ETV Bharat / state

ಕಾರ್ಕಳದಲ್ಲಿ ಪರಶುರಾಮನ ಪ್ರತಿಮೆಯ ಕಳಪೆ ಕಾಮಗಾರಿಗೆ ಹೈಕೋರ್ಟ್ ತರಾಟೆ - Karkala Parashurama Statue - KARKALA PARASHURAMA STATUE

''ಪರಶುರಾಮ ಪ್ರತಿಮೆ ನಿರ್ಮಾಣಕ್ಕೆ ಕೊಟ್ಟಿರುವ ಹಣ ಯಾರದ್ದು? ಅದು ಜನರ ಹಣ. ಜನರ ಹಣದಲ್ಲಿ ಈ ರೀತಿ ಕಳಪೆ ಕಾಮಗಾರಿ ಮಾಡಲಾಗಿದೆ'' ಎಂದು ಕಾರ್ಕಳ ಕಂಚಿನ ಪರಶುರಾಮ ಪ್ರತಿಮೆ ಕುರಿತಂತೆ ಹೈಕೋರ್ಟ್​ ಗರಂ ಆಯಿತು.

parashurama statue
ಪರಶುರಾಮನ ಪ್ರತಿಮೆ, ಹೈಕೋರ್ಟ್ (ETV Bharat)
author img

By ETV Bharat Karnataka Team

Published : Sep 13, 2024, 8:10 PM IST

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕಂಚಿನ ಪರಶುರಾಮ ಪ್ರತಿಮೆಗೆ ಬದಲಾಗಿ ಹಿತ್ತಾಳೆ, ತಾಮ್ರ ಮತ್ತು ಸತು ಬಳಸಿ ಕಳಪೆ ಕಾಮಗಾರಿ ನಡೆಸಿರುವ ಸಂಬಂಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕಲಾವಿದ ಕೃಷ್ಣ ನಾಯಕ್‌ ಅವರು ತಮ್ಮ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಪ್ರತಿಮೆ ಕುರಿತಂತೆ ಸಾರ್ವಜನಿಕರ ಹಣ ಲೂಟಿ ಮಾಡಲಾಗಿದೆ ಎಂದು ಬೇಸರದಿಂದ ನುಡಿದಿದೆ.

ನ್ಯಾಯಪೀಠ ತರಾಟೆ: ''ಪ್ರತಿಮೆ ನಿರ್ಮಾಣಕ್ಕೆ ಅರ್ಜಿದಾರರಿಗೆ ಕೊಟ್ಟಿರುವ ಹಣ ಯಾರದ್ದು? ನಿಮಗೆ ನೀಡಿರುವ ಹಣ ನಿರ್ಮಿತಿ ಕೇಂದ್ರ ಅಥವಾ ದೂರುದಾರರಿಗೆ ಸೇರಿದ್ದಲ್ಲ. ಅದು ಜನರ ಹಣ. ಜನರ ಹಣದಲ್ಲಿ ಈ ರೀತಿ ಕಳಪೆ ಕಾಮಗಾರಿ ಮಾಡಲಾಗಿದೆ. ಪ್ರತಿಮೆಗೆ ಕಂಚು ಬಳಸುವ ಬದಲು ಹಿತ್ತಾಳೆ ಮತ್ತು ಸತುವನ್ನೇಕೆ ಬಳಸಲಾಗಿದೆ? ಪ್ರತಿಮೆ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆಸಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಲಾಗಿದೆ. 1.83 ಕೋಟಿ ರೂಪಾಯಿ ಪೈಕಿ ಈಗಾಗಲೇ ನಿಮಗೆ 1.20 ಕೋಟಿ ರೂಪಾಯಿ ಪಾವತಿಯಾಗಿದೆ. ಇದು ಸಾರ್ವಜನಿಕರ ಹಣ. ಎಲ್ಲವೂ ದಾಖಲೆಯಲ್ಲಿರುವುದರಿಂದ ಯಾವುದೇ ಸೂಚನೆ ಪಡೆಯುವ ಅಗತ್ಯವೇ ಇಲ್ಲ. ಜನರ ಹಣದ ಜೊತೆ ಆಟ ಆಡುವವರನ್ನು ಬಿಡಲಾಗದು. ಪುಣ್ಯಕ್ಕೆ ಪ್ರತಿಮೆ ಮಾರನೇಯ ದಿನ ಕುಸಿದಿಲ್ಲ. ಅದು ಬೀಳುವ ಮುಂಚೆಯೇ ತೆರವು ಮಾಡಲಾಗಿದೆ'' ಎಂದು ಪೀಠ ಮೌಖಿಕವಾಗಿ ತರಾಟೆಗೆ ತೆಗೆದುಕೊಂಡಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ''ಸೂರತ್ಕಲ್‌ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ) ನೀಡಿರುವ ವರದಿಯ ಪ್ರಕಾರ ಅರ್ಜಿದಾರರು ಪರಶುರಾಮ ಪ್ರತಿಮೆಗೆ ಕಂಚು ಬಳಸಿಲ್ಲ. ಶೇ.80ರಷ್ಟು ಹಿತ್ತಾಳೆ ಮತ್ತು ಶೇ.20ರಷ್ಟು ಸತು ಬಳಕೆ ಮಾಡಿದ್ದಾರೆ ಎಂದು ವರದಿ ನೀಡಿದೆ. ಆದರೆ, ನಿರ್ಮಿತಿ ಕೇಂದ್ರ ಮತ್ತು ಅರ್ಜಿದಾರರು ಕಂಚು ಬಳಕೆ ಮಾಡಿದೆ ಎಂದು ಹೇಳಿದೆ. ಜಿಲ್ಲಾಧಿಕಾರಿ ಪ್ರತಿಮೆ ತೆರವು ಮಾಡಿ ಎಂದು ಆದೇಶ ಮಾಡಿದ್ದಾರೆ. ಈ ಆದೇಶವನ್ನು ನಿರ್ಮಿತಿ ಕೇಂದ್ರವು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ತನಿಖೆ ಪ್ರಗತಿಯಲ್ಲಿರುವುದರಿಂದ ತೆರವು ಮಾಡುವಂತೆ ಆದೇಶಿಸಿದ್ದನ್ನು ತಡೆಯಿರಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ತನಿಖೆ ನಡೆಯಲಿ, ಅರ್ಜಿದಾರರಿಗೂ ಹಣ ತಲುಪಿದೆಯೋ ಗೊತ್ತಿಲ್ಲ. ಅವರ ಪಾತ್ರವೂ ಬಹಿರಂಗವಾಗಬೇಕಿದೆ. ಹೀಗಾಗಿ, ಅರ್ಜಿ ವಜಾಗೊಳಿಸಬೇಕು'' ಎಂದು ಕೋರಿದರು.

