ETV Bharat / state

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಗೆ ಹೈಕೋರ್ಟ್ ತರಾಟೆ - Harish Poonja Case - HARISH POONJA CASE

ಠಾಣೆ ಮುಂದೆ ಪ್ರತಿಭಟನೆ ಹಾಗೂ ಅವಾಚ್ಯ ಶಬ್ದಗಳಿಂದ ಪೊಲೀಸರನ್ನು ನಿಂದಿಸಿದ್ದ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಹೈಕೋರ್ಟ್​ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

high court
ಶಾಸಕ ಹರೀಶ್ ಪೂಂಜ, ಹೈಕೋರ್ಟ್​ (ETV Bharat)
author img

By ETV Bharat Karnataka Team

Published : May 31, 2024, 12:44 PM IST

ಬೆಂಗಳೂರು: ಪರವಾನಗಿ ಪಡೆಯದೆ, ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪಿತನ ಬಂಧನ ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಶಾಸಕ ಹರೀಶ್ ಪೂಂಜ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಶಾಸಕರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದ್ದಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆದರೆ, ಜನಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?. ಅಲ್ಲದೆ, ಶಾಸಕರು ತಾವು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸ ಮಾಡುವುದಕ್ಕೆ ಮುಂದಾಗುವುದು ಎಷ್ಟು ಸರಿ? ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದರು.

ಅದಕ್ಕಾಗಿ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ, ಕಾನೂನಿನಂತೆ ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಕಾಪಾಡುವುದಕ್ಕೆ ಬಿಡಿ ಎಂದು ಪೀಠ ಸಲಹೆ ನೀಡಿತು. ಮುಂದೊಂದು ದಿನ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನಮ್ಮ ಹಿಂದೆ ಬಂದು ಕೂತರೆ ನಾವೆಲ್ಲರೂ ಹೇಗೆ ಕೆಲಸ ಮಾಡಬೇಕು? ಈ ರೀತಿಯ ವರ್ತನೆಯನ್ನು ಸಹಿಸಲಾಗುವುದಿಲ್ಲ ಎಂದು ಪೀಠ ತಿಳಿಸಿತು.

ಪ್ರಸ್ತುತ ದಿನಗಳಲ್ಲಿ ಪೊಲೀಸರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೇಗೆ ಎಂದು ಪೀಠ ಇದೇ ವೇಳೆ ಪ್ರಶ್ನೆ ಮಾಡಿತು.

ಜನಪ್ರತಿನಿಧಿಯಾದವರು ಯಾವುದೋ ವ್ಯಕ್ತಿಯನ್ನು ಬಂಧಿಸಿದಲ್ಲಿ ಪೊಲೀಸ್ ಠಾಣೆಗೆ ಹೋಗುವುದು ಎಷ್ಟು ಸರಿ. ಭಯೋತ್ಪಾದಕನನ್ನು ಪೊಲೀಸರು ಬಂಧಿಸುತ್ತಾರೆ. ಅವನ ಪತ್ನಿ ಬಂದು ನನ್ನ ಪತಿ ಅತ್ಯುತ್ತಮ ವ್ಯಕ್ತಿಯಾಗಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದರೆ ತಕ್ಷಣ ಜನಪ್ರತಿನಿಧಿ ಪೊಲೀಸ್ ಠಾಣೆಗೆ ಹೋಗಲು ಸಾಧ್ಯವೇ? ನೀವು ಠಾಣೆಗೆ ಹೋಗಬಾರದಾಗಿತ್ತು ಎಂದು ಪೀಠ ತಿಳಿಸಿತು.

ಯಾವುದೇ ವ್ಯಕ್ತಿಯನ್ನು ಬಂಧಿಸಿದಲ್ಲಿ ಕಾನೂನು ಪ್ರಕಾರ ಪ್ರಕ್ರಿಯೆ ನಡೆಸಬೇಕು. ಅದಕ್ಕೆ ಬದಲಾಗಿ ಶಾಸಕರಾದವರು ಠಾಣೆಗೆ ಹೋದರೆ ಪೊಲೀಸರು ತಮ್ಮ ಸೇವೆ ಸಲ್ಲಿಸುವುದಾದರೂ ಹೇಗೆ? ಈ ರೀತಿಯ ಪ್ರಕರಣದಲ್ಲಿ ಯಾವುದೇ ಆರೋಪಿತರ ಪರವಾಗಿ ಆದೇಶ ನೀಡಿರುವ ಭಾರತದ ಯಾವುದೇ ನ್ಯಾಯಾಲಯ ಹಾಗೂ ವಿದೇಶ ನ್ಯಾಯಾಲಯಗಳ ಒಂದೇ ಒಂದು ಉದಾಹರಣೆ ಇದೆಯೇ? ಇದ್ದರೆ ಸಲ್ಲಿಸಿ, ಅದರ ಆಧಾರದಲ್ಲಿ ಮುಂದಿನ ವಿಚಾರಣೆ ನಡೆಸಿ ಆದೇಶಿಸಲಾಗುವುದು ಎಂದು ಪೀಠ ಹೇಳಿತು.

