ETV Bharat / state

ಸರ್ಕಾರದ ಹಗರಣಗಳನ್ನು ಸಿಬಿಐಗೆ ವಹಿಸಲು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ - HIGH COURT

ಮುಡಾ ಸೇರಿದಂತೆ ಹಾಲಿ ಮತ್ತು ಹಿಂದಿನ ಸರ್ಕಾರಗಳ ಅವಧಿಯಲ್ಲಿನ ಹಗರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮುಂದೂಡಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 4, 2024, 7:30 PM IST

Updated : Nov 4, 2024, 7:48 PM IST

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಪಿಎಸ್‌ಐ ನೇಮಕಾತಿ ಹಗರಣ, ಶೇ.40 ರಷ್ಟು ಕಮಿಷನ್‌ ಹಗರಣ ಸೇರಿದಂತೆ ಹಾಲಿ ಕಾಂಗ್ರೆಸ್‌ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಮುಂದೂಡಿದೆ.

ಮೈಸೂರಿನ ವಕೀಲ ಸಿ.ಸಂತೋಷ್‌ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಅರ್ಜಿ ಪರಿಶೀಲಿಸಿದಾಗ ಕೇವಲ ಪತ್ರಿಕಾ ವರದಿಗಳನ್ನು ಆಧರಿಸಿ ಸಲ್ಲಿಸಲಾಗಿದೆ ಎಂಬ ಅಂಶ ಗೊತ್ತಾಗಲಿದೆ. ನಿಮ್ಮ ಮನವಿಯನ್ನು ಪುಷ್ಠೀಕರಿಸುವಂತಹ ಯಾವುದೇ ದಾಖಲೆ ಇಲ್ಲ, ಹಾಗಾಗಿ ಅರ್ಜಿ ಮುಂದೂಡಲಾಗುವುದು ಎಂದು ಆದೇಶಿಸಿತು. ಅಲ್ಲದೆ, ನ್ಯಾಯಾಲಯ ಸೂಕ್ತ ದಾಖಲೆಗಳೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ ಎಂದು ಆದೇಶಿಸಿ, ಅದಕ್ಕಾಗಿ ನ್ಯಾಯಾಲಯ ಅರ್ಜಿದಾರರಿಗೆ ಎರಡು ವಾರ ಕಾಲಾವಕಾಶ ನೀಡಿದೆ.

ಅರ್ಜಿಯಲ್ಲಿ ಏನಿತ್ತು? ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಸರ್ಕಾರದ ಹಲವು ಭ್ರಷ್ಟಾಚಾರದ ವಿಚಾರಗಳು ಪ್ರಸ್ತಾಪವಾಗುತ್ತಿವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಭಾರಿ ಹಾನಿ ಆಗಿದೆ. ತಪ್ಪಿತಸ್ಥರನ್ನು ಶಿಕ್ಷಿಸುವಂತಹ ಯಾವುದೇ ತನಿಖೆಗೆ ಸರ್ಕಾರ ಆದೇಶ ನೀಡಿಲ್ಲ. ಜೊತೆಗೆ ತಪ್ಪಿತಸ್ಥ ಅಧಿಕಾರಿಗಳಿಗೆ ಉನ್ನತ ಹುದ್ದೆಗಳನ್ನು ನೀಡಲಾಗುತ್ತಿದೆ. ಸ್ವತಃ ಮುಖ್ಯಮಂತ್ರಿಗಳೂ ಕೂಡ ಸದನದಲ್ಲೇ ಸರ್ಕಾರದ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ. ಹಾಗಾಗಿ ಎಲ್ಲಾ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕಿದೆ ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಅಲ್ಲದೇ, ರಾಜ್ಯದಲ್ಲಿ ನಡೆದಿರುವ ಈ ಸಾರ್ವಜನಿಕ ಹಣ ದುರ್ಬಳಕೆ ತಡೆಯದಿದ್ದರೆ ಅಮಾಯಕ ಜನರಿಗೆ ತೀವ್ರ ನಷ್ಟವಾಗುತ್ತದೆ. ಹಾಗಾಗಿ ರಾಜ್ಯದ ಸಂಪತ್ತು ರಕ್ಷಣೆ ದೃಷ್ಟಿಯಿಂದ ನ್ಯಾಯಾಲಯ ಎಲ್ಲಾ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಿಕೊಡಬೇಕು ಎಂದು ಮನವಿ ಮಾಡಲಾಗಿತ್ತು.

ಅರ್ಜಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮ, ಎಪಿಎಂಸಿ, ಬೋವಿ ಅಭಿವೃದ್ಧಿ ನಿಗಮ, ದೇವರಾಜ ಅರಸ್‌ ಟ್ರಕ್‌ ಟರ್ಮಿನಲ್‌, ಪ್ರವಾಸೋದ್ಯಮ ಇಲಾಖೆ, ಪಿಎಸ್‌ಐ ಹಗರಣ, ಬಿಟ್‌ ಕಾಯಿನ್‌ ಹಗರಣ, ಕೋವಿಡ್‌ ಹಗರಣ ಸೇರಿದಂತೆ ಹಾಲಿ ಸರ್ಕಾರ ಮತ್ತು ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಲವು ಭ್ರಷ್ಟಾಚಾರ ಹಗರಣಗಳನ್ನು ಪ್ರಸ್ತಾಪಿಸಲಾಗಿತ್ತು.

ಇದನ್ನೂ ಓದಿ: ಕೋವಿಡ್​ ವೇಳೆ ಹೆಣಗಳಿಂದಲೂ ಬಸವರಾಜ ಬೊಮ್ಮಾಯಿ ಲಂಚ ಪಡೆದಿದ್ದಾರೆ: ಸಿಎಂ ಸಿದ್ದರಾಮಯ್ಯ

Last Updated : Nov 4, 2024, 7:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.