ETV Bharat / state

ಜಯಲಲಿತಾರ ಚಿನ್ನಾಭರಣ ಸೇರಿ ಎಲ್ಲ ವಸ್ತುಗಳನ್ನು ಸಂಬಂಧಿಕರಿಗೆ ಮರಳಿಸಲು ಹೈಕೋರ್ಟ್ ನಕಾರ - JAYALALITHA JEWELRY

ದಿವಂಗತ ಜಯಲಲಿತಾ ಅವರ ಚಿನ್ನಾಭರಣ ಸೇರಿ ಎಲ್ಲ ವಸ್ತುಗಳನ್ನು ಅವರ ಸಂಬಂಧಿಕರ ವಶಕ್ಕೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಹೈಕೋರ್ಟ್, ಜಯಲಲಿತಾ
ಹೈಕೋರ್ಟ್, ಜಯಲಲಿತಾ (ಸಂಗ್ರಹ ಚಿತ್ರ ETV Bharat)
author img

By ETV Bharat Karnataka Team

Published : Jan 13, 2025, 4:02 PM IST

ಬೆಂಗಳೂರು: ಬೆಂಗಳೂರಿನ ವಿಶೇಷ ನ್ಯಾಯಾಲಯದ ವಶದಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಚಿನ್ನಾಭರಣ ಸೇರಿದಂತೆ ಎಲ್ಲ ವಸ್ತುಗಳನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿ ಜಯಲಲಿತಾ ಸಂಬಂಧಿಕರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಆದೇಶದಿಂದ ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ರಾಜ್ಯ ಸರ್ಕಾರವು ತಮಿಳುನಾಡು ಸರ್ಕಾರದಿಂದ ಐದು ಕೋಟಿ ರೂ. ವಿಚಾರಣಾ ವೆಚ್ಚ ಪಡೆಯಬಹುದಾಗಿದೆ. ಜೊತೆಗೆ, ಜಯಲಲಿತಾ ಅವರಿಗೆ ಸೇರಿದ ಎಲ್ಲ ಚಿನ್ನಾಭರಣ, ಉಡುಗೊರೆ ಹಾಗೂ ಪ್ರಕರಣದ ಮತ್ತೊಂದು ಆರೋಪಿ ಜಯಯಲಿತಾ ಆಪ್ತೆ ಶಶಿಕಲಾ ಅವರಿಗೆ ವಿಧಿಸಿದ್ದ ದಂಡದ ಮೊತ್ತವನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವ ಪ್ರಕ್ರಿಯೆಗೆ ಅಡ್ಡಿ ಇಲ್ಲದಂತಾಗಿದೆ.
ಜಯಲಲಿತಾ ಸಂಬಂಧಿಗಳಾದ ಜೆ.ದೀಪಾ ಮತ್ತು ದೀಪಕ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದೆ.

ಅಲ್ಲದೇ, ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಸುಪ್ರೀಂಕೋಟ್ ಎತ್ತಿ ಹಿಡಿದಿದೆ. ಆರೋಪಿ (ಜಯಲಲಿತಾ) ವಿಚಾರಣಾ ಪ್ರಕ್ರಿಯೆ ಪೂರ್ಣಗೊಳ್ಳುವುದಕ್ಕೂ ಮುನ್ನ ಮೃತರಾದ ಹಿನ್ನೆಲೆಯಲ್ಲಿ ಅವರ ವಿರುದ್ಧದ ಶಿಕ್ಷೆಯನ್ನು ರದ್ದು ಮಾಡಲಾಗಿದೆ. ಆದರೆ, ಅವರ ವಿರುದ್ಧ ಆರೋಪವೇ ಇಲ್ಲ ಎಂಬಂತಾಗುವುದಿಲ್ಲ ಎಂದು ಪೀಠ ಹೇಳಿದೆ.

ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಅವಧಿಯಲ್ಲಿನ ವಸ್ತುಗಳನ್ನು ಬಿಟ್ಟು ಇತರ ವಸ್ತುಗಳನ್ನು ಹಿಂದಿರುಗಿಸಲು ಕೋರಲಾಗಿದೆ. ಆದರೆ, ಆ ಅವಧಿಯಲ್ಲಿನ ವಸ್ತುಗಳು ಯಾವುವು ಎಂಬುದಕ್ಕೆ ಸಂಬಂಧಿಸಿದಂತೆ ಸರಿಯಾದ ದಾಖಲೆಗಳನ್ನು ನೀಡಿಲ್ಲ. ಅದಕ್ಕೆ ಸಂಬಂಧಿಸಿದ ವಾದವನ್ನು ಮಾಡಿಲ್ಲ. ಹೀಗಾಗಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಭ್ರಷ್ಟಾಚಾರ ಆರೋಪ ಸಂಬಂಧ ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬರುವ ಮುನ್ನವೇ ಜಯಲಲಿತಾ ಮೃತಪಟ್ಟಿದ್ದರು. ಆದ ಕಾರಣ ಅವರನ್ನು ಆರೋಪ ಮುಕ್ತರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆದ್ದರಿಂದ, ಅರ್ಜಿದಾರರು ಜಯಲಲಿತಾ ಅವರ ಕಾನೂನುಬದ್ಧ ವಾರಸುದಾರರಾಗಿದ್ದು, ಅವರ ಎಲ್ಲ ಚಿನ್ನಾಭರಣಗಳನ್ನು ಅರ್ಜಿದಾರರಿಗೆ ಹಸ್ತಾಂತರ ಮಾಡಬೇಕು ಅರ್ಜಿದಾರರ ಪರ ವಕೀಲರು ಈ ಹಿಂದೆ ವಿಚಾರಣೆ ವೇಳೆ ಕೋರಿದ್ದರು.

ವಿಶೇಷ ನ್ಯಾಯಾಲಯದ ಆದೇಶವೇನು?: ಆರ್‌ಟಿಐ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ನಗರದ 36ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು, 2024ರ ಮಾರ್ಚ್ 6 ಮತ್ತು 7ರಂದು ಜಯಲಲಿತಾ ಅವರ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ದಿನಾಂಕ ನಿಗದಿ ಮಾಡಿದ್ದರು. ಅಲ್ಲದೇ, ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲು ಅಧಿಕೃತ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿ, ತಮಿಳುನಾಡು ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಐಜಿಪಿ ಅವರೊಂದಿಗೆ ಬರಬೇಕು. ಈ ವೇಳೆ ಛಾಯಾಗ್ರಾಹಕರು, ವಿಡಿಯೋಗ್ರಾಫರ್ ಮತ್ತು 6 ದೊಡ್ಡ ಪೆಟ್ಟಿಗೆ (ಟ್ರಂಕ್) ಜೊತೆಗೆ ಅಗತ್ಯ ಭದ್ರತೆಯೊಂದಿಗೆ ಬಂದು ಚಿನ್ನಾಭರಣಗಳನ್ನು ಪಡೆದುಕೊಳ್ಳಬೇಕು. ಈ ಅಂಶವನ್ನು ತಮಿಳುನಾಡು ಡಿವೈಎಸ್‌ಪಿ ಅವರು ತಮಿಳುನಾಡು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಂಬಂಧಿಕರಾದ ಜೆ.ದೀಪಾ ಮತ್ತು ದೀಪಕ್ ಹೈಕೋರ್ಟ್ ಮೆಟ್ಟಿಲೆರಿದ್ದರು.

ಏನೆಲ್ಲಾ ವಸ್ತುಗಳಿವೆ?: 7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರ ಖಚಿತ ಆಭರಣಗಳು, 700 ಕೆಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.

ಇದನ್ನೂ ಓದಿ: ಒಬ್ಬ ವ್ಯಕ್ತಿಯೇ ಆರ್‌ಟಿಐ ಅಡಿ ಸಲ್ಲಿಸಿದ್ದ 9 ಸಾವಿರಕ್ಕೂ ಹೆಚ್ಚು ಅರ್ಜಿ ವಜಾ; ₹9.6 ಲಕ್ಷ ಶುಲ್ಕ ಪಾವತಿಗೆ ಹೈಕೋರ್ಟ್​ ಆದೇಶ

ಇದನ್ನೂ ಓದಿ: ಹೆಣ್ಣಿನ ದೇಹವನ್ನು ಬಣ್ಣಿಸುವುದೂ ಲೈಂಗಿಕ ಕಿರುಕುಳಕ್ಕೆ ಸಮ : ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.