ವಾದ ಆಲಿಸಿದ ಪೀಠ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು. ಅಲ್ಲದೆ, ಮುಂದಿನ ವಿಚಾರಣೆಯವರೆಗೆ ಸಾವಧಾನದಿಂದ ಇರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗಬೇಡಿ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದ ಬಿಜೆಪಿ ಶಾಸಕ ಹರೀಶ್ ಪೂಂಜ; ಸ್ಟೇಷನ್ ಜಾಮೀನಿನಲ್ಲಿ ಬಿಡುಗಡೆ - Harish Poonja Case

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಪ್ರಭುಲಿಂಗ ನಾವಡಗಿ, ''ಬಿಜೆಪಿ ಯುವ ಮೋರ್ಚಾದ ಶಶಿರಾಜ್ ಶೆಟ್ಟಿ ಅವರನ್ನು ಪೊಲೀಸರು ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಂಧಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಈ ಸಂಬಂಧ ಬಂಧಿತನ ಪತ್ನಿ ಅರ್ಜಿದಾರರಿಗೆ ಕರೆ ಮಾಡಿ ವಿಷಯ ತಿಳಿಸಿದರು. ತಕ್ಷಣ ಬೆಳ್ತಂಗಡಿ ಠಾಣೆಗೆ ಬಂದ ಅರ್ಜಿದಾರರು ರಾತ್ರಿ 11.30ಕ್ಕೆ ಭೇಟಿ ನೀಡಿ, ಯಾವ ಕಾರಣಕ್ಕೆ ಎಫ್‌ಐಆರ್ ಆಗಿದೆ ಎಂದು ಪ್ರಶ್ನಿಸಿದರು. ಆಗ ಪೊಲೀಸರು ಸೂಕ್ತ ರೀತಿಯ ಉತ್ತರ ನೀಡಿರಲಿಲ್ಲ. ಆದ ಕಾರಣ ಧ್ವನಿಯನ್ನು ಜೋರು ಮಾಡಿ ಮಾತನಾಡಿದ್ದರು'' ಎಂದು ತಿಳಿಸಿದರು.

ಪ್ರಕರಣದ ಹಿನ್ನೆಲೆ: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದಲ್ಲಿ ಪೊಲೀಸರು ಶಶಿರಾಜ್ ಶೆಟ್ಟಿ ಎಂಬುವರನ್ನು ಬಂಧಿಸಿದ್ದರು. ಇದರಿಂದ ಸಿಟ್ಟಾಗಿದ್ದ ಅರ್ಜಿದಾರರಾದ ಬಿಜೆಪಿ ಶಾಸಕ ಹರೀಶ್ ಪೂಂಜ ಠಾಣೆಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಾಚ್ಯವಾಗಿ ಬೈದು ಬೆದರಿಕೆ ಒಡ್ಡಿದ್ದ ಆರೋಪವಿದೆ. ಅಲ್ಲದೆ, ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಜೊತೆಗೆ, ಪ್ರತಿಭಟನೆ ನಡೆಸಿದ್ದಾರೆಂಬ ಆರೋಪದಲ್ಲಿ ಪೊಲೀಸರು ಎರಡು ಎಫ್‌ಐಆರ್‌ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಶಾಸಕ ಹರೀಶ್ ಪೂಂಜ ಹೈಕೋರ್ಟ್ ಮೆಟ್ಟಿಲೆರಿದ್ದರು.

ಇದನ್ನೂ ಓದಿ: ಎಂಎಲ್ಎ ಅಂತ ಬಂಧಿಸದೇ ಬಿಡೋಕೆ ಆಗುತ್ತಾ: ಹರೀಶ್ ಪೂಂಜ ವಿರುದ್ದ ಸಿಎಂ ಆಕ್ರೋಶ - CM Siddaramaiah

ETV Bharat Logo

Copyright © 2025 Ushodaya Enterprises Pvt. Ltd., All Rights Reserved.