ETV Bharat / state

ಅನ್ಯಕರ್ತವ್ಯಕ್ಕೆ ಕಂದಾಯ ಇಲಾಖೆ ನೌಕರರ ನಿಯೋಜನೆ ಪ್ರಶ್ನಿಸಿದ್ದ ಅರ್ಜಿ ವಜಾ - High Court

ಉತ್ತರ ಕನ್ನಡ ಜಿಲ್ಲೆಯ ಹಲವು ಗ್ರಾಮ ಪಂಚಾಯತ್‌ಗಳಲ್ಲಿ ಕಂದಾಯ ಇಲಾಖೆಯ ನೌಕರರನ್ನು ಅನ್ಯ ಕರ್ತವ್ಯಕ್ಕೆ ನಿಯೋಜನೆ ಮಾಡಿದ್ದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jul 31, 2024, 9:47 AM IST

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಹಲವು ಗ್ರಾಮ ಪಂಚಾಯತ್‌ಗಳಲ್ಲಿ ಕಂದಾಯ ಇಲಾಖೆಯ ನೌಕರರನ್ನು ಅನ್ಯ ಕರ್ತವ್ಯಕ್ಕೆ ನಿಯೋಜಿಸಿದ್ದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಭಟ್ಕಳದ ನಾಗರಾಜ್ ಕೃಷ್ಣ ನಾಯ್ಕ ಹಾಗೂ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್​​ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು.

ಅಲ್ಲದೇ, ಸರ್ಕಾರದ ಸುತ್ತೋಲೆಗಳನ್ನು ಜಾರಿಗೊಳಿಸದ ಕ್ರಮ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಗೆ ಅರ್ಹವಿಲ್ಲ ಎಂದು ತಿಳಿಸಿತು.

ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, "ಸರ್ಕಾರ ಗ್ರಾಮಲೆಕ್ಕಿಗರನ್ನು ಗ್ರಾಮ ಪಂಚಾಯತ್​ ಹೊರತಾಗಿ ಬೇರೆಡೆ ಕಾರ್ಯನಿರ್ವಹಿಸಲು ನಿಯೋಜನೆ ಮಾಡುವಂತಿಲ್ಲ ಎಂದು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್‌ಗೆ ಸೂಚಿಸಿ ಸುತ್ತೋಲೆ ಹೊರಡಿಸಿತ್ತು.
ಆದರೆ, ಉತ್ತರ ಕನ್ನಡ ಜಿಲ್ಲೆಯ ಹಲವು ಗ್ರಾಮ ಪಂಚಾಯತ್‌ಗಳಲ್ಲಿ ಕಂದಾಯ ಇಲಾಖೆಯ ನೌಕರರನ್ನು ಅನ್ಯ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿದ್ದು, ಇದರಿಂದಾಗಿ ಗ್ರಾಮ ಪಂಚಾಯತ್​ ಕಚೇರಿಗಳಲ್ಲಿ ಜನನ-ಮರಣ ಪ್ರಮಾಣ ಪತ್ರ, ಇ-ಖಾತೆ ಪತ್ರ, ಕಂದಾಯ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ಸೇವೆಗಳನ್ನು ಸರಿಯಾದ ಸಮಯಕ್ಕೆ ಒದಗಿಸದೆ ವಿಳಂಬವಾಗಿದೆ. ಅಧಿಕಾರಿಗಳು ಈ ರೀತಿ ವಿಳಂಬ ಪ್ರವೃತ್ತಿ ಪ್ರದರ್ಶಿಸುತ್ತಿರುವುದರಿಂದ ಸಾರ್ವಜನಿಕರು ಅನೇಕ ರೀತಿಯಲ್ಲಿ ಸಂಕಷ್ಟ ಎದುರಿಸಬೇಕಾಗಿದೆ" ಎಂದು ನ್ಯಾಯಪೀಠದ ಗಮನಕ್ಕೆ ತಂದರು.

"ಕೆಲವು ಗ್ರಾಮ ಅಧಿಕಾರಿಗಳನ್ನು ಮತ್ತು ಗ್ರಾಮ ಲೆಕ್ಕಿಗರನ್ನು ತಹಶೀಲ್ದಾರ್ ಕಚೇರಿಗೆ ಕಾರ್ಯನಿರ್ವಹಿಸುವಂತೆ ನಿಯೋಜಿಸಲಾಗಿದೆ ಇದರಿಂದಾಗಿ ಆಡಳಿತಾಂಗ ವ್ಯವಸ್ಥೆ ವಿಳಂಬಗತಿಯಲ್ಲಿ ಸಾಗುತ್ತಿದೆ. ಈ ಬಗ್ಗೆ ಕಂದಾಯ ಇಲಾಖೆಯ ಹಾಗೂ ಕಂದಾಯ ಸಚಿವರ ಗಮನಕ್ಕೂ ಹಲವು ಬಾರಿ ತರಲಾಗಿದೆ ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಈ ರೀತಿಯಲ್ಲಿ ಕಾನೂನು ಬಾಹಿರವಾಗಿ ನಡೆದುಕೊಂಡವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು" ಎಂದು ಮನವಿ ಮಾಡಿದರು.

ಇದನ್ನೂ ಓದಿ: ವೃಷಭಾವತಿ ನದಿ ಒತ್ತುವರಿ ತೆರವಿಗೆ ಕ್ರಿಯಾ ಸಮಿತಿ ರಚಿಸಲು ಹೈಕೋರ್ಟ್ ನಿರ್ದೇಶನ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.