ಅರ್ಜಿದಾರರ ಪರ ವಕೀಲರು, ''ಕೆಲಸದ ಭಾಗವಾಗಿ 1.20 ಕೋಟಿ ರೂಪಾಯಿ ಸ್ವೀಕರಿಸಿದ್ದೇವೆ. ನಮ್ಮ ಕೆಲಸವನ್ನು ಪೂರ್ಣಗೊಳಿಸುತ್ತೇವೆ. ಆಮೇಲೆ ಅದನ್ನು ಪರಿಶೀಲಿಸಬಹುದು. ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮ ಪ್ರತಿಮೆ ನಿರ್ಮಾಣವೂ ಒಂದಾಗಿತ್ತು. ಉದ್ಘಾಟನೆಯ ಹಿನ್ನೆಲೆಯಲ್ಲಿ ಬೇಗ ಮಾಡಿ ಮುಗಿಸಲಾಗಿತ್ತು. ಆನಂತರ ಜಿಲ್ಲಾಧಿಕಾರಿಯು ಅದನ್ನು ಪುನರ್‌ ನಿರ್ಮಾಣ ಮಾಡುವಂತೆ ಸೂಚಿಸಿದ್ದಾರೆ. ಈಗ ಸರ್ಕಾರ ಇಡೀ ಪ್ರಕರಣವನ್ನು ತನಿಖೆಗೆ ಒಪ್ಪಿಸಿದ್ದರಿಂದ ಅಲ್ಲಿಗೆ ತೆರಳಿ ಕೆಲಸ ಮಾಡಲಾಗುತ್ತಿಲ್ಲ. ಅವಕಾಶ ನೀಡಿದರೆ ಕಂಚಿನಲ್ಲೇ ಕಾಲಮಿತಿಯಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು'' ಎಂದು ತಿಳಿಸಿದರು.

ಇದನ್ನೂ ಓದಿ: ಮುತಾಲಿಕ್ ವಿರುದ್ದ ಮಾನಹಾನಿಕರ ಹೇಳಿಕೆ ಆರೋಪ: ಸುನೀಲ್ ಕುಮಾರ್ ಮೇಲಿನ ಕೇಸ್ ರದ್ಧತಿಗೆ ಹೈಕೋರ್ಟ್ ನಕಾರ - Sunil Kumar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.