಲಯಕ್ಕೆ ದಾಖಲೆ ತೋರಿಸಲು 50-100 ಮಂದಿಗಷ್ಟೇ ನೋಟಿಸ್ ನೀಡಲಾಗಿದೆ ಎಂದು ಆರೋಪಿಸಿದರು.

ಇದಕ್ಕೆ ಆಕ್ಷೇಪಿಸಿದ ಸರ್ಕಾರದ ವಿಶೇಷ ವಕೀಲ ಸಿ. ಜಗದೀಶ್, ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ. ಮೊದಲಿಗೆ ಕಬ್ಬಲಿಗ ಜಾತಿ ಪ್ರಮಾಣಪತ್ರ ತೆಗೆದುಕೊಂಡು ಬಳಿಕ ಪರಿವಾರ ನಾಯಕ ಜಾತಿ ಪ್ರಮಾಣಪತ್ರ ಪಡೆದುಕೊಂಡವರ ವಿರುದ್ಧ ನೋಟಿಸ್ ನೀಡಲಾಗಿದೆ. ಅರ್ಜಿದಾರರು ಜಿಲ್ಲಾಧಿಕಾರಿ ಅಥವಾ ಉಪವಿಭಾಗಾಧಿಕಾರಿ ಮುಂದೆ ಹೋಗಬೇಕು. ಅದು ಬಿಟ್ಟು ನೇರವಾಗಿ ಹೈಕೋರ್ಟ್‌ಗೆ ಬಂದಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರಗಳ ಬಗ್ಗೆ ಮಾಹಿತಿಗಳಿದ್ದರೆ ಕೊಡಲಿ ಎಂದರು.

ಇದನ್ನೂ ಓದಿ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ ಜಾರಿಗೆ ಹೈಕೋರ್ಟ್‌ ಮಧ್ಯಂತರ ತಡೆ - High Court

ಈ ವೇಳೆ, ಅರ್ಜಿದಾರರ ಪರ ವಕೀಲರು, ಅದು ಸರ್ಕಾರದ ಕೆಲಸ, ಪ್ರಕರಣ ಈಗ ಸರ್ಕಾರದ ಅಂಗಳದಲ್ಲಿದೆ. ನಕಲಿ ಜಾತಿ ಪ್ರಮಾಣಪತ್ರಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವ ಕೆಲಸ ಸರ್ಕಾರ ಮಾಡಬೇಕಿದೆ ಎಂದು ತಿಳಿಸಿದರು.

ಅಲ್ಲದೆ, ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ ಎಂದು ತಿಳಿಸಿ ಅರ್ಹರಿಗೂ ತಳವಾರ ಜಾತಿ ಪ್ರಮಾಣಪತ್ರ ನೀಡಲಾಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ತಳವಾರ ಮಹಾಸಭಾ ಮಧ್ಯಂತರ ಅರ್ಜಿ ಸಲ್ಲಿಸಿತು. ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿ, ತಮ್ಮನ್ನು ಪ್ರತಿವಾದಿಯನ್ನಾಗಿ ಸೇರಿಸಬೇಕು ಎಂದು ಅರ್ಜಿದಾರರ ಪರ ವಕೀಲ ಹೆಚ್. ಸುನೀಲ್ ಕುಮಾರ್ ಮನವಿ ಮಾಡಿದರು.

ಮಧ್ಯಂತರ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾಯಪೀಠ, ಅರ್ಹರಿಗೆ ಜಾತಿ ಪ್ರಮಾಣಪತ್ರ ನೀಡಲು ನ್ಯಾಯಾಲಯದಲ್ಲಿರುವ ಪ್ರಕರಣ ಅಡ್ಡಿಯಾಗುವುದಿಲ್ಲ ಎಂದು ಹೇಳಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ನಿರುದ್ಯೋಗ ನಿವಾರಣೆಗೆ ಖಾಲಿ ಆಗುವ ಕಾಯಂ ಹುದ್ದೆ ಭರ್ತಿ ಮಾಡಬೇಕು: ಸರ್ಕಾರಗಳಿಗೆ ಹೈಕೋರ್ಟ್​ ನಿರ್ದೇಶನ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.